ಆರೋಪಿ ತೇಜ್ ರಾಜ್ ಶರ್ಮಾನಿಗೆ 5 ದಿನಗಳ ಪೊಲೀಸ್ ಕಸ್ಟಡಿ
ನ್ಯಾ.ವಿಶ್ವನಾಥ್ ಶೆಟ್ಟಿಯವರಿಗೆ ಇರಿದ ಪ್ರಕರಣ
ಬೆಂಗಳೂರು, ಮಾ.8: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿ ತೇಜ್ ರಾಜ್ ಶರ್ಮಾ ನನ್ನು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ತುಮಕೂರಿನ ಆರೋಪಿ ತೇಜ್ ರಾಜ್ ಶರ್ಮಾ ನನ್ನು ಇಂದು ಬೆಳಗ್ಗೆ 3 ಗಂಟೆಗೆ ವಿಧಾನ ಸೌಧ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆತನಿಗೆ ಪೊಲೀಸ್ ಕಸ್ಟಡಿ ವಿಧಿಸಿತು.
ಬುಧವಾರ ಲೋಕಾಯುಕ್ತ ಕಚೇರಿಗೆ ಬಂದಿದ್ದ ತೇಜ್ ರಾಜ್ ಶರ್ಮಾ ಎಂಬಾತನು ವಿಶ್ವನಾಥ್ ಶೆಟ್ಟಿ ಅವರಿಗೆ ಮೂರು ಬಾರಿ ಚೂರಿಯಿಂದ ಇರಿದಿದ್ದಾನೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿರುವ ವಿಶ್ವನಾತ್ ಶೆಟ್ಟಿ ಅವರು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story