Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ...

ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸಿ.ಟಿ.ರವಿ

ಬಾಬಾಬುಡನ್‍ಗಿರಿ-ದತ್ತಪೀಠ ವಿವಾದ

ವಾರ್ತಾಭಾರತಿವಾರ್ತಾಭಾರತಿ5 March 2018 7:36 PM IST
share
ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು, ಮಾ.5: ಬಾಬಾಬುಡನ್‍ಗಿರಿ/ದತ್ತಪೀಠ ವಿವಾದವನ್ನು ಸಾಮರಸ್ಯದಿಂದ ಇತ್ಯರ್ಥ ಪಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ನೇಮಿಸಿದ್ದ ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ವರದಿಯ ವಿರುದ್ಧ ಜನಾಭಿಪ್ರಾಯ ಸಂಗ್ರಹಿಸಿ ನ್ಯಾಯಾಂಗ ಹೋರಾಟಕ್ಕೆ ಮುಂದಾಗುವುದಾಗಿ ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ.ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಸರಕಾರದ ಸಚಿವ ಸಂಪುಟ ಒಪ್ಪಿಕೊಂಡಿದೆ. ಈ ವರದಿಯು ಹಿಂದೂಗಳ ಹೋರಾಟಕ್ಕೆ ಜಯ ಕಂಡಂತಿದ್ದರೂ ಅದರ ಒಳ ಮರ್ಮ ಬೇರೆಯೇ ಇದೆ ಎಂದು ಆರೋಪಿಸಿದ ಶಾಸಕ ಸಿ.ಟಿ.ರವಿ, ದತ್ತಪೀಠವನ್ನು ಮುಜರಾಯಿ ಇಲಾಖೆ ವಶಕ್ಕೆ ಒಪ್ಪಿಸಲು ಸಂಪುಟ ಸಭೆ ತೀರ್ಮಾನಿಸಿದೆ. ಆದರೆ ದತ್ತಪೀಠ 1927ರಿಂದ ಅಂದಿನ ಮೈಸೂರು ಸರಕಾರದ ಅವಧಿಯಲ್ಲೇ ಮುಜರಾಯಿ ಇಲಾಖೆ ವಶದಲ್ಲಿದ್ದು, ಸರಕಾರ ಸದ್ಯ ಮುಜರಾಯಿ ಇಲಾಖೆಗೆ ಸೇರಿಸುವ ಅಗತ್ಯವೇ ಇಲ್ಲ ಎಂದರು.

ದತ್ತಪೀಠವನ್ನು 1980-85ರವರೆಗ ಕೇವಲ5 ವರ್ಷಗಳ ಅವಧಿಗೆ ಮಾತ್ರ ವಕ್ಫ್ ಬೋರ್ಡ್‍ಗೆ ಸೇರಿಸಲಾಗಿತ್ತು. ತುರ್ತು ಪರಿಸ್ಥಿತಿಯ ಕಾಲಘಟ್ಟದಲ್ಲಿ ಅದನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ಡಿಕ್ಲೇರ್ ಮಾಡಿ ದತ್ತಪಾದುಕೆಯನ್ನ ಉಪವಿಭಾಗಾಧಿಕಾರಿ ವಶಕ್ಕೆ ಒಪ್ಪಿಸಲಾಗಿತ್ತು. ಇದರ ವಿರುದ್ಧ ಅಂದಿನ ದತ್ತಪೀಠ ಹೋರಾಟಗಾರರು ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದರೂ ಗಂಭೀರವಾಗಿ ತೆಗೆದುಕೊಳ್ಳದಿದ್ದಾಗ ಜಿಲ್ಲಾ ನ್ಯಾಯಾಲಯದಲ್ಲಿ ಮೊಕ್ಕದ್ದಮೆ ಹೂಡಲಾಯಿತು. 1980ರಲ್ಲಿ ಜಿಲ್ಲಾ ನ್ಯಾಯಲಯ ಮುಜರಾಯಿ ಇಲಾಖೆ ಸುಪರ್ದಿಗೆ ದತ್ತಪೀಠವನ್ನು ನೀಡಿ ತೀರ್ಪು ನೀಡಿದೆ. ಇದನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಆಗ ಹೈಕೋರ್ಟ್ ಜಿಲ್ಲಾ ನ್ಯಾಯಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಮತ್ತೇ ವಕ್ಪ್ ಬೋರ್ಡ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದು ದತ್ತಪೀಠ ಮುಜರಾಯಿ ಇಲಾಖೆಗೆ ಸೇರಿಸಿದ್ದು ಎಂದು ತೀರ್ಪು ನೀಡಿದೆ. ವಾಸ್ತವ ಹೀಗಿರುವಾಗ ರಾಜ್ಯ ಸರಕಾರದ ಸಂಪುಟ ಸಭೆ ಮುಜರಾಯಿ ಇಲಾಖೆಗೆ ದತ್ತಪೀಠವನ್ನು ಸೇರಿಸುವ ಅಗತ್ಯವೇ ಇಲ್ಲ ಎಂದು ಶಾಸಕ ರವಿ ಹೇಳಿದರು.

