Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸದ ನಳಿನ್‌ ಕುಮಾರ್ ದೊಡ್ಡ ಭಯೋತ್ಪಾದಕ:...

ಸಂಸದ ನಳಿನ್‌ ಕುಮಾರ್ ದೊಡ್ಡ ಭಯೋತ್ಪಾದಕ: ಹೇಮನಾಥ ಶೆಟ್ಟಿ

'ನಾನು ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಆಕಾಂಕ್ಷಿ'

ವಾರ್ತಾಭಾರತಿವಾರ್ತಾಭಾರತಿ6 March 2018 11:29 PM IST
share
ಸಂಸದ ನಳಿನ್‌ ಕುಮಾರ್ ದೊಡ್ಡ ಭಯೋತ್ಪಾದಕ: ಹೇಮನಾಥ ಶೆಟ್ಟಿ

ಪುತ್ತೂರು, ಮಾ. 6: ಜಿಲ್ಲೆಯ ಶಾಂತಿಯನ್ನು ಕೆದಕಿ, ಧರ್ಮ ಧರ್ಮಗಳ ನಡುವೆ ಕಂದಕಗಳನ್ನು ನಿರ್ಮಿಸುವುದಲ್ಲದೆ, ಜಿಲ್ಲೆಗೆ ಬೆಂಕಿ ಕೊಡುತ್ತೇನೆ ಎಂದು ಹೇಳಿಕೆ ನೀಡಿರುವವರು ಯಾರೆಂದು ಜನರಿಗೆ ಗೊತ್ತಿದೆ. ಜಿಲ್ಲೆಯಲ್ಲಿ ನಡೆದ ಅನೇಕ ಪ್ರಕರಣಗಳಿಗೆ ಹಿಂಬಾಗಿಲಿನಿಂದ ಕುಮ್ಮಕ್ಕು ಕೊಡುತ್ತಿರುವ ಸಂಸದ ನಳಿನ್ ಕುಮಾರ್ ಕಟೀಲು ದೊಡ್ಡ ಭಯೋತ್ಪಾದಕರು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 5 ವರ್ಷಗಳ ಹಿಂದೆ ಇದ್ದ ಬಿಜೆಪಿ ಸರ್ಕಾರ ಏನೂ ಸಾಧನೆ ಮಾಡಿಲ್ಲ. ಕಳೆದ 5 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಾಧನೆ ಜನರಿಗೆ ಗೊತ್ತಿದೆ. ಸಾಧನೆಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ರಾಷ್ಟ್ರದಲ್ಲಿ ಪ್ರಥಮ ಸ್ಥಾನ ಲಭಿಸಿದೆ. ಉತ್ತಮ ಅಡಳಿತ ನೀಡುತ್ತಿರುವ ಮುಖ್ಯಮಂತ್ರಿಯವರನ್ನು ಭಯೋತ್ಪಾದಕರು ಎಂದು ಹೇಳಿಕೆ ನೀಡುವ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿರುವ ಸಂಸದರು ತನ್ನ ಯೋಗ್ಯತೆಗೆ ತಕ್ಕಂತೆ ಮಾತನಾಡಲಿ.ಇದು ಕಾಂಗ್ರೆಸ್ ಮೂಲಕ ಅವರಿಗೆ ಕೊಡುವ ಎಚ್ಚರಿಕೆ ಎಂದರು.

ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಉದ್ಯೋಗ ಭ್ಯಾಗ್ಯ, ಅನ್ನಭಾಗ್ಯ ಸೇರಿದಂತೆ ಬೇರೆ ಬೇರೆ ಸವಲತ್ತನ್ನು ನೀಡಿದ್ದಾರೆ. ಆದರೆ ನಮ್ಮ ಜಿಲ್ಲೆಯ ಸಂಸದರು ಕೇವಲ ಮಾಧ್ಯಮದ ಮೂಲಕ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆಯೇ ಹೊರತು ಯಾವುದೆ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಅಡಿಕೆ ವಿಷಕಾರಿ-ಕ್ಯಾಂಪ್ಕೋದ ವರದಿ

