Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ...

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು: ಜದಾ

ವಾರ್ತಾಭಾರತಿವಾರ್ತಾಭಾರತಿ8 March 2018 9:20 PM IST
share

ಬೆಂಗಳೂರು, ಮಾ.8: ಮಹಿಳೆಯರು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಮುಖಂಡರಾದ ಜದಾ ತಿಳಿಸಿದ್ದಾರೆ.

ಮಹಿಳಾ ದಿನಾಚರಣೆಯ ಅಂಗವಾಗಿ ಭಾರತ ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಅನೇಕ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪುರುಷ ಪ್ರಧಾನ ವ್ಯವಸ್ಥೆ ಇಂದಿಗೂ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಮಹಿಳೆಯರನ್ನು ಶೋಷಣೆಗೆ ಒಳಪಡಿಸುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದರು.

ದೇಶದಲ್ಲಿ ಅಧಿಕಾರದಲ್ಲಿರುವ ಸರಕಾರಗಳು ಮಹಿಳೆಯರ ರಕ್ಷಣೆಗೆ ಯಾವುದೇ ಇಚ್ಛಾಶಕ್ತಿಯನ್ನು ತೋರಿಸುತ್ತಿಲ್ಲ. ಸಂಘಪರಿವಾರ ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮಹಿಳೆಯರ ಮೇಲೆ ಭೀಕರವಾದ ಹಲ್ಲೆ ಮಾಡುತ್ತಿದ್ದರೂ ಕಾನೂನು ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತರೂಢ ಸರಕಾರಗಳು ನಿರ್ಲಕ್ಷ ತೋರಿಸುತ್ತಿವೆ. ಹೀಗಾಗಿ, ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮುಂದೆ ಬರಬೇಕು. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇತ್ತೀಚಿಗೆ ತ್ರಿಪುರಾ ಚುನಾವಣೆಯ ನಂತರ ಲೆನಿನ್ ಪ್ರತಿಮೆಯನ್ನು ನಾಶ ಮಾಡಿರುವ ಸಂಘ ಪರಿವಾರದ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿದ ಅವರು, ಲೆನಿನ್, ಅಂಬೇಡ್ಕರ್ ಹಾಗೂ ಪೆರಯಾರ್‌ರವರ ಸಿದ್ಧಾಂತ ಮತ್ತು ಪಾತ್ರ ಮಹಿಳಾ ಚಳುವಳಿಯಲ್ಲಿ ಮಹತ್ವವಾದದ್ದು ಮತ್ತು ಸ್ಮರಣೀಯ ಎಂದು ಹೇಳಿದರು.

ಮಹಿಳಾ ಮುಖಂಡರಾದ ಜ್ಯೋತಿ ಮಾತನಾಡಿ, ನಮ್ಮ ದೇಶದ ಮಹಿಳಾ ಚಳುವಳಿಯ ಮುಖ್ಯ ರಾಜಕೀಯ ಬೇಡಿಕೆಯಾದ ವಿಧಾನ ಸಭೆ ಮತ್ತು ಸಂಸತ್ತಿನಲ್ಲಿ 33% ಮಳೆಯರಿಗೆ ಮೀಸಲಾತಿ ನೀಡಬೇಕು ಎಂಬ ಅಂಶವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಡೆಗಣಿಸಿವೆ. ಎರಡೂ ರಾಜಕೀಯ ಪಕ್ಷಗಳ ಮಹಿಳೆಯರ ಕುರಿತು ಮೃದು ಧೋರಣೆ ಅನುಸರಿಸುತ್ತಿವೆ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಜಯಮ್ಮ, ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X