ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್‌ಗೆ ಚಾಲನೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿಯಲ್ಲಿ ನಿರ್ಮಾಣವಾಗುತ್ತಿರುವ 2000 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸುವ ಏಶ್ಯಾದ ಅತಿದೊಡ್ಡ ಸೋಲಾರ್ ಪಾರ್ಕ್‌ನ ಮೊದಲ ಹಂತದ 600 ಮೆ.ವ್ಯಾಟ್ ಸೋಲಾರ್ ವಿದ್ಯುತ್ ಸರಬರಾಜಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದರು ಸಿಎಂ, 13 ಸಾವಿರ ಎಕರೆ ಪ್ರದೇಶದಲ್ಲಿ ಹರಡಿರುವ ಈ ಸೋಲಾರ್ ವಿದ್ಯುತ್ ಘಟಕ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಸೋಲಾರ್ ಪಾರ್ಕ್ ಆಗಿದ್ದು, ಇದು ವಿಶ್ವದ 7 ಅದ್ಭುತಗಳ ಜೊತೆಗೆ 8ನೇ ಅದ್ಭುತವಾಗಿ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಅಭಿಪ್ರಾಯಪಟ್ಟಿದ್ದಾರೆ.
Next Story





