Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 25,000 ರೈತರಿಂದ 180 ಕಿ.ಮೀ. ಕಾಲ್ನಡಿಗೆ...

25,000 ರೈತರಿಂದ 180 ಕಿ.ಮೀ. ಕಾಲ್ನಡಿಗೆ ಜಾಥಾ

ವಾರ್ತಾಭಾರತಿವಾರ್ತಾಭಾರತಿ9 March 2018 7:27 PM IST
share
25,000 ರೈತರಿಂದ 180 ಕಿ.ಮೀ. ಕಾಲ್ನಡಿಗೆ ಜಾಥಾ

ಥಾಣೆ,ಮಾ.9: ತಮ್ಮ ಸಾಲಗಳನ್ನು ಮನ್ನಾ ಮಾಡುವ ಬೇಡಿಕೆಯೊಂದಿಗೆ ಮುಂಬೈಗೆ ಜಾಥಾ ಕೈಗೊಂಡಿರುವ ಸುಮಾರು 25,000 ರೈತರು ಶುಕ್ರವಾರ ಥಾಣೆಯನ್ನು ತಲುಪಿದ್ದಾರೆ. ಸೋಮವಾರ ಮುಂಬೈನಲ್ಲಿ ವಿಧಾನಸಭೆಗೆ ಮುತ್ತಿಗೆ ಹಾಕಲು ಪ್ರಯತ್ನಿಸುವ ಮೂಲಕ ಅವರು ರಾಜ್ಯ ಸರಕಾರದ ರೈತವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

 ಹೆಚ್ಚಿನ ರೈತರು ಕೆಂಪು ಅಂಗಿ ಮತ್ತು ಕೆಂಪು ಟೋಪಿಗಳನ್ನು ಧರಿಸಿದ್ದು, ಕುಡುಗೋಲು ಮತ್ತು ಸುತ್ತಿಗೆಯ ಚಿತ್ರವಿರುವ ಧ್ವಜಗಳನ್ನು ಹಿಡಿದು ಸಾಗುತ್ತಿದ್ದಾರೆ. ಮಂಗಳವಾರ ನಾಸಿಕ್‌ನಿಂದ 180 ಕಿ.ಮೀ.ದೂರದ ಮುಂಬೈಗೆ ತಮ್ಮ ಕಾಲ್ನಡಿಗೆ ಜಾಥಾ ಆರಂಭಿಸಿರುವ ಈ ರೈತರು ಪ್ರತಿದಿನ ಸುಮಾರು 30 ಕಿ.ಮೀ.ಗಳನ್ನು ಕ್ರಮಿಸುತ್ತಿದ್ದಾರೆ.

ಸಂಪೂರ್ಣ ಸಾಲ ಮನ್ನಾ ಮತ್ತು ಸ್ವಾಮಿನಾಥನ್ ಸಮಿತಿಯ ವರದಿಯ ಜಾರಿ ಅವರ ಮುಖ್ಯ ಬೇಡಿಕೆಗಳಾಗಿವೆ.

ರೈತರ ನಿರಂತರ ಪ್ರತಿಭಟನೆಗಳಿಂದಾಗಿ ಮಹಾರಾಷ್ಟ್ರ ಸರಕಾರವು ಒತ್ತಡದಲ್ಲಿ ಸಿಲುಕಿದೆ. ಸರಕಾರವು ತಮಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎನ್ನುವುದು ರೈತರ ಆರೋಪವಾಗಿದೆ. ಸರಕಾರವು ಕಳೆದ ವರ್ಷದ ಜೂನ್‌ನಲ್ಲಿ 34,000 ಕೋ.ರೂ.ಗಳ ಶರ್ತುಬದ್ಧ ಸಾಲಮನ್ನಾವನ್ನು ಪ್ರಕಟಿಸಿತ್ತು.

ಕಳೆದ ವರ್ಷದ ಜೂನ್‌ನಿಂದೀಚಿಗೆ 1,753 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಾಥಾವನ್ನು ಸಂಘಟಿಸಿರುವ ಅಖಿಲ ಭಾರತ ಕಿಸಾನ್ ಸಭಾ ಹೇಳಿದೆ.

ಕೀಟಗಳಿಂದ ಹತ್ತಿಬೆಳೆಗೆ ಹಾನಿ ಮತ್ತು ಆಲಿಕಲ್ಲು ಹಾಗೂ ಅಕಾಲ ಮಳೆಯಿಂದಾಗಿ ಪೈರುನಷ್ಟಕ್ಕೆ ಪರಿಹಾರವಾಗಿ 2,400 ಕೋ.ರೂ.ಗಳ ಆರ್ಥಿಕ ನೆರವು ಕೋರಿ ಮಹಾರಾಷ್ಟ್ರ ಸರಕಾರವು ಕೇಂದ್ರಕ್ಕೆ ಅವಹಾಲು ಸಲ್ಲಿಸಿದೆ ಎಂದು ಕೃಷಿ ಸಚಿವ ಪಾಂಡುರಂಗ ಫಂಡ್ಕರ್ ಅವರನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ. ಆದರೆ ಕೇಂದ್ರದಿಂದ ಈವರೆಗೆ ಯಾವುದೇ ಹಣಕಾಸು ಬಿಡುಗಡೆಯಾಗಿಲ್ಲ.

 ಬುಡಕಟ್ಟು ಗ್ರಾಮಗಳು ಮುಳುಗುವುದನ್ನು ತಡೆಯಲು ನಾಸಿಕ್, ಥಾಣೆ ಮತ್ತು ಪಾಲ್ಘರ್‌ಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ನದಿ ಜೋಡಣೆ ಯೋಜನೆಯಲ್ಲಿ ಸಂಪೂರ್ಣ ಬದಲಾವಣೆಯನ್ನು ಮಾಡಬೇಕು ಎಂದೂ ರೈತರು ಒತ್ತಾಯಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X