ರಸ್ತೆ ಅಪಘಾತ: 7 ಮಂದಿ ಮೃತ್ಯು

ಮುಝಾಫರಪುರ, ಮಾ. 8: ಟೆಂಪೋ ಹಾಗೂ ಆಯಿಲ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಕಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 2 ಗಂಟೆಗೆ ಈ ಅಪಘಾತ ಸಂಭವಿಸಿದೆ. ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಇಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಮೃತಪಟ್ಟಿದ್ದಾರೆ ಎಂದು ಮುಝಾಫರಪುರ ಡೆಪ್ಯುಟಿ ಪೊಲೀಸ್ ಅಧೀಕ್ಷಕ ಗೌರವ್ ಪಾಂಡೆ ತಿಳಿಸಿದ್ದಾರೆ. ಗಾಯಗೊಂಡ 7 ಮಂದಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿವಾಹ ಸಮಾರಂಭವೊಂದರಲ್ಲಿ ಪಾಲ್ಗೊಂಡು ಸಮಷ್ಠಿಪುರದ ತೇಜ್‌ಪುರಕ್ಕೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಆಯಿಲ್ ಟ್ಯಾಂಕರ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಟ್ಯಾಂಕರ್‌ನ ಚಾಲಕ ಪರಾರಿಯಾಗಿದ್ದಾನೆ ಎಂದು ಪಾಂಡೆ ಹೇಳಿದ್ದಾರೆ.
Next Story