ಅಡಿಕೆ ನಿಷೇಧದ ಕುರಿತು ರೈತರಲ್ಲಿ ಆತಂಕವಿದೆ. ಈ ಕುರಿತು ಬಿಜೆಪಿ ಸಮರ್ಪಕ ಉತ್ತರ ಕೊಡುತ್ತಿಲ್ಲ. ಯುಪಿಎ ಸರ್ಕಾರ ಆಡಳಿತದಲ್ಲಿದ್ದ ವೇಳೆ ಅಡಿಕೆ ಕುರಿತು ಗೊಂದಲ ಉಂಟಾಗಿತ್ತು. ಆ ಸಂದರ್ಭದಲ್ಲಿ ಆಗಿನ ಮಂತ್ರಿ ಎಸ್.ಎಮ್.ಕೃಷ್ಣ ಅವರು ಅಡಿಕೆಗೆ ಬೆಂಬಲ ಬೆಲೆ ಕೊಡಿಸುವ ಮೂಲಕ ಅಡಿಕೆ ಬೆಳೆಗಾರರನ್ನು ರಕ್ಷಿಸಿದ್ದರು. ಕೇಂದ್ರ ಸರ್ಕಾರ ಅಡಿಕೆ ಕುರಿತು ವರದಿ ಕೇಳಿದ್ದ ವೇಳೆ ರಾಮ್ ಭಟ್ ಮತ್ತು ರಂಗಮೂರ್ತಿ ಅವರಿದ್ದ ಕ್ಯಾಂಪ್ಕೊ ಸಂಸ್ಥೆ ಅಡಿಕೆ ವಿಷಕಾರಿ ಎಂದು ವರದಿ ನೀಡಿದ್ದು, ಅದೇ ಗೊಂದಲ ಇವತ್ತಿನ ತನಕ ಮುಗಿದಿಲ್ಲ ಎಂದು ಹೇಮನಾಥ ಶೆಟ್ಟಿ ಅವರು ಹೇಳಿದರು.

ಅಡಿಕೆ ಬೆಳೆಗಾರರಿಗೆ ಬೆಂಬಲ ಕೊಡುತ್ತೇವೆ ಎಂದು ಹೇಳುವ ಸಂಸದರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಅಡಿಕೆ ಬೆಳೆಗಾರರ ಪರ ಹೋರಾಟಕ್ಕೆ ನಿಲ್ಲಬೇಕು. ಅಡಿಕೆ ಕೃಷಿಕರನ್ನು ಮರುಳು ಮಾಡಲು ಪೇಟೆಯಲ್ಲಿ ಕೆಲವೊಂದು ಕಡೆ ಮೋದಿ ಅವರ ಜೊತೆ ಅಡಿಕೆ ಪೊಟೋ ಹಾಕಿ ಕಟೌಟ್ ಅಳವಡಿಸುವವರು ತಾಕತ್ತಿದ್ದರೆ ಈ ತರದ ಕಟೌಟ್ ಹಾಕುವುದು ಬಿಟ್ಟು ಅಡಿಕೆ ಧಾರಣೆ ಏರಿಸಲಿ ಎಂದು ಅವರು ಸವಾಲು ಹಾಕಿದರು.

ಕರಾವಳಿಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕೇಂದ್ರ ಸರ್ಕಾರ ವಿವಿಧ ತಂತ್ರಗಾರಿಕೆ ನಡೆಸುತ್ತಿದ್ದು, ಅಡಿಕೆಯನ್ನು ನಿಷೇಧ ಮಾಡುವುದು ಅದರಲ್ಲಿ ಒಂದು ತಂತ್ರವಾಗಿದೆ. ಅಡಿಕೆ ನಿಷೇಧದ ಹೆಸರಿನಲ್ಲಿ ರೈತರನ್ನು ಹೆದರಿಸಿ, ಕಣ್ಣೀರು ಭರಿಸಿ ಮತ್ತೆ ಕಣ್ಣೀರು ಒರೆಸುವ ಡೊಂಬರಾಟ ಬಿಜೆಪಿ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ನಗರಸಭಾ ಸದಸ್ಯ ಅನ್ವರ್ ಖಾಸಿಂ,ಕಾಂಗ್ರೆಸ್ ಮುಖಂಡರಾದ ಲ್ಯಾನ್ಸಿ ಮಸ್ಕರೇನ್ಹ್‌ಸ್, ಹನೀಫ್ ಪುಣ್ಚತ್ತಾರು, ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.

