Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಪರಿವಾರದೊಂದಿಗೆ ಪಿಎಫ್‌ಐ ಸಮೀಕರಿಸಿದ...

ಸಂಘಪರಿವಾರದೊಂದಿಗೆ ಪಿಎಫ್‌ಐ ಸಮೀಕರಿಸಿದ ಗೃಹಸಚಿವರ ಹೇಳಿಕೆ ಬಾಲಿಶತನ: ಪಿಎಫ್‌ಐ ರಾಜ್ಯ ಘಟಕ

ವಾರ್ತಾಭಾರತಿವಾರ್ತಾಭಾರತಿ6 March 2018 10:16 PM IST
share

ಮಂಗಳೂರು, ಮಾ.6: ದೇಶದಲ್ಲಿ ಹಲವಾರು ಬಾಂಬ್ ಸ್ಫೋಟ ಮತ್ತು ಹತ್ಯೆಗಳನ್ನು ನಡೆಸಿ ಭಯೋತ್ಪಾದನೆ ಮಾಡುತ್ತಿರುವ ಆರೆಸ್ಸೆಸ್‌ನೊಂದಿಗೆ ಪಿಎಫ್‌ಐ ಸಂಘಟನೆಯನ್ನು ಗೃಹ ಸಚಿವರು ಹೋಲಿಸಿದ್ದು ಬಾಲಿಶತನದಿಂದ ಕೂಡಿದೆ ಎಂದು ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಅಬ್ದುರ್ರಝಾಕ್ ಕೆಮ್ಮಾರ ಹೇಳಿದ್ದಾರೆ.

ಒಂದೆಡೆ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದು ಬಿಜೆಪಿ ಸವಾಲು ಹಾಕುತ್ತಿರುವ ವೇಳೆ, ಚುನಾವಣಾ ಅಖಾಡದಲ್ಲೂ ವೈಚಾರಿಕವಾಗಿಯೂ ವಿರೋಧಿಸುವುದರಲ್ಲಿ ಕಾಂಗ್ರೆಸ್ ಸಂಪೂರ್ಣ ಸೋತಿದೆ. 70 ವರ್ಷಗಳಿಂದ ಓಟು ಬ್ಯಾಂಕ್ ಆಗಿದ್ದ ಮುಸ್ಲಿಮರು ಮತ್ತು ದಲಿತರು ಇದೀಗ ಕಾಂಗ್ರೆಸ್‌ನಿಂದ ದೂರ ನಿಂತಿದ್ದಾರೆ. ತನ್ನ ಮತದಾರರನ್ನು ವಿಶ್ವಾಸಕ್ಕೂ ತೆಗೆದುಕೊಳ್ಳಲೂ ಸಾಧ್ಯವಾಗದ ಕಾಂಗ್ರೆಸ್‌ನ ಹತಾಶೆಯು ಗೃಹ ಸಚಿವರಿಂದ ಇಂತಹ ಮಾತನ್ನು ಹೇಳಿಸುತ್ತಿದೆ. ಒಂದು ಕಾಲದಲ್ಲಿ ಕಾಂಗ್ರೆಸ್‌ನ ಓಟ್‌ಬ್ಯಾಂಕ್ ಆಗಿದ್ದ ಮುಸ್ಲಿಮರಿಂದು ಕಾಂಗ್ರೆಸ್‌ನ ಸ್ವಯಂ ಕೃತಾಪರಾಧಗಳ ಕಾರಣಗಳಿಂದ ವಿವಿಧ ರಾಜ್ಯಗಳಲ್ಲಿ ವಿವಿಧ ಪಕ್ಷಗಳೊಂದಿಗೆ ಕೈಜೋಡಿಸಿದ್ದಾರೆ ಮತ್ತು ದೇಶದಲ್ಲಿ ಮುಸ್ಲಿಮರೇ ಹುಟ್ಟು ಹಾಕಿದ ರಾಜಕೀಯ ಪಕ್ಷಗಳು ಮುಂಚೂಣಿಗೆ ಬರುತ್ತಿವೆ.
ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಗಲಭೆಗಳನ್ನು ಸೃಷ್ಟಿಸಲು ಆಜ್ಞಾಪಿಸಿದ್ದರೆಂದು ಖುದ್ದು ಸಂಸದ ಪ್ರತಾಪ ಸಿಂಹ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ದರಿಂದ ಗಲಭೆಯ ಫ್ಯಾಕ್ಟರಿ ಎಲ್ಲಿದೆ ಎಂಬುದನ್ನು ಗೃಹ ಸಚಿವರು ತಿಳಿದುಕೊಳ್ಳಬೇಕು.

