Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಜ್ಞರ ಸಮಿತಿ ವರದಿ ನೀಡಿದರೆ ಸಾಮಾಜಿಕ...

ತಜ್ಞರ ಸಮಿತಿ ವರದಿ ನೀಡಿದರೆ ಸಾಮಾಜಿಕ ಕ್ರಾಂತಿಯಾಗುವ ಸಂಭವ : ಹೈಕೋರ್ಟ್‌ಗೆ ಪಿಐಎಲ್

ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ವಿಚಾರ

ವಾರ್ತಾಭಾರತಿವಾರ್ತಾಭಾರತಿ1 March 2018 10:37 PM IST
share
ತಜ್ಞರ ಸಮಿತಿ ವರದಿ ನೀಡಿದರೆ ಸಾಮಾಜಿಕ ಕ್ರಾಂತಿಯಾಗುವ ಸಂಭವ : ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು, ಮಾ.1: ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ತಜ್ಞರ ಸಮಿತಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ತನ್ನ ವರದಿ ನೀಡುವ ಸಾಧ್ಯತೆ ಇದ್ದು ಸಮಿತಿಯ ಕಾರ್ಯ ನಿರ್ವಹಣೆಗೆ ತಡೆ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದರು.

ಈ ಕುರಿತಂತೆ ಸಲ್ಲಿಸಲಾಗಿರುವ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರ ಶಶಿಧರ ಶ್ಯಾನುಭೋಗ ಪರ ವಕೀಲ ಜಿ.ಆರ್.ಗುರುಮಠ ಈ ಕುರಿತಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈಗಾಗಲೇ ಇದೇ ನ್ಯಾಯಪೀಠ ಮಧ್ಯಂತರ ಆದೇಶ ನೀಡಿದ್ದು, ತಜ್ಞರ ಸಮಿತಿ ಏನೇ ವರದಿ ಕೊಟ್ಟರೂ ಅದು ಈ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರತಕ್ಕದ್ದು ಎಂದು ಆದೇಶಿಸಿದೆಯಲ್ಲಾ ಎಂದು ಹೇಳಿತು.

ಇದಕ್ಕೆ ಗುರುಮಠ, ಸ್ವಾಮಿ, ತಜ್ಞರ ಸಮಿತಿ ವರದಿ ನೀಡಿದರೆ ಸಾಮಾಜಿಕ ಕ್ರಾಂತಿ ಆಗುವ ಸಂಭವವಿದೆ. ಇದೊಂದು ಸರಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ಇದರ ಹಿಂದೆ ನಾಲ್ವರು ಮಂತ್ರಿಗಳು ಇದ್ದಾರೆ ಎಂದರು.

ಈ ಮಾತಿಗೆ ನ್ಯಾಯಮೂರ್ತಿ ಮಾಹೇಶ್ವರಿ, ಯಾರೇ ಇದ್ದರೂ ಅವರು ಕಾನೂನು ಪರಿಧಿಯಲ್ಲೇ ನಡೆಯಬೇಕಲ್ಲವೆ, ಅವರೇನೂ ಎಲ್ಲೂ ಹೋಗುವುದಿಲ್ಲ. ಕಾನೂನು ಸುಪರ್ದಿಯಲ್ಲೇ ಇರುತ್ತಾರಲ್ಲಾ ಏಕೆ ಚಿಂತಿಸುತ್ತೀರಿ ಎಂದರು.

2017ರ ಡಿಸೆಂಬರ್ 22ರಂದು ರಾಜ್ಯ ಅಲ್ಪಸಂಖ್ಯಾತ ಆಯೋಗವು ತಜ್ಞರ ಸಮಿತಿ ರಚನೆಗೆ ಆದೇಶಿಸಿರುವ ಕ್ರಮವನ್ನು ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದ ಶಶಿಧರ ಶ್ಯಾನುಭೋಗ ಪ್ರಶ್ನಿಸಿದ್ದರೆ, ವೀರಶೈವ ಹಾಗೂ ಲಿಂಗಾಯತ ಎರಡೂ ಹಿಂದೂ ಧರ್ಮದ ಭಾಗ. ಇದು ವಿಭಜನೆ ಆಗಲು ಬಿಡಬಾರದು ಎಂದು ಪ್ರತಿಪಾದಿಸಿ ವೀರಶೈವ ಬಣದ ಮುಖಂಡ ಬಿ.ಎಸ್.ನಟರಾಜ್ ಹಾಗೂ ಸತೀಶ್ ಪ್ರತ್ಯೇಕ ಪಿಐಎಲ್ ಸಲ್ಲಿಸಿದ್ದಾರೆ.

ರಾಜ್ಯ ಸರಕಾರ ಆಕ್ಷೇಪಣೆ ಸಲ್ಲಿಸುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X