‘ಕುಮಾರ ಭರಣ’ ರಾಷ್ಟ್ರೀಯ ಸಮ್ಮೇಳನ ಸಮಾರೋಪ

ಉಡುಪಿ, ಮಾ.4: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಆಯೋಜಿಸಲಾದ ‘ಕುಮಾರ ಭರಣ-2018’ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭವು ಇತ್ತೀಚೆಗೆ ಜರಗಿತು.
ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ರವಿಶಂಕರ್ ಬಿ. ಆಯುರ್ವೇದದಲ್ಲಿ ಹೇಳಿದಂತಹ ಮಕ್ಕಳ ಸ್ವಾಸ್ಥ್ಯ ಮತ್ತು ಮಕ್ಕಳ ಬೆಳವಣಿಗೆಯಲ್ಲಿ ಸಂಸ್ಕಾರಗಳ ವಿೇಷತೆಯ ಕುರಿತು ಮಾತನಾಡಿದರು.
ಅಧ್ಯಕ್ಷತೆಯನ್ನು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ್ಷ ಡಾ.ಮುರಳೀಧರ ಶರ್ಮಾ ವಹಿಸಿದ್ದರು. ಕೌಮಾರಭೃತ್ಯ ವಿಭಾಗದ ಉಪನ್ಯಾಸಕಿ ಡಾ.ನಾಗರತ್ನ ಎಸ್.ಜೆ. ವರದಿ ವಾಚಿಸಿದರು. ಉತ್ತಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ 5 ಪ್ರತಿನಿಧಿಳಿಗೆ ಪ್ರಶಸ್ತಿಯನ್ನು ನೀಡಲಾಯಿತು.
ಸಹ ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮೀ ರೈ ಸ್ವಾಗತಿಸಿದರು. ವಿಭಾಗದ ಮುಖ್ಯಸ್ಥ ಡಾ.ಪೃಥ್ವಿರಾಜ್ ಪುರಾಣಿಕ್ ವಂದಿಸಿದರು. ಉಪನ್ಯಾಸಕರಾದ ಡಾ.ಅರ್ಹಂತ್ ಕುಮಾರ್ ಹಾಗೂ ಡಾ.ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.





