Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರು ಜಾಗೃತರಾಗಿರಬೇಕು: ಜಿಗಣಿ...

ಮಹಿಳೆಯರು ಜಾಗೃತರಾಗಿರಬೇಕು: ಜಿಗಣಿ ಶಂಕರ್

ವಾರ್ತಾಭಾರತಿವಾರ್ತಾಭಾರತಿ6 March 2018 10:03 PM IST
share

ಬೆಂಗಳೂರು, ಮಾ.6: ನಗರ ವ್ಯಾಪ್ತಿಯಲ್ಲಿ ಜನಸಂಖ್ಯೆ ಹೆಚ್ಚಿದಂತೆ ಅಪರಾಧ ಪ್ರಕರಣಗಳು ಅಧಿಕವಾಗುತ್ತಿವೆ. ಇಂತಹ ಒತ್ತಡದ ಪರಿಸ್ಥಿತಿಯಲ್ಲಿ ಮಹಿಳೆಯರು ಜಾಗೃತರಾಗಿರಬೇಕೆಂದು ಕರ್ನಾಟಕ ರಿಪಬ್ಲಿಕನ್ ಸೇನೆ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಕರೆ ನೀಡಿದ್ದಾರೆ.

ಮಂಗಳವಾರ ಜಯಂತಿ ಕ್ರಿಯೇಶನ್‌ವತಿಯಿಂದ ನಗರದ ನಯನ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಆಯೋಜಿಸಿದ್ದ ‘ಹುಷಾರಮ್ಮ ಹುಷಾರು’ ವೀಡಿಯೋ ಸಿ.ಡಿ. ಹಾಗೂ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿದೆ, ಅದರಂತೆ ಕೊಲೆ, ಸುಲಿಗೆ, ದರೋಡೆಯಂತಹ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಮಹಿಳೆಯರು ಜಾಗರೂಕರಾಗಬೇಕು ಎಂದರು.

ಮಹಿಳೆಯರ ಸುರಕ್ಷತೆಯನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಇಂದು ಹುಷಾರಮ್ಮ ಹುಷಾರು ವೀಡಿಯೋ ಸಿ.ಡಿ. ಹಾಗೂ ಪುಸ್ತಕ ಬಿಡುಗಡೆಗೊಳಿಸಲಾಗಿದೆ. ಸಮಾಜದಲ್ಲಿ ಮಹಿಳೆಯರಿಗೆ ಎದುರಾಗುವ ಸಮಸ್ಯೆಗಳನ್ನು ಹಾಡು, ದೃಶ್ಯ ಮೂಲಕ ತೋರಿಸಲಾಗಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಜಯಂತಿ ಕ್ರಿಯೇಶನ್‌ನ ಸಾಲೋಮನ್ ಜಿ, ಚಾಂದಿನಿಶೆಟ್ಟಿ ಇಂತಹ ಪ್ರಯತ್ನಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.

ಹಿರಿಯ ಚಿತ್ರನಟ ರಾಜೇಶ್ ಮಾತನಾಡಿ, ಕಳೆದ 50 ವರ್ಷಗಳಲ್ಲಿ ಮೈನಡುಗಿಸುವ ರೀತಿಯಲ್ಲಿ ಬೆಂಗಳೂರಿನ ಭೂಪಟ ಬದಲಾಗಿದ್ದು, ಪ್ರಚಲಿತ ವಿದ್ಯಮಾನಗಳನ್ನು ನೋಡಿದರೆ ಭಯ ಹುಟ್ಟಿಸುತ್ತದೆ. ಬೇರೆಡೆಯಿಂದ ನಗರಕ್ಕೆ ಬಂದವರು ಐಶಾರಾಮಿ ಜೀವನ ನಡೆಸಲು ಅಪರಾಧದಂತಹ ಕೃತ್ಯಕ್ಕೆ ಕೈಹಾಕುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಹೆಣ್ಣು ಮಕ್ಕಳು ನಿರ್ಭಯವಾಗಿ ಜೀವಿಸುವುದು ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯನಟ ರಾಜೇಶ್ ಅವರಿಗೆ ‘ಕರುನಾಡ ಕಲಾ ಮಾಣಿಕ್ಯ ಶಿಖರ’ ಎಂಬ ಬಿರುದು ನೀಡಿ ಸನ್ಮಾನಿಸಲಾಯಿತು. ಕರ್ನಾಟಕ ಚರ್ಮ ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಲಿಡ್‌ಕರ್ ಸೋಮು, ಗಾಯಕಿ ಜಯಲಕ್ಷ್ಮಿ ಆನಂದ್, ಸಂಗೀತ ನಿರ್ದೇಶಕ ಪಳನಿ ಡಿ. ಸೇನಾಧಿಪತಿ, ಕಿರುತೆರೆ ನಟ ಡಾ.ರಾಮಯ್ಯ, ಸುರಕ್ಷ ಪ್ಯಾಕರ್ಸ್‌ ಅಂಡ್ ಮೂವರ್ಸ್‌ನ ಎಂ.ಪದ್ಮನಾಭನ್, ಸಹಾಯ ಹೃದಯಗಳ ಸಂಘದ ಅಧ್ಯಕ್ಷ ಎ.ಎಂ.ರವಿಚಂದ್ರನ್, ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಶ್ಮಿ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X