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ, ಗೋರಿಗಳ ಸ್ಥಳಾಂತರ ಹಾಗೂ ಭೂಮಿಯ ಅಕ್ರಮ ಪರಭಾರೆಯ ವಿರುದ್ಧ ಕ್ರಮ ಕೈಗೊಂಡು ಆಸ್ತಿ ವಶ ಪಡಿಸಿಕೊಳ್ಳಬೇಕೆಂದು 1998ರಲ್ಲಿ ಹೈಕೋರ್ಟ್‍ನಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. 9 ವರ್ಷಗಳ ನಂತರ 2007ರಲ್ಲಿ ದತ್ತಪೀಠದಲ್ಲಿ ಮುಜಾವರ್ ರದ್ದುಪಡಿಸಿ, ಹಿಂದೂ ಅರ್ಚಕರನ್ನು ನೇಮಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದರೆ ಇದರ ವಿರುದ್ಧ ಅಂದಿನ ಕಂದಾಯ ಸಚಿವ ಎಂಪಿ.ಪ್ರಕಾಶ್ ಹೈಕೋಟ್ ಆದೇಶಕ್ಕೆ ತಡೆಯಾಜ್ಞೆ ತಂದು ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಮುಜರಾಯಿ ಇಲಾಖೆ ಆಯುಕ್ತರಿಗೆ ಆದೇಶ ನೀಡಿತ್ತು. ಅದರಂತೆ ಮುಜಾರಾಯಿ ಇಲಾಖೆ ನ್ಯಾಯಾಲಯಕ್ಕೆ ಹಿಂದೂ ಅರ್ಚಕರ ನೇಮಕಕ್ಕೆ ವರದಿಯಲ್ಲಿ ಶಿಫಾರಸು ಮಾಡಿದೆ. 

