ಗಾಂಜಾ ಮಾರಾಟ : ಇಬ್ಬರ ಬಂಧನ

ಶಿವಮೊಗ್ಗ, ಮಾ. 9: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಈರ್ವರನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಅನುಪಿನಕಟ್ಟೆಯ ಸಮೀಪ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಇಂದ್ರಾನಗರ 1 ನೇ ಕ್ರಾಸ್ ನಿವಾಸಿ ಮುಜೀಬ್ ಯಾನೆ ಮುಜ್ಜು (23) ಹಾಗೂ ಉಂಬ್ಳೇಬೈಲು ಗ್ರಾಮದ ನಿವಾಸಿ ಅವಿನಾಶ್ (26) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಇವರಿಂದ ಅಂದಾಜು 3000 ರೂ. ಮೌಲ್ಯದ 100 ಗ್ರಾಂ ತೂಕದ ಗಾಂಜಾ, 210 ನಗದನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಟಿಪ್ಪುನಗರದ ಕಡ್ಡಿ ಯಾನೆ ಕಡ್ಡಿಪುಡಿ ಎಂಬಾತನಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದಾಗಿ ಪೊಲೀಸರ ವಿಚಾರಣೆಯ ವೇಳೆ ತಿಳಿಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





