Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಎಫ್‌ಐ ನಿಷೇಧಿಸಲು ಮುಂದಾಗದ...

ಪಿಎಫ್‌ಐ ನಿಷೇಧಿಸಲು ಮುಂದಾಗದ ಕಾಂಗ್ರೆಸ್: ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ6 March 2018 11:49 PM IST
share
ಪಿಎಫ್‌ಐ ನಿಷೇಧಿಸಲು ಮುಂದಾಗದ ಕಾಂಗ್ರೆಸ್: ಜಗದೀಶ್ ಶೆಟ್ಟರ್

ಕಾಪು, ಮಾ. 6: ರಾಜ್ಯದಲ್ಲಿ ಅರಾಜಕತೆ ಉಂಟಾಗಿದೆ. ಗೂಂಡಾಗಿರಿ, ಭ್ರಷ್ಟಾಚಾರದಿಂದ ಕಾಂಗ್ರೆಸ್ ವಿಚಲಿತವಾಗಿದೆ. ಚುನಾವಣೆ ಘೋಷಣೆಯಾಗಿಲ್ಲ, ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಮತದಾರರನ್ನು ಸೆಳೆಯಲು ನಾನಾ ರೀತಿಯ ಅಮಿಷ ಒಡ್ಡುವ ಕೆಲಸ ಕಾಂಗ್ರೆಸ್ ಅಭ್ಯರ್ಥಿಗಳು ಆರಂಭಿಸಿದ್ದಾರೆ. ಇದರಿಂದ ಅವರೆಷ್ಟು ಹಣ ಮಾಡಿದ್ದಾರೆ ಎಂಬುದು ಸಾಬೀತಾಗಿದೆ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು.

ಅವರು ಬಿಜೆಪಿಯ ಜನ ರಕ್ಷಾ ಸುರಕ್ಷಾ ಯಾತ್ರೆ ಅಂಗವಾಗಿ ಪಾಂಗಾಳ ಜನಾರ್ದನ ದೇವಸ್ಥಾನದಿಂದ ಕಾಪುವಿನವರೆಗೆ ಮಂಗಳವಾರ ನಡೆದ ಪಾದಯಾತ್ರೆ ಬಳಿಕ ಕಾಪು ಪೇಟೆಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದರು.

ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ನೆಲಕಚ್ಚಿದೆ. ಕರ್ನಾಟಕಕ್ಕೆ ರಾಹುಲ್ ಗಾಂಧಿ ಬಂದಷ್ಟು ಸಲ ಒಳ್ಳೆಯದೇ. ಕಾಂಗ್ರೆಸ್‌ಗೆ ಹಿಂದೂಗಳ ಓಟು ಬೇಕಾಗಿದೆ ಎಂದು ಈಗ ನೆನಪಾಗಿದ್ದು, ಅದಕ್ಕಾಗಿ ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಮಠಮಂದಿರಗಳ ಭೇಟಿ ಆರಂಭಿಸಿದ್ದಾರೆ ಎಂದರು.

ಮೋಸ ಮಾಡುವ ಸರಕಾರ ರಾಜ್ಯದಲ್ಲಿದೆ. ಹಿಂದೂಗಳಿಗೆ ನ್ಯಾಯ ಸಿಗಬೇಕು. ಇನ್ನೊಂದು ಬಾರಿ ಸಿದ್ದರಾಮಯ್ಯ ಅಧಿಕಾರ ಪಡೆದರೆ ರಾಜ್ಯದಲ್ಲಿ ಹಿಂದೂ ಗಳು ಉಳಿಯಕ್ಕಾಗಲ್ಲ. ಅರಬ್ಬೀ ಸಮುದ್ರಕ್ಕೆ ಬೀಳಬೇಕಾದ ಪರಿಸ್ಥಿತಿ ಬರಬಹುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸರ್ಕಾರ ಶಾಶ್ವತ ಅಲ್ಲ. ಪೊಲೀಸರೇ ನೀವು ಚೇಲಾಗಳಂತೆ ಕರ್ತವ್ಯ ಮಾಡದಿರಿ. ಅನ್ಯಾಯ ಮೋಸ ಮಾಡುವ ಸರಕಾರ ಇಲ್ಲಿದೆ. ಪೊಲೀಸರಿಗೆ ಸ್ವಾತಂತ್ರ್ಯ ಸಿಗಬೇಕು, ಚೇಲಾಗಳಂತೆ ವರ್ತಿಸುವರಿಗೆ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಕಳ ಶಾಸಕ ವಿ. ಸುನಿಲ್‌ಕುಮಾರ್ ಮಾತನಾಡಿ, ಕರಾವಳಿಗೆ ಮಸಿ ಬಳಿಯುವ ಕೆಲಸ ರಾಜ್ಯ ಸರಕಾರದಿಂದಾಗುತ್ತಿದೆ. ಹಿಂದೂ ಸಮಾಜ ನೆಮ್ಮದಿ ಯಿಂದ ಬದುಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಿಲ್ಲ. ಗೋಮಾಂಸ ತಿನ್ನುತ್ತೇನೆ ಎನ್ನುವ ಮುಖ್ಯಮಂತ್ರಿಯಿಂದ ಯಾವರೀತಿಯ ನ್ಯಾಯ ನಿರೀಕ್ಷಿಸಬಹುದು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿ ಸಡಗರ ಸಂಭ್ರಮದಿಂದ ನಡೆಯಲಿಲ್ಲ. 144 ಸೆಕ್ಷನ್ ಮೂಲಕ ಆಚರಣೆ ಮಾಡುವ ಸರಕಾರಕ್ಕೆ ನೈತಿಕತೆ ಇದೆಯೇ ಎಂದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕೆ. ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಉದಯಕುಮಾರ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಕೆ ಸುರೇಶ್ ನಾಯಕ್, ಶ್ಯಾಮಲಾ ಕುಂದರ್, ಯಶಪಾಲ್ ಸುವರ್ಣ, ಕಟಪಾಡಿ ಶಂಕರ ಪೂಜಾರಿ, ನಯನ ಗಣೇಶ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿತೇಂದ್ರ ಶೆಟ್ಟಿ, ಮುರಲೀಧರ ಪೈ, ಶ್ರೀಶ ನಾಯಕ್, ಸಂದೀಪ್ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X