2014ರಲ್ಲಿದ್ದ ಸರಕಾರ ಈ ಸಮಸ್ಯೆಯನ್ನು ಸೌಹಾರ್ದದಿಂದ ಬಗೆಹರಿಸುವ ಸಲುವಾಗಿ ಎರಡು ಸಮುದಾಯಗಳ ಜನರ ಅಭಿಪ್ರಾಯ ಸಂಗ್ರಹಿಸಿ ನ್ಯಾಯಾಲಯಕ್ಕೆ ಅಪಿಡವಿಟ್ ಹಾಕಿ ವಿವಾದದ ಚೆಂಡನ್ನು ಸರಕಾರದ ಅಂಗಳಕ್ಕೆ ತಂದುಕೊಂಡಿದೆ. ಈ ಸಂಬಂಧ ಎರಡು ವರ್ಷಗಳ ಕಾಲ ಮೌನವಹಿಸಿದ್ದ ಸರಕಾರ 2017ರಲ್ಲಿ ಕಾನೂನಿನ ಮಾನ್ಯತೆ ಇಲ್ಲದ ಕ್ಯಾಬಿನೆಟ್ ಸಮಿತಿ ರಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿ.ಟಿ.ರವಿ, ಮುಜರಾಯಿ ಇಲಾಖೆಯ ಶಿಫಾರಸನ್ನು ಗಣನೆಗೆ ಪಡೆಯದೇ ಹಾಗೂ ಎರಡು ಸಮುದಾಯದವರ ಅಭಿಪ್ರಾಯವನ್ನೂ ಸಂಗ್ರಹಿಸದೇ, ಸರಕಾರಿ ದಾಖಲೆಗಳನ್ನು ಪರಿಶೀಲಿಸದೇ  ಸರಕಾರಕ್ಕೆ ಈ ಸಮಿತಿ ಬಾಬಾ ಬುಡನ್ ದರ್ಗಾವೇ ಬೇರೆ, ದತ್ತಪೀಠವೇ ಬೇರೆ ಎಂಬ ದಾಖಲೆಗಳನ್ನು ಸಲ್ಲಿಸಿದೆ. ಈ ಬಗ್ಗೆ ಸಚಿವರು ಹಾಗೂ ಸಿಎಂ ಗಮನ ಸೆಳೆದರೂ ಸುಪ್ರೀಂಕೋಟ್ ನಿರ್ದೇಶನಕ್ಕೆ ವಿರುದ್ಧವಾಗಿ ಸರಕಾರ ಜನರಿಗೆ ಅನ್ಯಾಯ ಮಾಡಿದೆ. ಹಿಂದೂ ಅರ್ಚಕರನ್ನು ನೇಮಕ ಮಾಡದ ಸರಕಾರ ದತ್ತಪೀಠದ ದಾಖಲೆ ಬದಲಾಯಿಸಲು ಹೊರಟಿರುವುದು ಅಘಾತಕಾರಿ. ಈ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ವಿವಾದವನ್ನು ಜೀವಂತವಾಗಿಟ್ಟು ರಾಜಕಾರಣ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ವರದಿಯನ್ನು ಸಂಪುಟದಲ್ಲಿ ಪರಾಮರ್ಶೆ ಮಾಡದಿದ್ದರೆ ಜನಾಭಿಪ್ರಾಯ ರೂಪಿಸಿ ನ್ಯಾಯಲಯದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಸುದ್ಧಿಗೋಷ್ಠಿಯಲ್ಲಿ  ಬಿಜೆಪಿ ಮುಖಂಡರಾದ ಎಚ್.ಡಿ. ತಮ್ಮಯ್ಯ, ಸಿ.ಎಚ್.ಲೋಕೇಶ್, ಸೋಮಶೇಖರ್, ಕೋಟೆ ರಂಗನಾಥ್, ವರಸಿದ್ದಿ ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

ಸೋಮಾರಿ ಶಾಸಕ ನಾನಲ್ಲ: 
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಈ ಬಗ್ಗೆ ಕೆಲ ಪಕ್ಷಗಳ ಮುಖಂಡರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ನಾನು ಸೋಮಾರಿ ಶಾಸಕನಲ್ಲ. ಲಕ್ಕಾ, ಸಖರಾಯಪಟ್ಟಣ ಹಾಗೂ ಚಿಕ್ಕಮಗಳೂರು ತಾಲೂಕಿನ 63 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ನೀರಾವರಿ ಇಲಾಖೆಗೆ ಈ ಹಿಂದೆಯೇ ಪತ್ರ ಬರೆದಿದ್ದೇನೆ. ಸರಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‍ನಲ್ಲಿ ಈ ಯೋಜನೆ ಜಾರಿಗೆ ಅನುದಾನ ನೀಡುವಂತೆ ಖುದ್ದು ಸಿಎಂಗೆ ಮನವಿ ಮಾಡಿದ್ದೆ. ಆದರೆ ಬಜೆಟ್‍ನಲ್ಲಿ ಈ ಬಗ್ಗೆ ಸಿಎಂ ಪ್ರಸ್ತಾಪ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದ್ದು, ಆರಂಭದಿಂದಲೇ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.
- ಸಿ.ಟಿ.ರವಿ, ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X