ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ; 489 ವಿದ್ಯಾರ್ಥಿಗಳು ಗೈರು
ಮಂಗಳೂರು, ಮಾ.1: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಗುರುವಾರ ಆರಂಭಗೊಂಡ ದ್ವಿತೀಯ ಪಿಯುಸಿ ಭೌತಶಾಸ್ತ್ರ ಪರೀಕ್ಷೆಗೆ ಹಾಜರಾದ 16,295 ವಿದ್ಯಾರ್ಥಿಗಳ ಪೈಕಿ 81 ಮಂದಿ ಗೈರು ಹಾಜರಾಗಿದ್ದಾರೆ. ಅರ್ಥಶಾಸ್ತ್ರ ಪರೀಕ್ಷೆಗೆ ಹಾಜರಾದ 19,990 ವಿದ್ಯಾರ್ಥಿಗಳ 400 ಮಂದಿ ಗೈರು ಹಾಜರಾಗಿದ್ದಾರೆ.
ಜಿಲ್ಲೆಯ 54 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಮಾ.17ರವರೆಗೆ 19,567 ಹುಡುಗರು ಮತ್ತು 19,066 ಹುಡುಗಿಯರ ಸಹಿತ ಒಟ್ಟು 38633 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಕಲಾ ವಿಭಾಗದ 4,901, ವಾಣಿಜ್ಯ ವಿಭಾಗದ 17,045, ವಿಜ್ಞಾನ ವಿಭಾಗದ 14,687 ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Next Story