ನಾನು ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಆಕಾಂಕ್ಷಿ-ಹೇಮನಾಥ ಶೆಟ್ಟಿ

 ಕಳೆದ ವಿಧಾನಸಭಾ ಚುನಾವಣೆಯ ವೇಳೆ ‘ನಾನು ಒಂದು ಅವಧಿಗೆ ಮಾತ್ರ ಅಭ್ಯರ್ಥಿ. ಮುಂದಿನ ಅವಧಿಗೆ ಹೇಮನಾಥ ಶೆಟ್ಟಿ ಅವರೇ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧಿಸಲಿದ್ದಾರೆ’ ಎಂದು ನನ್ನಲ್ಲಿ ವೈಯುಕ್ತಿಕವಾಗಿ ಮತ್ತು ಸಾರ್ವಜನಿಕ ವಲಯದಲ್ಲಿ ಶಕುಂತಳಾ ಶೆಟ್ಟಿ ಅವರು ಹೇಳಿಕೊಂಡಿದ್ದರು. ಅವರು ನುಡಿದಂತೆ ನಡೆಯಲಿದ್ದು, ಈ ಬಾರಿ ತಾನೇ ಅಭ್ಯರ್ಥಿತನಕ್ಕೆ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಬಿಜೆಪಿ ಪಕ್ಷ ತೊರೆದು ಸ್ವಾಭಿಮಾನಿ ವೇದಿಕೆ ರಚಿಸಿಕೊಂಡು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಅವರು ಸೋಲನ್ನು ಕಂಡಿದ್ದರೂ ಅವರು ಗಳಿಸಿದ ಮತವನ್ನು ಗಮನದಲ್ಲಿಟ್ಟು ಕೊಂಡು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಕಾಂಗ್ರೆಸ್‌ನಲ್ಲಿ ಟಿಕೇಟ್ ನೀಡಲಾಗಿತ್ತು. ಆಗ ನಾವೆಲ್ಲಾ ಒಮ್ಮತದಿಂದ ದುಡಿದು ಅವರನ್ನು ಗೆಲ್ಲಿಸಿದ್ದೇವೆ ಎಂದರು.

ಈಗಾಗಲೇ ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ 72 ವರ್ಷ ಆಗಿದೆ. ಈ ಅವಧಿಯಲ್ಲಿ ಅವರು ನನಗೆ ಬೆಂಬಲ ಕೊಡುತ್ತಾರೆಂಬ ನಂಬಿಕೆ ಇದೆ. ಕಳೆದ 35 ವರ್ಷಗಳಿಂದ ಸತತವಾಗಿ ಪಕ್ಷ ಸಂಘಟನೆಯಲ್ಲಿ ನಾನು ತೊಡಗಿದ್ದೆ. 9 ವರ್ಷ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಬೇರೆ ಬೇರೆ ಕಡೆಗಳಲ್ಲಿ ಕಾಂಗ್ರೆಸ್‌ನ್ನು ಬಲಿಷ್ಠವಾಗಿ ಬೆಳೆಸಿದ್ದೇನೆ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಅನೇಕ ಕಾರ್ಯಗಳನ್ನು ಮಾಡಿದ್ದೇನೆ. ಆದ್ದರಿಂದ ಈ ಅವಧಿಯಲ್ಲಿ ಶಕುಂತಳಾ ಶೆಟ್ಟಿ ಅವರು ನನಗೆ ಅವಕಾಶ ಮಾಡಿಕೊಡುತ್ತಾರೆ. ಕಾಂಗ್ರೆಸ್ ಗೆಲ್ಲಿಸಲು ನನಗೆ ಬೆಂಬಲ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
                                                                                                       
ಈಗಾಗಲೇ ಪಕ್ಷದ ನಾಯಕರನ್ನು ಭೇಟಿ ಮಾಡಿ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದೇನೆ. ಜಿಲ್ಲಾ ಪಂ., ತಾಲ್ಲೂಕು ಪಂ., ನಗರಸಭೆ, ಗ್ರಾಮ ಪಂ. ಸದಸ್ಯರ ಹಾಗೂ ಗ್ರಾಮ ಪಂ. ಮಟ್ಟದ ಕಾಂಗ್ರೆಸ್ ಸದಸ್ಯರ ಅಭಿಪ್ರಾಯ ಸಂಗ್ರಹದ ದಾಖಲೆಗಳನ್ನು ಪಕ್ಷದ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರ ಮುಂದಿಟ್ಟಿದ್ದೇನೆ. ಕೆಪಿಸಿಸಿ ಉಸ್ತುವಾರಿಗೂ ಮನವಿ ಮಾಡಿದ್ದೇನೆ. ಅವಕಾಶದ ಭರವಸೆಯನ್ನು ನಾಯಕರು ನೀಡಿದ್ದಾರೆ .ಕಾಂಗ್ರೆಸ್ ಅವಕಾಶ ಮಾಡಿಕೊಟ್ಟರೆ ಖಂಡಿತವಾಗಿಯೂ ಗೆಲ್ಲುತ್ತೇನೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ನಗರಸಭಾ ಸದಸ್ಯ ಅನ್ವರ್ ಖಾಸಿಂ, ಕಾಂಗ್ರೆಸ್ ಮುಖಂಡರಾದ ಲ್ಯಾನ್ಸಿ ಮಸ್ಕರೇನ್ಹ್‌ಸ್, ಹನೀಫ್ ಪುಣ್ಚತ್ತಾರು, ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X