Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾ.ಪಂ.ನೌಕರರಿಗೆ ಸರಕಾರದಿಂದಲೇ ವೇತನ:...

ಗ್ರಾ.ಪಂ.ನೌಕರರಿಗೆ ಸರಕಾರದಿಂದಲೇ ವೇತನ: ಸಚಿವ ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ2 March 2018 6:28 PM IST
share
ಗ್ರಾ.ಪಂ.ನೌಕರರಿಗೆ ಸರಕಾರದಿಂದಲೇ ವೇತನ: ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಮಾ. 2: ರಾಜ್ಯದ ಗ್ರಾಮ ಪಂಚಾಯತ್ ಎಲ್ಲ ನೌಕರರ ವೇತನವನ್ನು ಸರಕಾರವೇ ಪಾವತಿಸಲು ತೀರ್ಮಾನಿಸಿದ್ದು, ಮಾ.1ರಿಂದಲೇ ನೌಕರರಿಗೆ ವೇತನ ಪಾವತಿ ಆರಂಭಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 6024 ಗ್ರಾ.ಪಂ.ಗಳ 50,114 ಮಂದಿ ನೌಕರರಿಗೆ ಪ್ರಯೋಜನವಾಗಲಿದೆ. ಇದರಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 736 ಕೋಟಿ ರೂ. ಹೊರೆಯಾಗಲಿದೆ ಎಂದು ಹೇಳಿದರು.

ನೌಕರರಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ವೇತನ ಪಾವತಿಯಾಗದೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವುದನ್ನು ಮನಗಂಡು ರಾಜ್ಯ ಸರಕಾರದಿಂದಲೇ ವೇತನ ಪಾವತಿಸಲು ನಿರ್ಧರಿಸಲಾಗಿದೆ ಎಂದ ಅವರು, ಕುಡಿಯುವ ನೀರು, ನೈರ್ಮಲ್ಯ, ಸಂಪನ್ಮೂಲ ಸಂಗ್ರಹಣೆ, ಕೇಂದ್ರ-ರಾಜ್ಯ ಸರಕಾರಗಳ ಯೋಜನೆಗಳ ಅನುಷ್ಠಾನದಲ್ಲಿ ಗ್ರಾ.ಪಂ.ನೌಕರರ ಪಾತ್ರ ಮಹತ್ವದ್ದು ಎಂದು ಶ್ಲಾಘಿಸಿದರು.

ಗ್ರಾ.ಪಂ.ಪಿಡಿಒ ಹೊರತುಪಡಿಸಿ ಗುಮಾಸ್ತ, ಬಿಲ್ ಕಲೆಕ್ಟರ್, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್, ವಾಟರ್‌ಮೆನ್, ಮೆಕ್ಯಾನಿಕ್, ಸ್ವಚ್ಛತಾಗಾರರಾಗಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಈ ನೂತನ ಸೌಲಭ್ಯ ದೊರೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಗ್ರಾ.ಪಂ.ನೌಕರರಿಗೆ ನಿಗದಿತ ಅವಧಿಯೊಳಗೆ ಕನಿಷ್ಠ ವೇತನ ದೊರಕದೆ ಜೀವನ ನಿರ್ವಹಣೆ ಕಷ್ಟವಾಗಿರುವುದನ್ನು ಅರಿತು ಸರಕಾರದಿಂದಲೇ ವೇತನ ನೀಡಲು ತೀರ್ಮಾನಿಸಿದ್ದು, ಇಲಾಖೆಯ ಪಂಚತಂತ್ರ ತಂತ್ರಾಂಶದಲ್ಲಿ ಮಾನವ ಸಂಪನ್ಮೂಲ, ಗಣಕೀಕೃತ, ನಿರ್ವಹಣಾ ವ್ಯವಸ್ಥೆ ಜಾರಿ ಮೂಲಕ ವೇತನ ಪಾವತಿ ಸಂಬಂಧ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು.

2014ರ ಸೆಪ್ಟೆಂಬರ್ 10ರಂದು ಗ್ರಾ.ಪಂ.ನೌಕರರನ್ನು ಸಕ್ರಮಗೊಳಿಸಲಾಗಿತ್ತು. ಕನಿಷ್ಠ ವೇತನ, ಸೇವಾ ಭದ್ರತೆ, ನಿವೃತ್ತಿ ಉಪದಾನಗಳಂತಹ ಪ್ರಮುಖ ಶಾಸನಬದ್ಧ ನಿಯಮಗಳಿಂದ ವಂಚಿತರಾಗಿರುವುದನ್ನು ತಿಳಿದು ಅವರ ಸೇವೆಯನ್ನು ಸಕ್ರಮಗೊಳಿಸಲಾಗಿತ್ತು. ಆದರೂ ಕಾಲಕಾಲಕ್ಕೆ ಪಂಚಾಯತ್ ನಿಂದ ವೇತನ ಪಾವತಿ ಆಗುತ್ತಿರಲಿಲ್ಲ. ರಾಜ್ಯ ಸರಕಾರದಿಂದ ವೇತನ ಪಾವತಿಸಲು ಮಂಜೂರಾತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುವೆ ಎಂದ ಅವರು, ಗ್ರಾಪಂ ನೌಕರರು ಇನ್ನು ಮುಂದೆ ಹೆಚ್ಚು ಬದ್ಧತೆ, ಶಿಸ್ತಿನಿಂದ ಕೆಲಸ ಮಾಡಬೇಕೆಂದು ಇದೇ ವೇಳೆ ಕಿವಿಮಾತು ಹೇಳಿದರು.

ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರದಲ್ಲಿ ರಾಜ್ಯ ಸರಕಾರ ಮೊದಲ ಸ್ಥಾನದಲ್ಲಿದೆ. ಶೌಚಾಲಯದ ನಿರ್ಮಾಣದಲ್ಲೂ ಶೇ.90ರಷ್ಟು ಪ್ರಗತಿ ಸಾಧಿಸಿದೆ ಎಂದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಮಾ.5ಕ್ಕೆ ನೇಮಕಾತಿ ಆದೇಶ:
‘ನೂತನವಾಗಿ ನೇಮಕಗೊಂಡಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಗ್ರಾ.ಪಂ.ಕಾರ್ಯದರ್ಶಿಗಳಿಗೆ ಮಾ.5ರಂದು ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಜ್ಞಾವಿಧಿ ಬೋಧಿಸಿ ನೇಮಕಾತಿ ಆದೇಶ ನೀಡಲಾಗುವುದು. ಪಿಡಿಒ-815, ಗ್ರಾ.ಪಂ.ಕಾರ್ಯದರ್ಶಿ-850 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ’
-ಎಚ್.ಕೆ.ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X