Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಫುಲೆ ಬೀಸಿದ ರೈತನ ಬಾರುಕೋಲು

ಫುಲೆ ಬೀಸಿದ ರೈತನ ಬಾರುಕೋಲು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ7 March 2018 12:10 AM IST
share
ಫುಲೆ ಬೀಸಿದ ರೈತನ ಬಾರುಕೋಲು

ಜ್ಯೋತಿಬಾ ಫುಲೆ ಆಧುನಿಕ ಭಾರತದ ಚರಿತ್ರೆಯಲ್ಲಿ ತೀಕ್ಷ್ಣ ಮುನ್ನೋಟವಿದ್ದ ಸಮಾಜ ಸುಧಾರಕ, ಸಾಮಾಜಿಕ ಕ್ರಾಂತಿಯ ಹರಿಕಾರ. ಮಹಾರಾಷ್ಟ್ರದ ಶೂದ್ರ ಉಪಜಾತಿಯಾದ ಮಾಲಿ ಜಾತಿಯಲ್ಲಿ ಹುಟ್ಟಿದ ಇವರು ಜಾತಿ ವಿನಾಶ ಚಳವಳಿ, ರೈತ ಹೋರಾಟ, ಪರಿಸರ ಹೋರಾಟ, ಮಹಿಳಾ ಹೋರಾಟಗಳಲ್ಲಿ ಮೊದಲಿಗರು. ಅವರ ಹೋರಾಟದ ಮೂಸೆಯಲ್ಲಿ ಅರಳಿರುವ ಕೃತಿ ‘ರೈತನ ಬಾರುಕೋಲು’. ಇದನ್ನು ತೆಲುಗಿನಲ್ಲಿ ಹಾರತಿ ವಾಗೀಶನ್ ಅವರು ಅನುವಾದಿಸಿದ್ದು, ತೆಲುಗಿನಿಂದ ನಂಜುಂಡಾಚಾರಿ ಕನ್ನಡಕ್ಕಿಳಿಸಿದ್ದಾರೆ. ಲಡಾಯಿ ಪ್ರಕಾಶನ, ಗದಗ ಕೃತಿಯನ್ನು ಹೊರತಂದಿದೆ.
 ರೈತನ ಬಾರುಕೋಲು ಮುಖವಾಗಿ ಮಧ್ಯಮವರ್ಗದ ಮತ್ತು ಸಣ್ಣ ರೈತರು ವಸಾಹತುಕಾಲದ ಮಹಾರಾಷ್ಟ್ರದಲ್ಲಿ ಎದುರಿಸಿದ ಸಂಕಷ್ಟಗಳನ್ನು ಅಂದಿನ ಗವರ್ನರ್ ಜನರಲ್‌ಗೆ ವಿವರಿಸುವ ಪ್ರಯತ್ನವಾಗಿದೆ. ಅಂದಿನ ರೈತಾಪಿ ಜನರ ಸಾಮಾಜಿಕ ಮತ್ತು ಆರ್ಥಿಕ ಜೀವನಚಿತ್ರವನ್ನು ಈ ಕೃತಿ ಗಾಢವಾಗಿ ನಮ್ಮ ಮನಸ್ಸಿಗೆ ಮುಟ್ಟುವಂತೆ ಮಾಡುತ್ತದೆ. ಅಂದಿನ ಸಮಾಜದ ದುಸ್ಥಿತಿಯನ್ನು ಮೇಲೆ ತರುವಲ್ಲಿ ಬ್ರಿಟಿಷ್ ಆಡಳಿತಗಾರರು ಸಮರ್ಥರು ಎನ್ನುವುದನ್ನು ಅರಿತವರು ಫುಲೆ. ಈ ಹಿನ್ನೆಲೆಯಲ್ಲಿ ಭಾರತೀಯ ಸಮಾಜವನ್ನು ಬ್ರಿಟಿಷರಿಗೆ ಮನವರಿಕೆ ಮಾಡುವ ಉದ್ದೇಶವನ್ನು ಕೃತಿ ಹೊಂದಿದೆ. ಶೋಷಣಾ ಪ್ರಧಾನವಾದ ವಸಾಹತು ಆಡಳಿತದಲ್ಲಿ ವೌಲಿಕವಾಗಿ ಬಯಲು ಸೀಮೆಯ ಕಪ್ಪು ಮಣ್ಣಿನ ನೆಲವಿರುವ ಮಹಾರಾಷ್ಟ್ರ ರೈತರು ಎದುರಿಸುತ್ತಿದ್ದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ವಿಶ್ಲೇಷಣೆಯಾಗಿದೆ ಈ ಕೃತಿ. 1883ರಲ್ಲಿ ಕೃತಿ ಪ್ರಕಟವಾಯಿತು.
ಇಲ್ಲಿ ಒಟ್ಟು 5 ಅಧ್ಯಾಯಗಳಿವೆ. ಸ್ವಾರ್ಥಿಗಳಾದ ಭಟ್ ಬ್ರಾಹ್ಮಣರ ಆಧಿಪತ್ಯ, ಬಿಳಿಯ ನೌಕರರು ಮತ್ತು ಅವರ ಭೋಗ ಲಾಲಸೆ, ಆರ್ಯ ಬ್ರಾಹ್ಮಣರ ಚರಿತ್ರೆ, ಇಂದಿನ ವ್ಯವಸಾಯ, ರೈತರ ಸ್ಥಿತಿಗತಿಗಳು, ಶೂದ್ರ ರೈತರ ಪರವಾಗಿ ಸೂಚನೆಗಳು ಮತ್ತು ಸರಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಈ ಕೃತಿಯಲ್ಲಿ ವಿವರಗಳಿವೆ. ವರ್ತಮಾನದ ಸಾಂಸ್ಕೃತಿಕ ರಾಜಕೀಯವನ್ನು ಎದುರಿಸುವುದಕ್ಕೆ ಬೇಕಾದ ಸಮಿತ್ತುಗಳನ್ನು ನಾವು ಈ ಕೃತಿಯಿಂದ ಪಡೆದುಕೊಳ್ಳಬಹುದಾಗಿದೆ.98 ಪುಟಗಳ ಈ ಕೃತಿಯ ಮುಖಬೆಲೆ 80 ರೂಪಾಯಿ. ಆಸಕ್ತರು 93410 88736 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X