Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರು ಸ್ವಾವಲಂಬಿ ಬದುಕು...

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮುಖ್ಯ ವಾಹಿನಿಗೆ ಬರಬೇಕು: ಎಂಎಲ್‍ಸಿ ವೀಣಾ ಅಚ್ಚಯ್ಯ

ವಾರ್ತಾಭಾರತಿವಾರ್ತಾಭಾರತಿ8 March 2018 10:57 PM IST
share
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮುಖ್ಯ ವಾಹಿನಿಗೆ ಬರಬೇಕು: ಎಂಎಲ್‍ಸಿ ವೀಣಾ ಅಚ್ಚಯ್ಯ

ಮಡಿಕೇರಿ, ಮಾ.8: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಆತ್ಮವಿಶ್ವಾಸವನ್ನು ತೋರಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ.   

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ತ್ರೀಶಕ್ತಿ ಒಕ್ಕೂಟ ಇವರ ಸಹಯೋಗದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳೆಯರಿಗಾಗಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ, ಆ ದಿಸೆಯಲ್ಲಿ ಪ್ರಸಕ್ತ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 50 ಸಾವಿರ ರೂ ಸಹಾಯಧನದಲ್ಲಿ ದ್ವಿಚಕ್ರ ವಾಹನ ಕಲ್ಪಿಸಲು ಪ್ರಕಟಿಸಿದೆ. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಆತ್ಮವಿಶ್ವಾಸದ ಬದುಕಿಗೆ ಸಹಕಾರಿಯಾಗಲಿದೆ ಎಂದು ವೀಣಾ ಅಚ್ಚಯ್ಯ ಅಭಿಪ್ರಾಯಪಟ್ಟರು.  

ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಸ್ತ್ರೀಶಕ್ತಿ ಗುಂಪುಗಳು ಗ್ರಾಮೀಣ ಬ್ಯಾಂಕುಗಳು ಇದ್ದಂತೆ, ಆ ನಿಟ್ಟಿನಲ್ಲಿ ಸ್ತ್ರೀಶಕ್ತಿ ಗುಂಪುಗಳು ಸ್ವಾವಲಂಬಿ ಬದುಕಿಗೆ ಸಹಕಾರಿ ಎಂದು ಹೇಳಿದರು. 

ಪ್ರತಿಯೊಬ್ಬರ ಬದುಕು ಚೆನ್ನಾಗಿ ಕಾಣಬೇಕಾದರೆ ಹೆಣ್ಣು ಅಥವಾ ಗಂಡು ಯಾವುದೇ ಮಗು ಇರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು. ಸಮ ಸಮಾಜ ನಿರ್ಮಾಣಕ್ಕೆ ಮಹಿಳೆಯರು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಟಿ.ಪಿ.ರಮೇಶ್ ಹೇಳಿದರು.  

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಅವರು ಮಾತನಾಡಿ, ರಾಷ್ಟ್ರದಲ್ಲಿ ಕಾನೂನಿಗೆ ಬುನಾದಿ, ದೇಶದ ಸಂವಿಧಾನವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ಅರಿವು ಹೊಂದಿರಬೇಕು ಎಂದರು.  

ಭಾರತದ ಸಂವಿಧಾನದಲ್ಲಿ ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಇದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು. ಕಾನೂನಿನಲ್ಲಿ ಮಹಿಳೆಯರಿಗೆ ವಿಶೇಷ ರಕ್ಷಣೆ ಒದಗಿಸಿದೆ. ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ ಮತ್ತಿತರ ಮಹಿಳೆಯರು ರಾಷ್ಟ್ರದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ ಎಂದು ಅವರು ವಿವರಿಸಿದರು. 

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ, ಮಹಿಳಾ ದಿನಾಚರಣೆಯನ್ನು ಪ್ರತಿ ಕುಟುಂಬದಲ್ಲಿ ಸಂಭ್ರಮ, ಸಡಗರದಿಂದ ಆಚರಿಸುವಂತಾಗಬೇಕು ಎಂದು ಕರೆ ನೀಡಿದರು. 

