Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ : ಮಾ.11 ರಂದು 2 ನೇ ಸುತ್ತಿನ...

ಮಡಿಕೇರಿ : ಮಾ.11 ರಂದು 2 ನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 March 2018 4:39 PM IST
share
ಮಡಿಕೇರಿ : ಮಾ.11 ರಂದು 2 ನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮ

ಮಡಿಕೇರಿ, ಮಾ.9 :ಪೋಲಿಯೊ ಮುಕ್ತ ದೇಶವನ್ನಾಗಿಸಲು ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳ ಸಹಕಾರ ಅದರಲ್ಲೂ ಸ್ವಯಂ ಸೇವಾ ಸಂಘಗಳು ಕೂಡ ಅಪಾರ ಸೇವೆಯನ್ನು ನೀಡಿದ್ದು, ಇದೆಲ್ಲದರ ಫಲವಾಗಿ ಈ ದೇಶವು ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಮತ್ತೆ ರಾಜ್ಯಾದ್ಯಂತ 2ನೇ ಸುತ್ತಿನ ಪಲ್ಸ್‍ಪೋಲಿಯೋ ಕಾರ್ಯಕ್ರಮವು ಮಾ.11 ರಂದು ನಡೆಯಲಿದ್ದು, ಐದು ವರ್ಷದೊಳಿಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಹನಿ ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು ಕೋರಿದ್ದಾರೆ.   

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಮಾರ್ಚ್ 11 ರಂದು ಬೂತ್‍ಗಳಲ್ಲಿ ಪೋಲಿಯೊ ಹನಿ ಹಾಕಲಾಗುತ್ತದೆ. ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೊ ಹನಿ ಹಾಕಲಾಗುತ್ತದೆ ಎಂದು ಅವರು ತಿಳಿಸಿದರು. 

ಪ್ರಥಮ ಹಂತದ ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ವಿಗೊಳ್ಳಲು ಎಲ್ಲಾ ಇಲಾಖೆಗಳು, ರೋಟರಿ, ಲಯನ್ಸ್ ಹಾಗೂ ಸಂಘಸಂಸ್ಥೆಗಳು ಸಹಕಾರ ನೀಡಿದ್ದರು, ಅದೇ ರೀತಿ ಎರಡನೇ ಹಂತದಲ್ಲಿಯೂ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮನವಿ ಮಾಡಿದರು.  

ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕಾರ ನೀಡಬೇಕೆಂದು ಕೋರಿದರು. 
ಕೊಡಗು ಜಿಲ್ಲೆಯು ಒಟ್ಟು 5,72,812 ಜನಸಂಖ್ಯೆಯನ್ನು ಹೊಂದಿದ್ದು, ಇದರಲ್ಲಿ ನಗರ 55,951, ಗ್ರಾಮೀಣ 5,16,861 ಜನಸಂಖ್ಯೆಯನ್ನು ಹೊಂದಿದೆ. ಇದರಲ್ಲಿ 0-5 ವರ್ಷಕ್ಕಿಂತ ಕಡಿಮೆ ಇರುವ 40,627 ಮಕ್ಕಳು ಈ ಜಿಲ್ಲೆಯಲ್ಲಿದ್ದು, ಇವರಲ್ಲಿ 4,656 ಮಕ್ಕಳು ನಗರ ಪ್ರದೇಶದಲ್ಲಿದ್ದು, 35,971 ಮಕ್ಕಳು ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಇವರಲ್ಲಿ ವಲಸೆ ಬಂದಿರುವ ಮಕ್ಕಳು 2594 ಹಾಗೂ  ಹೈ ರಿಸ್ಕ್ ಪ್ರದೇಶದಲ್ಲಿ ವಾಸಿಸುತ್ತಿರುವ ಮಕ್ಕಳು 12,741 ಒಟ್ಟು 15,394 ಮಕ್ಕಳನ್ನು ಗುರುತಿಸಲಾಗಿದೆ. 

ಆರ್‍ಸಿಎಚ್ ಅಧಿಕಾರಿ ಡಾ.ನಿಲೇಶ್ ಅವರು ಮಾತನಾಡಿ ಪೋಲಿಯೋ ಕಾರ್ಯಕ್ರಮಕ್ಕೆ 470 ಬೂತ್‍ಗಳನ್ನು ತೆರೆಯಲಾಗುತ್ತದೆ. 20 ಟ್ರಾನ್ಸಿಟ್ ಬೂತ್‍ಗಳು ಹಾಗೂ ಮಡಿಕೇರಿ ತಾಲ್ಲೂಕಿನಲ್ಲಿ 2, ವಿರಾಜಪೇಟೆ ತಾಲ್ಲೂಕಿನಲ್ಲಿ 2 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 02 ಒಟ್ಟು 06 ಸಂಚಾರಿ ತಂಡಗಳ ವ್ಯವಸ್ಥೆಯನ್ನು ಮಾಡಲಾಗಿದೆ. 1,932 ಜನ ಲಸಿಕೆ ಹಾಕುವವರನ್ನು ಮತ್ತು ಈ ಕಾರ್ಯಕ್ರಮದ 87 ಮಂದಿ ಮೇಲ್ವಿಚಾರಕರನ್ನು ಹಾಗೂ 966 ಮನೆ ಮನೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯು ಇತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X