ಬಿಜೆಪಿ, ಆರೆಸ್ಸೆಸ್‌ನಿಂದ ರಾಜ್ಯದಲ್ಲಿ ಗಲಭೆ ಸೃಷ್ಟ್ಟಿಯಾಗುತ್ತಿದೆ ಎಂದು ಸ್ವತಃ ಮುಖ್ಯಮಂತ್ರಿ ಈ ಹಿಂದೆ ಅನೇಕ ಬಾರಿ ಸ್ಪಷ್ಟಪಡಿಸಿದ್ದಾರೆ. ವಸ್ತುಸ್ಥಿತಿಯನ್ನು ಗ್ರಹಿಸಲು ಸಾಧ್ಯವಾಗುವ ಸಿದ್ದರಾಮಯ್ಯರಂತಹ ನೇತಾರರ ಕಾರಣದಿಂದ ಮಾತ್ರವೇ ಕಾಂಗ್ರೆಸ್ ಕರ್ನಾಟಕದಲ್ಲಿ ತನ್ನ ವರ್ಚಸ್ಸನ್ನು ಉಳಿಸಿಕೊಂಡಿದೆ. ಕಲಬುರ್ಗಿ ಮತ್ತು ಗೌರಿಯ ಹತ್ಯೆಯ ಹಿಂದೆ ಕೋಮುವಾದಿ ಫ್ಯಾಶಿಸ್ಟ್ ಸಂಘಟನೆಗಳ ಕೈವಾಡ ಸ್ಪಷ್ಟವಾಗಿದೆ. ಇದೀಗ ರಾಜ್ಯದ ಇನ್ನೋರ್ವ ಹೋರಾಟಗಾರನನ್ನು ಮುಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ತನಿಖಾ ಸಂಸ್ಥೆಗಳು ಸೂಚನೆ ನೀಡಿವೆ. ಹೀಗಿದ್ದೂ ಅಂತಹ ಭಯೋತ್ಪಾದಕ ಸಂಘಟನೆಯನ್ನು ಮಟ್ಟ ಹಾಕಲು ಸಾಧ್ಯವಾಗದ ಗೃಹಮಂತ್ರಿ ಪಿಎಫ್‌ಯನ್ನು ವಿನಾ ಕಾರಣ ಎಳೆದು ತರುತ್ತಿದ್ದಾರೆ. ಸಾಮಾಜಿಕ, ರಾಜಕೀಯ, ಔದ್ಯೋಗಿಕ, ಶೈಕ್ಷಣಿಕ ಸಬಲೀಕರಣಕ್ಕಾಗಿ ಜನಪರ ಚಳವಳಿಯನ್ನು ಹಮ್ಮಿಕೊಂಡು ದೇಶದ ಸಾಂವಿಧಾನಿಕ ಮೌಲ್ಯಗಳಾದ ಪ್ರಜಾಸತ್ತೆ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಡಿದು ಹೋರಾಡುತ್ತಿರುವ ಸಂಘಟನೆಯ ವಿರುದ್ಧ ಇಲ್ಲಸಲ್ಲದ ಆರೋಪವನ್ನು ಹೊರಿಸುತ್ತಿರುವುದು ಅಕ್ಷಮ್ಯ. ಆದ್ದರಿಂದ ಗೃಹ ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಅಬ್ದುರ್ರಝಾಕ್ ಕೆಮ್ಮಾರ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X