ಬಂಟ್ವಾಳ: ಬಸ್‌ನಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ, ಮಾ. 4: ನೀರ್ಕಜೆ ತಿರುವಿನಲ್ಲಿ ಖಾಸಗಿ ಬಸ್‌ನ ಹಿಂಬಾಗಿನಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ಪರ್ಲಡ್ಕ ಸಮೀಪದ ಗೋಳಿಕಟ್ಟೆ ನಿವಾಸಿ ಉಮೇಶ್ (18) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಮದುವೆ ಸಮಾರಂಭಕ್ಕೆಂದು ಬಂಗಾರಡ್ಕದಿಂದ ಜನರನ್ನು ಹತ್ತಿಸಿಕೊಂಡು ಬರುತ್ತಿದ್ದ ಬಸ್‌ನ ಹಿಂಬಾಗಿಲ ಸಮೀಪ ಉಮೇಶ್ ನಿಂತಿದ್ದು, ನೀರ್ಕಜೆ ತಿರುವಿನಲ್ಲಿ ಬಸ್‌ನಿಂದ ಹೊರಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಇಲ್ಲಿನ ವೈದ್ಯರು ತಿಳಿಸಿದ್ದಾರೆ. ಈ ಸಂಬಂದ ಬಸ್ ಚಾಲಕ ರಾಜೇಶ್ ಎಂಬಾತನ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





