ಕೆಎಸ್‌ಐಸಿ ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಚೆಕ್ ವಿತರಣೆ
ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾಪೋರೇಶನ್(ಕೆಎಸ್‌ಐಸಿ)ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ಹಾಗೂ ಕಂಪೆನಿಯ ಲಾಭಾಂಶ ರೂ.6.5ಕೋಟಿಯ ಚೆಕ್ ಅನ್ನು ಕೆಎಸ್‌ಐಸಿ ಅಧ್ಯಕ್ಷ ಎಂ.ಕೆ.ಸೋಮಶೇಖರ್, ಕೆಎಸ್‌ಐಸಿ ವ್ಯವಸ್ಥಾಪಕ ನಿರ್ದೇಶಕಿ ನೀಲಾ ಮಂಜುನಾಥ್‌ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಿವಾರ ನೀಡಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಕೆಎಸ್‌ಐಸಿ ಆಡಳಿತ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Next Story





