Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ವಿ.ಶಂಕರಗೌಡ ಆಧುನಿಕ ಮಂಡ್ಯದ ಶಿಲ್ಪಿ:...

ಕೆ.ವಿ.ಶಂಕರಗೌಡ ಆಧುನಿಕ ಮಂಡ್ಯದ ಶಿಲ್ಪಿ: ಪ್ರೊ.ಸಿದ್ದರಾಜು ಆಲಕೆರೆ

ವಾರ್ತಾಭಾರತಿವಾರ್ತಾಭಾರತಿ4 March 2018 8:59 PM IST
share
ಕೆ.ವಿ.ಶಂಕರಗೌಡ ಆಧುನಿಕ ಮಂಡ್ಯದ ಶಿಲ್ಪಿ: ಪ್ರೊ.ಸಿದ್ದರಾಜು ಆಲಕೆರೆ

ಮಂಡ್ಯ, ಮಾ.4: ಕೆ.ವಿ.ಶಂಕರಗೌಡರು (ಕೆವಿಎಸ್) ಆಧುನಿಕ ಮಂಡ್ಯವನ್ನು ನಿರ್ಮಿಸಿದ ಶಿಲ್ಪಿಯಾಗಿದ್ದಾರೆ ಎಂದು ಜಿಲ್ಲಾ ಜಾಗೃತ ಅಂಕಣಕಾರರ ವೇದಿಕೆಯ ಅಧ್ಯಕ್ಷ ಪ್ರೊ.ಸಿ.ಸಿದ್ದರಾಜು ಆಲಕೆರೆ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಜಾಗೃತ ಅಂಕಣಕಾರರ ವೇದಿಕೆ ವತಿಯಿಂದ ಕೆ.ವಿ.ಶಂಕರಗೌಡ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ ಪಿ.ಇ.ಎಸ್ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಕೆವಿಎಸ್ ಪ್ರತಿಮೆಗೆ ರವಿವಾರ ಮಾಲಾರ್ಪಣೆ ಮಾಡಿ ಮಾತನಾಡಿದರು.

ಕನ್ನಂಬಾಡಿ ಕಟ್ಟೆ ನಿರ್ಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಕಾರಣಕರ್ತರಾಗಿ ಮಂಡ್ಯವನ್ನು ಜಿಲ್ಲೆಯನ್ನಾಗಿ ಮಾಡಿ ಮಂಡ್ಯದ ನಿರ್ಮಾಪಕರು ಎನಿಸಿಕೊಂಡರು ಎಂದು ಅವರು ಸ್ಮರಿಸಿದರು. ನಂತರ, ಕೆ.ವಿ.ಶಂಕರಗೌಡರು ದೇಶಕ್ಕೆ ಮಾದರಿಯಾದ ರೈತರ ಸೊಸೈಟಿ ಕಟ್ಟಡ, ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯ, ಜಿಲ್ಲಾ ಸಹಕಾರ ಬ್ಯಾಂಕ್, ಪಿಇಎಸ್  ಶಿಕ್ಷಣ ಸಂಸ್ಥೆ ಸ್ಥಾಪಿಸಿ ಆಧುನಿಕ ಮಂಡ್ಯದ ಶಿಲ್ಪಿಯಾದರು ಎಂದು ಅವರು ಹೇಳಿದರು.

ಕೆವಿಎಸ್ ಸ್ಥಾಪಿಸಿದ ಸಂಸ್ಥೆಗಳು ಜಿಲ್ಲೆಯ ರೈತಾಪಿ ಮಕ್ಕಳ ಆರ್ಥಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿ ಅವರ ಬಾಳು ಹಸನಾಗಲು ಕಾರಣವಾಗಿವೆ. ಸಾಂಸ್ಕೃತಿಕ ರಾಜಕಾರಣಿಯಾಗಿದ್ದ ಶಂಕರಗೌಡರು ರಾಜಕೀಯ ಮುತ್ಸದ್ಧಿಯಾಗಿದ್ದರು ಎಂದು ಅವರು ತಿಳಿಸಿದರು.

ಶಿಕ್ಷಣ ಸಚಿವರಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ಜಾರಿಗೆ ತಂದು ಸಚಿವ ಸ್ಥಾನಕ್ಕೊಂದು ಗೌರವ ತಂದುಕೊಟ್ಟು ಕುವೆಂಪುರವರಿಂದ ನಿತ್ಯ ಸಚಿವ ಎನಿಸಿಕೊಂಡರು. ತಮ್ಮ ರಾಜಕೀಯ ಗರಡಿಯಲ್ಲಿ ಜಿ.ಮಾದೇಗೌಡ, ಎಚ್.ಡಿ.ಚೌಡಯ್ಯ, ಸಿಂಗಾರಿಗೌಡ, ಜಿ.ಎಸ್.ಬೊಮ್ಮೇಗೌಡ, ಗೌಡಗೆರೆ ನಾಗಪ್ಪ ಮುಂತಾದ ರಾಜಕೀಯ ನಾಯಕರನ್ನು ಹುಟ್ಟುಹಾಕಿದರು ಎಂದು ಅವರು ನುಡಿದರು.

ಶಂಕರಗೌಡರು ಕಲೆ, ಸಾಹಿತ್ಯ, ಶಿಕ್ಷಣ, ಸಹಕಾರ, ಸಿನೆಮಾ, ರಾಜಕೀಯ, ರಂಗಭೂಮಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಬಹುಮುಖ ಪ್ರತಿಭೆಯಾಗಿದ್ದರು. ಅವರ ಆದರ್ಶಗಳನ್ನು ಇಂದಿನ ರಾಜಕಾರಣಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ವೇದಿಕೆಯ ಉಪಾಧ್ಯಕ್ಷ ಸಿ.ಕೆ.ಗಂಗೇಗೌಡ, ಕಾರ್ಯದರ್ಶಿ ತೂಬಿನಕೆರೆ ಲಿಂಗರಾಜು ಹಾಗೂ ನಿರ್ದೇಶಕ ಹೊಳಲು ಶ್ರೀಧರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X