ಮಲಮಕ್ಕಳಿಂದಲೇ ಅತ್ಯಾಚಾರ ಆರೋಪ: ತಂದೆ ಆತ್ಮಹತ್ಯೆ
ಮುಂಬೈ, ಮಾ. 6: ತಂದೆ ಹಲವು ವರ್ಷಗಳಿಂದ ನಮಗೆ ಲೈಂಗಿಕ ಕಿರುಕುಳ ನೀಡಿ, ನಮ್ಮ ಮೇಲೆ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಮಲಮಕ್ಕಳು ದೂರು ನೀಡಿದ ಬೆನ್ನಲ್ಲೇ ತಂದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
43 ವರ್ಷದ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು, ರವಿವಾರ 15 ಮತ್ತು 18 ವರ್ಷದ ಇಬ್ಬರು ಹೆಣ್ಣುಮಕ್ಕಳು ಮಲತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದರು. ಈ ವಿಷಯ ತಿಳಿದ ಆರೋಪಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರು ಹೆಣ್ಣುಮಕ್ಕಳ ತಾಯಿಯನ್ನು 2013ರಲ್ಲಿ ಈತ ವಿವಾಹವಾಗಿದ್ದ. ಇಬ್ಬರ ಮೇಲೂ 2014ರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಾಗೂ ಅತ್ಯಾಚಾರವನ್ನೂ ಎಸಗಿದ್ದಾನೆ ಎಂದು ಆಪಾದಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಪಾಲ್ಘರ್ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Next Story