ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾಗ ಮೃತಪಟ್ಟ ಬಿಜೆಪಿ ನಾಯಕ
ಈಶಾನ್ಯ ರಾಜ್ಯಗಳಲ್ಲಿ ಗೆಲುವು

ಮುಝಫ್ಫರ್ ನಗರ, ಮಾ.4: ಈಶಾನ್ಯ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡುತ್ತಿದ್ದ ಜಿಲ್ಲಾ ಮಟ್ಟದ ಬಿಜೆಪಿ ನಾಯಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮುಝಫ್ಫರ್ ನಗರದಲ್ಲಿ ನಡೆದಿದೆ.
54 ವರ್ಷದ ಬುಧಾನ ಸಿಂಗ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಜಿಲ್ಲಾ ಮಟ್ಟದ ಬಿಜೆಪಿಯ ಉಪಾಧ್ಯಕ್ಷರಾಗಿದ್ದರು. ತ್ರಿಪುರಾ ಚುನಾವಣೆಯ ಫಲಿತಾಂಶದ ನಂತರ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಯುತ್ತಿದ್ದಾಗ ಕುಸಿದುಬಿದ್ದ ಅವರು ಮೃತಪಟ್ಟಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು,
Next Story





