ಉಡುಪಿ; ಇಲಾಖಾಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರ

ಉಡುಪಿ, ಮಾ.2: ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಆಯೋಜಿಸಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಅವರು ಕಾರ್ಯಾಗಾರದ ಆಯೋಜನೆಯ ಅಗತ್ಯವನ್ನು ವಿವರಿಸಿದರಲ್ಲದೆ ಆರೋಗ್ಯದ ಬಗ್ಗೆ ವಹಿಸಬೇಕಾದ ಕಾಳಜಿಯ ಬಗ್ಗೆ ವಿವರಿಸಿದರು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮ, ರಾಷ್ಟ್ರೀಯ ಕಿವುಡುತನ ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸಮಗ್ರ ರೋಗಗಳ ಕಣ್ಗಾವಲು ಯೋಜನೆ, ರಾಷ್ಟ್ರೀಯ ಕುಷ್ಟರೋಗ ನಿವಾರಣಾ ಕಾರ್ಯಕ್ರಮಗಳ ಕುರಿತು ಡಾ.ರೋಹಿಣಿ ಹಾಗೂ ಇತರ ಅಧಿಕಾರಿಗಳು ಮಾಹಿತಿಗಳನ್ನು ನೀಡಿದರು.
ಅಲ್ಲದೇ ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣಾ ಕಾರ್ಯಕ್ರಮ, ಏಡ್ಸ್ ನಿಯಂತ್ರಣ ಕಾರ್ಯಕ್ರಮ, ಜಿಲ್ಲಾ ಆಯುಷ್ ಕಾರ್ಯಕ್ರಮ, ಆಶಾ, ಕಾಯಕಲ್ಪ, ಮಾಹಿತಿ ಶಿಕ್ಷಣ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ, ಸುವರ್ಣ ಆರೋಗ್ಯ ಚೈತನ್ಯ, ಜಿಲ್ಲಾ 108 ಆಂಬುಲೆನ್ಸ್ ಬಗ್ಗೆ ಸಹ ವಿಇಧ ಇಲಾಖೆಗಳ ಅಧಿಕಾರಿಗಳಿಗೆ ಮಹಿತಿ ನೀಡಲಾಯಿತು.





