Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ : ಆದಾಯ ತೆರಿಗೆ ಪತ್ರಾಂಕಿತ...

ದಾವಣಗೆರೆ : ಆದಾಯ ತೆರಿಗೆ ಪತ್ರಾಂಕಿತ ಅಧಿಕಾರಿಗಳ ಸಂಘದ ದ್ವೈವಾರ್ಷಿಕ ಮಹಾಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 March 2018 11:48 PM IST
share
ದಾವಣಗೆರೆ : ಆದಾಯ ತೆರಿಗೆ ಪತ್ರಾಂಕಿತ ಅಧಿಕಾರಿಗಳ ಸಂಘದ ದ್ವೈವಾರ್ಷಿಕ ಮಹಾಸಮ್ಮೇಳನ

ದಾವಣಗೆರೆ,ಮಾ.9 : ಕರ್ನಾಟಕ-ಗೋವಾ ವಲಯ ಸಿಬ್ಬಂದಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದು ಕರ್ನಾಟಕ-ಗೋವಾ ರಾಜ್ಯದ ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತ ರಜನೀಶ್ ಕುಮಾರ್ ಭರವಸೆ ನೀಡಿದರು.

ಶುಕ್ರವಾರ ನಗರದ ಎಂಬಿಎ ಕಾಲೇಜಿನಲ್ಲಿ ಕರ್ನಾಟಕ ಮತ್ತು ಗೋವಾ ರಾಜ್ಯಗಳ ಆದಾಯ ತೆರಿಗೆ ಪತ್ರಾಂಕಿತ ಅಧಿಕಾರಿಗಳ ಸಂಘದ ದ್ವೈವಾರ್ಷಿಕ ಮಹಾಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ತೆರಿಗೆ ಇಲಾಖೆಯ ಉನ್ನತ ಹಂತದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇನ್ಸ್‍ಪೆಕ್ಟರ್ ಹುದ್ದೆಗಳು ಶೇ. 60ರಷ್ಟು ಖಾಲಿ ಇದ್ದು, ಇನ್ಸ್‍ಪೆಕ್ಟರ್ 700ರಲ್ಲಿ 380 ಮಾತ್ರ ಭರ್ತಿ ಆಗಿವೆ. ಖಾಲಿ ಹುದ್ದೆಗಳಿಗಾಗಿ ಬೇರೆಯವರನ್ನು ದೂರದೇ ಆತ್ಮಾವಲೋಕನ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕಿದೆ. ಇರುವ ವ್ಯವಸ್ಥೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದರು.

ಅಲ್ಲದೆ, ವೈದ್ಯಕೀಯ ವೆಚ್ಚದ ಬಿಲ್‍ಗಳು ಬಾಕಿ ಇರುವುದಾಗಿ ದೂರುಗಳು ಬಂದಿವೆ. ಇವುಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ಕುರಿತ ಯಾವುದೇ ಬಿಲ್ ಬಾಕಿ ಉಳಿಯಬೇಕೆಂದು ನಾನು ಬಯಸುವುದಿಲ್ಲ. ಈ ಬಿಲ್ ನನ್ನವರೆಗೂ ಕಳಿಸಬೇಕಿಲ್ಲ, ಆಯುಕ್ತರ ಹಂತದ ಅಧಿಕಾರಿಗಳೇ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದ ಅವರು, ಮೂರು ವರ್ಷಗಳಿಗೂ ಹೆಚ್ಚಿನ ಅವಧಿಗೆ ಅಧಿಕಾರಿ ಒಂದೇ ಕಡೆ ಕಾರ್ಯ ನಿರ್ವಹಿಸುತ್ತಿದ್ದರೆ ರೊಟೇಷನ್ ಮೇಲೆ ಬದಲಾವಣೆ ಮಾಡುವುದು ಅನಿವಾರ್ಯ. ವ್ಯಕ್ತಿಗತ ಅನುಕೂಲಕ್ಕಾಗಿ ಸಂಸ್ಥೆಯ ಮೇಲೆ ಪರಿಣಾಮ ಆಗಬಾರದು. ಈ ಹಿನ್ನೆಲೆಯಲ್ಲಿ ವರ್ಗಾವಣೆಗೆ ಅಧಿಕಾರಿಗಳು ಸಹಕರಿಸಬೇಕಿದೆ ಎಂದು ಅವರು ಮನವಿ ಮಾಡಿದರು.

ಆದಾಯ ತೆರಿಗೆ ಅಧಿಕಾರಿ ಹೆಚ್.ಆರ್. ನಾಗೇಶ್ ಮಾತನಾಡಿ, ನಿವೃತ್ತಿಗೆ ಹತ್ತಿರವಿರುವ, ವೈದ್ಯಕೀಯ ಹಾಗೂ ಮಕ್ಕಳ ಶಿಕ್ಷಣಗಳ ಸಮಸ್ಯೆ ಎದುರಿಸುತ್ತಿರುವ ನೌಕರರಿಗೆ ವರ್ಗಾವಣೆಯಲ್ಲಿ ಆದ್ಯತೆ ನೀಡಬೇಕು ಅಂದಾಗ ಮಾತ್ರ ಸಿಬ್ಬಂದಿಗೆ ತುಸು ನೆಮ್ಮದಿ ನೀಡಿದಂತಾಗುತ್ತದೆ ಎಂದರು.

ಐಟಿ ಗೋವಾ, ನವದೆಹಲಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾದ ಅಮಿತಾವ್ ಡೇ ಮಾತನಾಡಿ, ಇದೇ ಮೊದಲ ಬಾರಿಗೆ ಬೆಂಗಳೂರು ಹೊರತು ಪಡಿಸಿ ದಾವಣಗೆರೆಯಲ್ಲಿ ಸಾಮಾನ್ಯ ಸಭೆಯನ್ನು ನಡೆಸುತ್ತಿರುವುದು ಸಂತಸ ತಂದಿದೆ ಎಂದರು.

ಐಟಿ ಇಎಫ್‍ನ ಅಧ್ಯಕ್ಷ ಕಾ. ಸುಮನ್, ಆದಾಯ ತೆರಿಗೆ ಅಧಿಕಾರಿಗಳಾದ ಕೆ.ಆರ್. ನಾರಾಯಣ್, ಅರವಿಂದ್ ತ್ರೀವೇದಿ, ಟಿ.ಜಿ. ಶಿವಕುಮಾರ್, ಭಾಸ್ಕರ್ ಎಸ್., ಪ್ರೇಮ್ ಕುಮಾರ್, ರಾಘವೇಂದ್ರರಾವ್, ದೇಶಪಾಂಡೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X