Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಆರೋಗ್ಯ ಕರ್ನಾಟಕ' ಯೋಜನೆಗೆ ಮೊಹಮ್ಮದ್...

'ಆರೋಗ್ಯ ಕರ್ನಾಟಕ' ಯೋಜನೆಗೆ ಮೊಹಮ್ಮದ್ ಸಲಾಂ ರಚಿಸಿದ ಲಾಂಛನ ಆಯ್ಕೆ

ದೇಶದಲ್ಲೇ ಪ್ರಪ್ರಥಮ ಸಾರ್ವತ್ರಿಕ ಆರೋಗ್ಯ ಯೋಜನೆಗೆ ನೆಲ್ಯಾಡಿಯ ಯುವಕನಿಂದ ಲೋಗೋ

ವಾರ್ತಾಭಾರತಿವಾರ್ತಾಭಾರತಿ2 March 2018 9:51 PM IST
share
ಆರೋಗ್ಯ ಕರ್ನಾಟಕ ಯೋಜನೆಗೆ ಮೊಹಮ್ಮದ್ ಸಲಾಂ ರಚಿಸಿದ ಲಾಂಛನ ಆಯ್ಕೆ

ಬೆಂಗಳೂರು, ಮಾ.2: ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರಕಾರ ಜಾರಿಗೆ ತಂದಿರುವ ವಿನೂತನ ಯೋಜನೆ 'ಆರೋಗ್ಯ ಕರ್ನಾಟಕ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು. ದೇಶದಲ್ಲೇ ಪ್ರಪ್ರಥಮ ಸಾರ್ವತ್ರಿಕ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ವಿಶೇಷ ಯೋಜನೆಗೆ ಲಾಂಛನವನ್ನು ರಚಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಯುವ ಡಿಸೈನರ್ ಮೊಹಮ್ಮದ್ ಸಲಾಂ. 

ಯೋಜನೆಗೆ ಲಾಂಛನ ರಚಿಸಿ ಕೊಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಹ್ವಾನ ನೀಡಿತ್ತು. ಇದನ್ನು ಗಮನಿಸಿದ ಸಲಾಂ ಲಾಂಛನ ರಚಿಸಿ ಕಳಿಸಿದ್ದರು. ಇದೀಗ ಸಲಾಂ ರಚಿಸಿದ ಲಾಂಛನವೇ ಆಯ್ಕೆಯಾಗಿ ಶುಕ್ರವಾರ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅನಾವರಣಗೊಂಡಿದೆ. 'ವಾರ್ತಾ ಭಾರತಿ' ದೈನಿಕದಲ್ಲಿ ಜಾಹೀರಾತು ವಿಭಾಗದ ಡಿಸೈನರ್ ಆಗಿದ್ದ ಸಲಾಂ ಇತ್ತೀಚಿಗೆ ದುಬೈಗೆ ತೆರಳಿ ಅಲ್ಲಿ 'ಅಲ್ ಸನಾ ಅಡ್ವರ್ಟೈಸಿಂಗ್ ಗಿಫ್ಟ್ಸ್' ಎಂಬ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದರು. ಅಲ್ಲಿಂದಲೇ ಅವರು ಮಾಡಿ ಕಳಿಸಿದ ಲೋಗೋ ಸರ್ಕಾರದ ಪ್ರತಿಷ್ಠಿತ ಯೋಜನೆಯ ಅಧಿಕೃತ ಲಾಂಛನವಾಗಿ ಆಯ್ಕೆಯಾಗಿರುವುದು ಅವರಿಗೆ ಬಹಳ ಖುಷಿ ನೀಡಿದೆ. ಇದಕ್ಕಾಗಿ ಸರಕಾರದಿಂದ ಅವರಿಗೆ ಸುಮಾರು 50,000 ರೂ. ಬಹುಮಾನವೂ ಸಿಗಲಿದೆ. 