ಹಿಂದೆ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವ ಕಾಲವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ಬದಲಾಗಿದೆ. ಸಮಾಜದಲ್ಲಿ ಹೆಣ್ಣಿಗೆ ಸಮಾನ ಅವಕಾಶಗಳಿದ್ದು, ಹೆಣ್ಣು ಮಕ್ಕಳಿಗೆ ಒಳ್ಳೆಯ ಮತ್ತು ಕಡ್ಡಾಯ ಶಿಕ್ಷಣ ನೀಡುವಂತಾಗಬೇಕು ಎಂದರು. 

‘ಮಹಿಳೆಯರು ದುಡಿಯುವಂತಾಗಬೇಕು. ದುಡಿದು ಬದುಕಿದರೆ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು, ಇದರಿಂದ ಆತ್ಮಾಭಿಮಾನ ಮತ್ತು ಆತ್ಮಸ್ಥೈರ್ಯ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.’   

ವಿಶ್ವ ಮಹಿಳಾ ದಿನಾಚರಣೆ ಈ ಬಾರಿ ‘ಪ್ರಗತಿಗಾಗಿ ಹೋರಾಟ-ಅಭಿವೃದ್ಧಿಗೆ ಕೈಜೋಡಿಸಿ’ ಎಂಬ ದ್ಯೇಯ ವಾಕ್ಯವನ್ನು ಹೇಳಲಾಗಿದ್ದು, ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.  

ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತನಾಡಿ ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ. ಆದ್ದರಿಂದ ಹೆಣ್ಣು ಸಮಾಜವನ್ನು ತಿದ್ದುತ್ತಾಳೆ ಮತ್ತು ಇತರರಿಗೆ ಕಲಿಸುತ್ತಾಳೆ. ಒಂದು ಸಂಸಾರದ ನೌಕೆಯನ್ನು ಸಾಗಿಸುವಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.  
 ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅದ್ಯಕ್ಷರಾದ ಎಂ.ಕೆ.ವಿಜು ಸುಬ್ರಮಣಿ ಮಾತನಾಡಿ ಭಾರತ ಮಾತೆಗೆ ಮಾತೃ ಸ್ಥಾನವನ್ನು ನೀಡಿದ್ದೇವೆ. ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆಯರು ಇರುತ್ತಾರೆ ಎಂದು ತಿಳಿಸಿದರು.

ತಾ.ಪಂ.ಅಧ್ಯಕ್ಷರಾದ ತೆಕ್ಕಡ ಶೋಭಾ ಮೋಹನ್ ಮಾತನಾಡಿ ತಾಯಿ ಮಗುವನ್ನು ಬೆಳಸಿ ರಕ್ಷಣೆ ಮಾಡುವಲ್ಲಿ ಅವಳ ಪಾತ್ರ ಮುಖ್ಯವಾದದ್ದು, ಆರ್ಥಿಕವಾಗಿ ಸಬಲರಾಗಿ ತಮ್ಮ ಬದುಕು ಕಟ್ಟಿಕೊಳ್ಳಿ ಎಂದು ತಿಳಿಸಿದರು. 

ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು ಮತದಾನದ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು, ಅಂಗನವಾಡಿಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸ್ತೀಶಕ್ತಿ ಉತ್ತಮ ಗುಂಪುಗಳಿಗೆ  ಪ್ರಶಸ್ತಿ ಹಾಗೂ ನಗದು ಬಹುಮಾನ ವಿತರಿಸಲಾಯಿತು. 

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಿಜಯ ಕುಮಾರ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಜಿ.ಪಂ.ಸದಸ್ಯರಾದ ಕೆ.ಪಿ.ಚಂದ್ರಕಲಾ, ಸುನಿತಾ, ಸ್ತ್ರೀಶಕ್ತಿ ಒಕ್ಕೂಟಗಳ ಅಧ್ಯಕ್ಷರಾದ ಮೇರಿ ಅಂಬೂದ, ಕವಿತಾ, ರಜನಿ, ರೆಹನಾ ಬಾನು, ತಾರಾಮಣಿ, ರತ್ನ ಇತರರು ಹಾಜರಿದ್ದರು.    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X