ಕಾವೇರಿ ಜಲ ವಿವಾದ: ಮಾ.8ಕ್ಕೆ ಸಮಾಲೋಚನಾ ಸಭೆ
ಬೆಂಗಳೂರು, ಮಾ. 4: ಕಾವೇರಿ ಜಲ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಫೆ.16ರಂದು ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಲು ಮಾ.8ಕ್ಕೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಮಂಡಲ ಉಭಯ ವಿಪಕ್ಷ ನಾಯಕರು, ಕಾವೇರಿ ಜಲಾನಯನ ಪ್ರದೇಶದ ಶಾಸಕರು, ಸಂಸದರ ಸಭೆ ಕರೆಯಲಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾ.8ರ ಸಂಜೆ 4ಗಂಟೆಗೆ ನಡೆಯಲಿರುವ ಸಭೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ನೀರಾವರಿ ಸಚಿವ ಎಂ.ಬಿ. ಪಾಟೀಲ್, ಕಾನೂನು ಸಚಿವ ಟಿ.ಬಿ.ಜಯಚಂದ್ರ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
Next Story





