Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.7: ಎಂಆರ್‌ಪಿಎಲ್‌ಗೆ ಬೀಗ ಜಡಿಯಲು...

ಮಾ.7: ಎಂಆರ್‌ಪಿಎಲ್‌ಗೆ ಬೀಗ ಜಡಿಯಲು ಒತ್ತಾಯಿಸಿ ಜೋಕಟ್ಟೆ ಗ್ರಾಮಸ್ಥರ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ6 March 2018 11:21 PM IST
share

ಮಂಗಳೂರು, ಮಾ. 6: ಜಿಲ್ಲಾಡಳಿತದ ಸೂಚನೆ, ಆದೇಶವನ್ನು ಧಿಕ್ಕರಿಸುವ ಎಂಆರ್‌ಪಿಎಲ್ ಕಂಪೆನಿಗೆ ಬೀಗ ಜಡಿಯಬೇಕು ಎಂದು ಒತ್ತಾಯಿಸಿ ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ವತಿಯಿಂದ ಮಾ.7ರಂದು ಬೆಳಗ್ಗೆ 10:30ಕ್ಕೆ ನಗರದ ಮಿನಿ ವಿಧಾನ ಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಎಂಆರ್‌ಪಿಎಲ್ ಸರ್ವಾಧಿಕಾರಿ ಧೋರಣೆಗಳಿಂದ ಆಸುಪಾಸಿನ ಸುತ್ತಲ ಗ್ರಾಮಗಳ ಪರಿಸರ ಹಾನಿಗೊಳಗಾಗಿದೆ. ಎಂಆರ್‌ಪಿಎಲ್ ಮೂರನೇ ಹಂತದ ಕೋಕ್ ಸಲ್ಫರ್ ಘಟಕದ ನಿಯಮ ಬಾಹಿರ ನಿರ್ಮಾಣದಿಂದ ಜೋಕಟ್ಟೆ, ಕಳವಾರು ಭಾಗದಲ್ಲಿ ಗ್ರಾಮಸ್ಥರ ಬದುಕು ನರಕಸದೃಶವಾಗಿದೆ. ಕೋಕ್ ಹಾರುಬೂದಿ, ಗಾಳಿ, ನೀರು ಮಾಲಿನ್ಯದಿಂದ ತತ್ತರಿಸಿದ ಗ್ರಾಮಸ್ಥರ ನಿರಂತರ ಹೋರಾಟದಿಂದ ಸರಕಾರ ಹಸಿರು ವಲಯ ನಿರ್ಮಾಣ, ಶಬ್ದ, ವಾಯು ಮಾಲಿನ್ಯಕ್ಕೆ ತಡೆ, ಹಾರುಬೂದಿಯಿಂದ ಸಂರಕ್ಷಣೆ ಮುಂತಾದ ಆರು ಅಂಶಗಳ ಪರಿಹಾರ ಕ್ರಮಗಳನ್ನು ಕಾಲಮಿತಿಯೊಳಗಡೆ ಕೈಗೊಳ್ಳುವಂತೆ ಎಂಆರ್‌ಪಿಎಲ್ ಕಂಪೆನಿಗೆ ನಿರ್ದೇಶಿಸಿ 2 ವರ್ಷದ ಹಿಂದೆಯೇ ಗಜೆಟ್ ನೋಟಿಫಿಕೇಶನ್ ಹೊರಡಿಸಿತ್ತು. ಆದರೆ ಎಂಆರ್‌ಪಿಎಲ್ ಯಾವ ಕ್ರಮವನ್ನೂ ಕೈಗೊಳ್ಳದೆ ಸರಕಾರದ ಆದೇಶಕ್ಕೆ ಅವಿಧೇಯತೆ ತೋರಿದೆ. ಇದರಿಂದ ಗ್ರಾಮಸ್ಥರ ಸಮಸ್ಯೆ ಬಿಗಡಾಯಿಸಿದ್ದು, ಜನತೆ ತಮ್ಮ ಮನೆಗಳನ್ನು ತೊರೆದು ವಲಸೆಹೋಗುವ ಸ್ಥಿತಿ ನಿರ್ಮಾಣಗೊಂಡಿದೆ. ಇನ್ನೊಂದೆಡೆ ಕಂಪೆನಿ ಮತ್ತೆ ಒಂದು ಸಾವಿರ ಕೃಷಿಭೂಮಿ ವಶಪಡಿಸಿ ನಾಲ್ಕನೆ ಹಂತದ ಘಟಕ ಸ್ಥಾಪಿಸಲು ಮುಂದಾಗಿದೆ.

ಸರಕಾರದ ಆದೇಶವನ್ನು ಧಿಕ್ಕರಿಸುತ್ತಿರುವ ನಿಯಮ ಬಾಹಿರವಾಗಿ ಕಾರ್ಯಾಚರಿಸುತ್ತಿರುವ ಕಂಪೆನಿಯ ಪೆಟ್‌ಕೋಕ್, ಸಲ್ಫರ್ ಘಟಕಕ್ಕೆ ಬೀಗ ಜಡಿಯಬೇಕು, ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಜೋಕಟ್ಟೆ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸಬೇಕು, ಎಂಆರ್‌ಪಿಎಲ್ ನಾಲ್ಕನೇ ಹಂತದ ವಿಸ್ತರಣೆಗೆ ಯಾವುದೇ ಕಾರಣಕ್ಕೂ ಭೂಮಿ ನೀಡಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X