Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಜಿಲ್ಲೆಯ ಎರಡೂ ಕ್ಷೇತ್ರಗಳ...

ಮಡಿಕೇರಿ: ಜಿಲ್ಲೆಯ ಎರಡೂ ಕ್ಷೇತ್ರಗಳ ಗೆಲುವಿಗೆ ಶ್ರಮಿಸಿ; ಚುಮ್ಮಿದೇವಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ6 March 2018 4:52 PM IST
share
ಮಡಿಕೇರಿ: ಜಿಲ್ಲೆಯ ಎರಡೂ ಕ್ಷೇತ್ರಗಳ ಗೆಲುವಿಗೆ ಶ್ರಮಿಸಿ; ಚುಮ್ಮಿದೇವಯ್ಯ ಕರೆ

ಮಡಿಕೇರಿ, ಮಾ.6 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ರಾಹುಲ್ ಗಾಂಧಿ ಬ್ರಿಗೇಡ್‍ನ ಪಾತ್ರ ಪ್ರಮುಖವಾಗಿದ್ದು, ಯುವ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಬ್ರಿಗೇಡ್‍ನ ಜಿಲ್ಲಾಧ್ಯಕ್ಷರು ಹಾಗೂ ಮೂಡಾದ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಕರೆ ನೀಡಿದ್ದಾರೆ. 

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಹುಲ್ ಗಾಂಧಿ ಬ್ರಿಗೇಡ್‍ನ ಮಡಿಕೇರಿ ನಗರ ಸಮಿತಿಯ ನೂತನ ಅಧ್ಯಕ್ಷರಾದ ಹೆಚ್.ಎಸ್.ಯತೀಶ್ ಕುಮಾರ್ ಅವರ ಅಧಿಕಾರ ಸ್ವೀಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಹುಲ್ ಗಾಂಧಿ ಬ್ರಿಗೇಡ್‍ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ವಿಶೇಷವಾದ ಜವಬ್ದಾರಿ ಇದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಣ ತೊಡಬೇಕೆಂದರು. ಈ ಬಾರಿಯ ಚುನಾವಣೆಯಲ್ಲಿ ಬ್ರಿಗೇಡ್ ನಿರ್ಣಾಯಕ ಪಾತ್ರ ವಹಿಸಲಿದ್ದು, ಕಾರ್ಯಕರ್ತರ ಶ್ರಮದಲ್ಲಿ ಪಕ್ಷದ ಗೆಲುವು ಅಡಗಿದೆ ಎಂದರು. 

ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಎಂ.ಅಯ್ಯಪ್ಪ ಮತನಾಡಿ, ಬಹಳ ವರ್ಷಗಳ ಹಿಂದೆ ಇಂದಿರಾ ಬ್ರಿಗೇಡ್ ಸದಸ್ಯರಿಗೆ ರಾಜ್ಯ ಮಟ್ಟದಲ್ಲಿ ತರಬೇತಿ ನೀಡಿ ಪಕ್ಷದ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುತ್ತಿತ್ತು. ಇದೀಗ ರಾಹುಲ್ ಬ್ರಿಗೇಡ್‍ನ ನೂತನ ಸದಸ್ಯರಿಗೂ ತರಬೇತಿ ನೀಡಿ ಮುಂಬರುವ ವಿಧಾನಸಭಾ ಚುನಾವಣೆಯ ಜವಬ್ದಾರಿಯನ್ನು ನೀಡಬೇಕಾಗಿದೆ ಎಂದರು. ಮತ್ತಷ್ಟು ಹೊಸ ಮುಖಗಳಿಗೆ ಅವಕಾಶವನ್ನು ನೀಡುವ ಮೂಲಕ ಯುವ ಸಮೂಹ ಪಕ್ಷದಲ್ಲಿ ಕ್ರಿಯಾಶೀಲರಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದು, ರಾಜ್ಯ ಸರಕಾರದ ಸಾಧನೆಗಳನ್ನು 
ಪ್ರತಿ ಮನೆ, ಮನೆಗಳಿಗೆ ತಿಳಿಸಬೇಕೆಂದರು. ಅಭ್ಯರ್ಥಿಗಳ ಹೆಸರು ಪ್ರಕಟವಾಗುವುದನ್ನೇ ಕಾಯುತ್ತಾ ಕಾಲಹರಣ ಮಾಡುವ ಬದಲು ಪಕ್ಷದ ಗೆಲುವಿಗಾಗಿ ಈಗಿನಿಂದಲೇ ಕಾರ್ಯೋನ್ಮುಖರಾಗಬೇಕೆಂದರು. ಹಗಲು ಕಾಂಗ್ರೆಸ್, ರಾತ್ರಿ ಬಿಜೆಪಿಯಾಗಿರದೆ ಪಕ್ಷವನ್ನು ತ್ಯಜಿಸಿ ಮನೆಯಲ್ಲಿರುವುದೇ ಉತ್ತಮ ಎಂದು ಅಯ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭಾ ಸದಸ್ಯ ಹೆಚ್.ಎಂ.ನಂದಕುಮಾರ್ ಮಾತನಾಡಿ, ವಿರೋಧ ಪಕ್ಷದವರ ಟೀಕೆ, ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳದೆ ಧೈರ್ಯವಾಗಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದರು. ರಾಹುಲ್ ಬ್ರಿಗೇಡ್‍ಗೆ ಹೆಚ್ಚಿನ ಸಂಖ್ಯೆಯ ಯುವಕರನ್ನು ನೇಮಿಸಿಕೊಳ್ಳುವಂತೆ ಸಲಹೆ ನೀಡಿದರು. 

ಮೂಡಾ ಮಾಜಿ ಅಧ್ಯಕ್ಷರಾದ ಸುರಯ್ಯ ಅಬ್ರಾರ್ ಮಾತನಾಡಿ, ಬ್ರಿಗೇಡ್‍ಗೆ ಆಯ್ಕೆಗೊಂಡ ಪ್ರತಿಯೊಬ್ಬರೂ ತಮ್ಮ ಜವಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಕಿವಿ ಮಾತು ಹೇಳಿದರು.

ರಾಹುಲ್ ಗಾಂಧಿ ಬ್ರಿಗೇಡ್‍ನ ಮಡಿಕೇರಿ ಅಧ್ಯಕ್ಷರಾದ ಹೆಚ್.ಎಸ್.ಯತೀಶ್ ಕುಮಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ(ಅಪ್ರು), ನಗರಸಭಾ ಸದಸ್ಯ ಎಂ.ಎ.ಉಸ್ಮಾನ್, ಎಂ.ಇ.ಹನೀಫ್ ಮಾತನಾಡಿದರು. 

ನಗರಸಭಾ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಜುಲೇಕಾಬಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಹಾಗೂ ಜಾನ್ಸನ್ ಪಿಂಟೋ ಉಪಸ್ಥಿತರಿದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X