Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಯೋತ್ಪಾದಕರು ಯಾರು ಎಂದು ಬೆಂಕಿ ಹಚ್ಚಲು...

ಭಯೋತ್ಪಾದಕರು ಯಾರು ಎಂದು ಬೆಂಕಿ ಹಚ್ಚಲು ಹೊರಟವರು ಹೇಳಬೇಕಿಲ್ಲ: ಸುಹೈಲ್ ಕಂದಕ್

ಸಂಸದ ನಳಿನ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ6 March 2018 3:52 PM IST
share
ಭಯೋತ್ಪಾದಕರು ಯಾರು ಎಂದು ಬೆಂಕಿ ಹಚ್ಚಲು ಹೊರಟವರು ಹೇಳಬೇಕಿಲ್ಲ: ಸುಹೈಲ್ ಕಂದಕ್

ಮಂಗಳೂರು, ಮಾ. 6: ಭಯೋತ್ಪಾದಕರು ಯಾರು ಎಂಬುವುದು ಜಿಲ್ಲೆಯ ಜನತೆಗೆ ಸ್ಪಷ್ಟವಾಗಿ ತಿಳಿದಿದೆ. ಹೆಣಗಳ ಮೇಲೆ ರಾಜಕೀಯ ಮಾಡಿ, ಜಿಲ್ಲೆಗೆ ಬೆಂಕಿ ಹಚ್ಚಲು ಹೊರಟ, ಬೆಂಕಿ ನಾಯಕರು ಹೇಳಬೇಕಿಲ್ಲ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್  ಹೇಳಿದ್ದಾರೆ.

ಸೋಮವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಸುಹೈಲ್ ಕಂದಕ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಅಭೂತಪೂರ್ವ ಅಭಿವೃದ್ಧಿ  ಕಾರ್ಯಗಳ ಹರಿಕಾರ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಗ್ಗೆ ಮಾತಾಡುವ ಯಾವುದೇ ನೈತಿಕತೆ ಇಲ್ಲ, ತನ್ನದೇ ಪಕ್ಷದ ಕಾರ್ಯಕರ್ತರು, ನಮ್ಮ  ದೇಶದ ಸೂಕ್ಷ್ಮ ಮಾಹಿತಿಗಳನ್ನು ರಹಸ್ಯವಾಗಿ ಪಾಕಿಸ್ತಾನಕ್ಕೆ ರವಾನಿಸಿದ ಸಂಧರ್ಭದಲ್ಲಿ ಅವರನ್ನು ಭಯೋತ್ಪಾದಕರು ಎಂದು ಹೇಳುವ ಧೈರ್ಯ ಬೆಂಕಿ ಸಂಸದರಿಗೆ ಇರಲಿಲ್ಲವೇ ಎಂದು  ಸುಹೈಲ್ ಕಂದಕ್ ಪ್ರಶ್ನಿಸಿದ್ದಾರೆ.

ಬಡವರಿಗೆ ಅನ್ನ ಭಾಗ್ಯ ಯೋಜನೆ ಒದಗಿಸಿ, ಹಸಿವು ನಿವಾರಿಸಿರುವ ನಾಡದೊರೆ ಸಿದ್ದರಾಮಯ್ಯ ಅವರ ವಿರುದ್ಧ ನಾಲಗೆ ಹರಿಯಬಿಡುವ ಮುನ್ನ ಅಂದು ತಾವು ಹೇಳಿದ ಒಂದು ರೂಪಾಯಿಗೆ ಸಿಗುವ ಹದಿನೈದು ಡಾಲರ್ ಅನ್ನು ಜಿಲ್ಲೆಯ ಜನತೆಗೆ ಸಿಗುವಂತೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸುಹೈಲ್ ಕಂದಕ್ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ತನ್ನ ಜನಪರ ಕಾರ್ಯಗಳ ಮೂಲಕ, ಅಭಿವೃದ್ಧಿ ಭಾಗ್ಯ ಯೋಜನೆಗಳ ಮೂಲಕ ಬಡವರ, ಅಸಕ್ತರ ಪಾಲಿನ ಸುಲ್ತಾನ್ ಆಗಿದ್ದಾರೆ. ನುಡಿ ದಂತೆ ನಡೆದು ತನ್ನ ಆಶ್ವಾಸನೆಗಳನ್ನು ಪೂರೈಸಿದ್ದಾರೆ ಆದರೆ ಅಚ್ಛೇ ದೀನ್ ಆಯೇಗಾ ಎಂದು ಆಡಳಿತಕ್ಕೆ ಬಂದ ಬೆಂಕಿ ಸಂಸದ ನಳಿನ್ ರ ಸರಕಾರ ಸುಳ್ಳು ಹೇಳಿ ಜನತೆಯನ್ನು ವಂಚಿಸುತ್ತಿದೆ. ದೇಶವನ್ನು ಲೂಟಿ ಮಾಡಿದ ಕಾರ್ಪೊರೇಟ್ ಗಳಿಗೆ ಎಸ್ಕೇಪ್ ಭಾಗ್ಯವನ್ನು ಕರುಣಿಸಲಾಗುತ್ತಿದೆ. ಇದರ ಬಗ್ಗೆ ಮಾತಾಡಲು ಧೈರ್ಯವಿಲ್ಲದ ನಳಿನ್ ಕುಮಾರ್ ತನ್ನ ಅಧ್ಯಕ್ಷ ಶಾ ಹೇಳಿರುವಂತೆ ಬೆಂಕಿ ಹಚ್ಚುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಅದರ ಭಾಗವಾಗಿ ಗ್ರಾಮ ಪಂಚಾಯತ್ ಸದಸ್ಯರಾಗಲೂ ಅರ್ಹತೆ ಇಲ್ಲದ ಸಂಘ ಪರಿವಾರದ ರಬ್ಬರ್ ಸ್ಟ್ಯಾಂಪ್ ಆಗಿರುವ ಸಂಸದರಾದ ನಳಿನ್ ಕುಮಾರ್ ರಿಂದ ಇಂತಹ ಬಾಲಿಶ ಹೇಳಿಕೆಗಳು ಬರುತ್ತಿವೆ ಮತ್ತು ಇದು ಎಂದಿನಂತೆ  ಬಿಜೆಪಿ ಪಕ್ಷದ ನಾಯಕರ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು ಸುಹೈಲ್ ಕಂದಕ್ ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X