Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೌಶಲ್ಯ ಭಾಗ್ಯ ಯೋಜನೆಯಡಿ 3950...

ಕೌಶಲ್ಯ ಭಾಗ್ಯ ಯೋಜನೆಯಡಿ 3950 ಅಭ್ಯರ್ಥಿಗಳಿಗೆ ತರಬೇತಿ: ಡಾ.ಲೋಕೇಶ್

ವಾರ್ತಾಭಾರತಿವಾರ್ತಾಭಾರತಿ2 March 2018 10:53 PM IST
share
ಕೌಶಲ್ಯ ಭಾಗ್ಯ ಯೋಜನೆಯಡಿ 3950 ಅಭ್ಯರ್ಥಿಗಳಿಗೆ ತರಬೇತಿ: ಡಾ.ಲೋಕೇಶ್

ಶಿವಮೊಗ್ಗ,ಮಾ.2: ಕೌಶಲ್ಯ ಭಾಗ್ಯ ಯೋಜನೆಯಡಿ ಆಯ್ಕೆಯಾಗಿರುವ ಜಿಲ್ಲೆಯ 3950 ಅಭ್ಯರ್ಥಿಗಳಿಗೆ ಮಾರ್ಚ್ 8ರಿಂದ 10ರವರೆಗೆ ಮೂರು ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ತಿಳಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೌಶಲ್ಯ ತರಬೇತಿ ನೀಡುವ ಕುರಿತಾಗಿ ಕರೆಯಲಾಗಿದ್ದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆಗಳನ್ನು ನೀಡಿದರು. ಫೆಬ್ರವರಿ 8ರಿಂದ 10ರವರೆಗೆ ಜಿಲ್ಲೆಯ ಎಲ್ಲಾ ಐಟಿಐಗಳಲ್ಲಿ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಲಿದೆ. ಈ ತರಬೇತಿ ಕಾರ್ಯಕ್ರಮದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್, ಸಾಫ್ಟ್ ಸ್ಕಿಲ್ ತರಬೇತಿ, ಓರಿಯೆಂಟೇಶನ್ ನೀಡಲಾಗುವುದು. ಕಾರ್ಯಕ್ರಮದ ಅನುಷ್ಟಾನಕ್ಕಾಗಿ ಮೂರು ಸಂಸ್ಥೆಗಳನ್ನು ಸರ್ಕಾರ ಗುರುತಿಸಿದ್ದು, ಅವರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕೌಶಲ್ಯ ಭಾಗ್ಯ ಯೋಜನೆಯಡಿ ಅಭ್ಯರ್ಥಿಗಳ ಶೈಕ್ಷಣಿಕ ಹಿನ್ನೆಲೆ ಇತ್ಯಾದಿಗಳನ್ನು ಗಮನಿಸಿ ಸೂಕ್ತ ಉದ್ಯೋಗ ಕೌಶಲ್ಯ ನೀಡಿ ಅವರನ್ನು ಉದ್ಯೋಗಾರ್ಹಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೆ ಸುಮಾರು 18ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕೌಶಲ್ಯ ತರಬೇತಿಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಮಾರ್ಚ್ 17ರಂದು ಚಿತ್ರದುರ್ಗದಲ್ಲಿ ವಿಭಾಗ ಮಟ್ಟದ ಉದ್ಯೋಗ ಮೇಳ ನಡೆಯುತ್ತಿದ್ದು, ಈ ಮೇಳದಲ್ಲಿ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅಭ್ಯರ್ಥಿಗಳನ್ನು ಅವರಿಗೆ ಸೂಕ್ತವಾದ ಕ್ಷೇತ್ರದಲ್ಲಿ ವೃತ್ತಿ ಕೌಶಲ್ಯ ನೀಡಬೇಕಾಗಿದೆ ಎಂದು ಅವರು ಹೇಳಿದರು. ಕಾರ್ಯಾಗಾರವನ್ನು ಬ್ಯಾಚ್‍ಗಳಲ್ಲಿ ನಿರ್ವಹಿಸಬೇಕು. ಕೊಠಡಿಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಕಾಲೇಜಿನಲ್ಲಿ ಶೌಚಾಲಯವನ್ನು ಸುಸ್ಥಿತಿಯಲ್ಲಿಡಬೇಕು ಎಂದು ಸೂಚನೆ ನೀಡಿದರು.

ಆಶಾದೀಪ ಕಾರ್ಯಕ್ರಮ: ಕೌಶಲ್ಯ ಭಾಗ್ಯ ಯೋಜನೆಯಡಿ ತರಬೇತಿ ಪಡೆದು ಉದ್ಯೋಗ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಇಎಸ್‍ಐ ಮತ್ತು ಪಿಎಫ್ ಮೊತ್ತವನ್ನು ಎರಡು ವರ್ಷಗಳ ಕಾಲ ಸರ್ಕಾರ ಭರಿಸಲಿದೆ. ಕೌಶಲ್ಯ ಭಾಗ್ಯ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳ ಉದ್ಯೋಗ ಸಾಧ್ಯತೆಯನ್ನು ಹೆಚ್ಚಿಸಲು ಹಾಗೂ ಕಂಪೆನಿಗಳಿಗೆ ಈ ನಿಟ್ಟಿನಲ್ಲಿ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು
ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ ಅವರು ತಿಳಿಸಿದರು.

ಜಿಲ್ಲಾ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಅಧಿಕಾರಿ ಖಲಂದರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸಭೆಯಲ್ಲಿ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X