ಈ ಬಗ್ಗೆ 'ವಾರ್ತಾ ಭಾರತಿ' ಜೊತೆ ಮಾತನಾಡಿದ ಸಲಾಂ ಹೇಳಿದ್ದು ಇಲ್ಲಿದೆ: "ಸಾರ್ವತ್ರಿಕ ಆರೋಗ್ಯ ಸೇವೆ ನೀಡುವ ಯೋಜನೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರಕಾರಕ್ಕೆ ಅಭಿನಂದನೆಗಳು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ನೂತನ ಯೋಜನೆ 'ಆರೋಗ್ಯ ಕರ್ನಾಟಕ'ಕ್ಕೆ ಸರಕಾರದ ಆಹ್ವಾನದಂತೆ ನಾನು ಒಂದು ಲಾಂಛನ (ಲೋಗೊ) ವಿನ್ಯಾಸ ಮಾಡಿ ಕಳಿಸಿದ್ದೆ. ಆ ಲೋಗೋ ಸರಕಾರದ ಯೋಜನೆಯ ಅಧಿಕೃತ ಲೋಗೋ ಆಗಿ ಆಯ್ಕೆಯಾಗಿರುವುದು ನನಗೆ ಬಹಳ ಖುಷಿ ತಂದಿದೆ. ಕೋಟ್ಯಂತರ ಜನರಿಗೆ ಉಪಕಾರವಾಗುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಈ ಯೋಜನೆಯಲ್ಲಿ ನನ್ನದೂ ಒಂದು ಪುಟ್ಟ ಪಾಲು ಇದೆ ಎಂಬುದೇ ನನಗೆ ಅತ್ಯಂತ ಹೆಮ್ಮೆ. ನಾನು ರಚಿಸಿರುವ ಈ ಲಾಂಛನದಲ್ಲಿ ರಾಜ್ಯವನ್ನು ಪ್ರತಿನಿಧಿಸಲು ರಾಜ್ಯದ ಭೂಪಟವನ್ನು ಹಿನ್ನೆಲೆಯಲ್ಲಿ ಬಳಸಿದ್ದೇನೆ. ಆರೋಗ್ಯ ಇಲಾಖೆಯನ್ನು ಮಾತೃ ಸ್ವರೂಪದಲ್ಲಿ ಚಿತ್ರಿಸಿದ್ದೇನೆ. ರಾಜ್ಯದ ಸರ್ವರನ್ನು ಆರೈಕೆ ಮಾಡುವ ತಾಯಿಯಾಗಿ ಆರೋಗ್ಯ ಇಲಾಖೆಯನ್ನು ಬಿಂಬಿಸಿದ್ದೇನೆ. ಆರೋಗ್ಯ ಇಲಾಖೆ ಎಂಬ ತಾಯಿ ನಮ್ಮಲ್ಲರನ್ನು ಹೊತ್ತುಕೊಂಡು ಕಾಯುವಂತೆ, ಆ ಹಾರೈಕೆಯಲ್ಲಿ ಜನಸಾಮಾನ್ಯರು ಸಂತಸದಲ್ಲಿರುವುದನ್ನು ಹೂಗಳಂತೆ ಬಿಂಬಿಸಿದ್ದೇನೆ. ನನ್ನ ನೆಚ್ಚಿನ ಕರ್ನಾಟಕ, ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಸದಾ ಸರ್ವ ಜನಾಂಗದ ಶಾಂತಿಯ ತೋಟವಾಗಿ ಎಲ್ಲರನ್ನೂ ಪೊರೆಯುವ , ಆರೈಕೆ ಮಾಡುವ ಕರ್ನಾಟಕವಾಗಲಿ ಎಂದು ಆಶಿಸುತ್ತೇನೆ. ಪ್ರತಿಯೊಬ್ಬ ಕನ್ನಡಿಗನೂ ರಾಜ್ಯ ಸರಕಾರದ ಎಲ್ಲ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಸರಕಾರದ ಜೊತೆ ಕೈಜೋಡಿಸಬೇಕಾಗಿದೆ. ಈ ನಿಟ್ಟಿನಲ್ಲಿ  ಒಬ್ಬ  ಜವಾಬ್ದಾರಿಯುತ , ಪ್ರಜ್ಞಾವಂತ ಕನ್ನಡಿಗನಾಗಿ ನನ್ನ ಪಾಲಿನ ಕೊಡುಗೆ ನೀಡಲು ನಾನು ಸದಾ ಸಿದ್ಧ.  ಈ ಅವಕಾಶಕ್ಕಾಗಿ ಕರ್ನಾಟಕ ಸರಕಾರಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು". 

ನೆಲ್ಯಾಡಿಯ ದಿವಂಗತ ಅಬ್ದುಲ್ಲಾ ಹಾಗು ನಫೀಸ ದಂಪತಿಯ ಪುತ್ರ ಮೊಹಮ್ಮದ್ ಸಲಾಂ ಗ್ರಾಫಿಕ್ ಡಿಸೈನ್ ನಲ್ಲಿ ಡಿಪ್ಲೋಮ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X