Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಜೀವಿಜಯ...

ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಜೀವಿಜಯ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ2 March 2018 5:53 PM IST
share
ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಜೀವಿಜಯ ವಿಶ್ವಾಸ

ಮಡಿಕೇರಿ ಮಾ.2: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಕಾಲ ಸಮೀಪಿಸಿದೆ ಎಂದು ಅಭಿಪ್ರಾಯಪಟ್ಟಿರುವ ಜಾತ್ಯತೀತ ಜನತಾದಳದ ಹಿರಿಯ ಮುಖಂಡರಾದ ಬಿ.ಎ.ಜೀವಿಜಯ, ರಾಷ್ಟ್ರೀಯ ಪಕ್ಷಗಳಿಂದ ಭ್ರಮನಿರಸನಗೊಂಡಿರುವ ಜನತೆ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಮೇಲೆ ವಿಶ್ವಾಸವಿಟ್ಟು ಜೆಡಿಎಸ್‍ಗೆ ಬಹುಮತ ನೀಡಲಿದ್ದಾರೆ ಎಂದರು.

ನಗರದ ಚಿಕ್ ಕಾಂಪ್ಲೆಕ್ಸ್ ನಲ್ಲಿ ಜಿಲ್ಲಾ ಜಾತ್ಯತೀತ ಜನತಾದಳದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರ ನಿರೀಕ್ಷೆಗಳಂತೆ ಕುಮಾರಸ್ವಾಮಿಯವರನ್ನು ಅಧಿಕಾರಕ್ಕೆ ತರಲು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು. ಪಕ್ಷದ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಜೆಡಿಎಸ್ ಗೆಲುವಿಗೆ ಸಂಘಟಿತವಾಗಿ ಪ್ರಯತ್ನಶೀಲರಾಗಬೇಕೆಂದು ಕರೆ ನೀಡಿದರು.

ಚುನಾವಣೆಯ ಹೊಸ್ತಿಲಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಕುಮಾರಸ್ವಾಮಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ. ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿದ್ದು, ಅವುಗಳ ಬಗೆಹರಿಕೆಗೆ ಕಾನೂನುಗಳನ್ನು ರೂಪಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದುಕೊಂಡಿದ್ದರೂ, ಅಧಿಕಾರಿಶಾಹಿಗಳು ಅದರ ಅನುಷ್ಟಾನಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದ ಜೀವಿಜಯ, ಇಂತಹ ಅಧಿಕಾರಶಾಹಿ ವರ್ತನೆಗೆ ಮುಂಬರುವ ದಿನಗಳಲ್ಲಿ ಕುಮಾರಸ್ವಾಮಿ ಅವರ ನೇತೃತ್ವದ ಆಡಳಿತದಲ್ಲಿ ‘ಅಂಕುಶ’ ಬೀಳಲಿದೆ ಎಂದರು.

ತಮ್ಮ ಪಕ್ಷಕ್ಕೆ ಅಧಿಕಾರವನ್ನು ನೀಡಿದಲ್ಲಿ ರಾಜ್ಯದ ಬೊಕ್ಕಸಕ್ಕೆ ಬರುವ ಹಣವನ್ನು ಜನರ ಕಲ್ಯಾಣಕ್ಕೆ ಸದ್ವಿನಿಯೋಗಪಡಿಸುವ ಕಾರ್ಯಯೋಜನೆಗಳು ಅನುಷ್ಟಾನಗೊಳ್ಳುವ ವಿಶ್ವಾಸವಿದೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಜಾತ್ಯತೀತ ಜನತಾದಳ ಕೇವಲ ಚುನಾವಣೆ ಆಧಾರಿತ ಪಕ್ಷವಲ್ಲ. ಶ್ರೀಸಾಮಾನ್ಯರ, ರೈತಾಪಿ ವರ್ಗದ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ಕಣ್ಣೀರನ್ನು ಒರೆಸುವ ಕಾರ್ಯವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದು, ಅದು ಚುನಾವಣೆ ಇದ್ದರು ಇಲ್ಲದಿದ್ದರು ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಮುಂದಿನ 67 ದಿನಗಳ ಅವಧಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಹಾಗೂ ಬಿ.ಎ. ಜೀವಿಜಯ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೊರಹೊಮ್ಮುವ ವಿಶ್ವಾಸ ವ್ಯಕ್ತಪಡಿಸಿದರು.

ವೀರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಸಮಸ್ಯೆಗಳು ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತದ ಅವಧಿಯಲ್ಲಿ ಬಗೆಹರಿದಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ನಿಷ್ಕ್ರೀಯವಾಗಿದ್ದರೆ, ಇಲ್ಲಿನ ಶಾಸಕರು ಸಮಸ್ಯೆ ಬಗೆಹರಿಕೆಸುವಲ್ಲಿ ವಿಫಲರಾಗಿದ್ದಾರೆ. ಈ ಎಲ್ಲಾ ಕಾರಣಗಳಿಂದ ಜನತೆ ಕುಮಾರಸ್ವಾಮಿ ಅವರನ್ನು ಅಧಿಕಾರಕ್ಕೆ ತರಲು, ಜೆಡಿಎಸ್‍ಗೆ ಮತಹಾಕಲು ನಿರ್ಧರಿಸಿದ್ದಾರೆಂದು ತಿಳಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಸೂರು ಸತೀಶ್ ಮಾತನಾಡಿ, ಚುನಾವಣೆ ಸಮೀಪಿಸುತ್ತಿರುವ ಹಂತದಲ್ಲಿ ರಾಷ್ಟ್ರೀಯ ಪಕ್ಷಗಳು ಪಾದಯಾತ್ರೆ, ಜಾಥ ಮಾಡಲು ಮುಂದಾಗಿರುವುದನ್ನು ಟೀಕಿಸಿದರು. ತಾವು ಗೆಲ್ಲುವುದಿಲ್ಲ ಎನ್ನುವ ಭಯದಿಂದ ಜನರಲ್ಲಿ ಗೊಂದಲ ಮೂಡಿಸಿ ಗೆಲ್ಲುವ ಪ್ರಯತ್ನಕ್ಕೆ ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ. ಆದರೆ, ಅದು ಹಗಲು ಕನಸು ಎಂದು ವ್ಯಂಗ್ಯವಾಡಿದರು. 

ಕಾರ್ಯಕ್ರಮದಲ್ಲಿ ನಗರ ಜೆಡಿಎಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪಕ್ಷದ ಪ್ರಮುಖರಾದ ಎಸ್.ಎನ್.ರಾಜಾರಾವ್, ಡಾ. ಯಾಲದಾಳು ಮನೋಜ್ ಬೋಪಯ್ಯ, ಕೆ.ಎಂ. ಗಣೇಶ್, ಲೀಲಾ ಶೇಷಮ್ಮ, ಸಂಗೀತ ಪ್ರಸನ್ನ, ಇಸಾಕ್ ಖಾನ್, ಜಾಷೀರ್ ಮೊದಲಾದವರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X