Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಕ್ಷಿದಾರರಿಗೆ ಬೆದರಿಕೆ: ಆರೋಪಿ ವಕೀಲನ...

ಸಾಕ್ಷಿದಾರರಿಗೆ ಬೆದರಿಕೆ: ಆರೋಪಿ ವಕೀಲನ ಬಂಧನಕ್ಕೆ ದಸಂಸ ಆಗ್ರಹ

ದಲಿತ ಕುಟುಂಬದ ಅಪಘಾತ ವಿಮಾ ಪರಿಹಾರ ಕಬಳಿಕೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 March 2018 7:13 PM IST
share
ಸಾಕ್ಷಿದಾರರಿಗೆ ಬೆದರಿಕೆ: ಆರೋಪಿ ವಕೀಲನ ಬಂಧನಕ್ಕೆ ದಸಂಸ ಆಗ್ರಹ

ಉಡುಪಿ, ಮಾ.10: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಮೂಡುಕೋಡಿಯ ಪರಿಶಿಷ್ಟ ಜಾತಿಗೆ ಸೇರಿದ ಬಡಕೂಲಿ ಕಾರ್ಮಿಕ ಸಾಧು ಎಂಬವರಿಗೆ ಸಾಕ್ಷ ನುಡಿಯದಂತೆ ಬೆದರಿಕೆಯೊಡ್ಡಿದ ಉಡುಪಿ ವಕೀಲರಾದ ಅಲೆವೂರು ಪ್ರೇಮರಾಜ ಕಿಣಿ, ರಾಜೇಶ್ ಪಡುಬಿದ್ರೆ ಸಹಿತ ಮೂವರನ್ನು ಕೂಡಲೇ ಬಂಧಿಸಬೇಕು ಎಂದು ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸ ಮುಖಂಡ ಜಯನ್ ಮಲ್ಪೆ, ಸಾಧು ಅವರ ತಾಯಿ ಕುಂದಾದು 2012ರಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದು, ವಿಮಾ ಕಂಪೆನಿಯು ಅಪಘಾತ ವಿಮಾ ಪರಿಹಾರ ಮೊತ್ತ 2,57,549ರೂ.ವನ್ನು ಜಿಲ್ಲಾ ನ್ಯಾಯಾಲಯದಲ್ಲಿ ಠೇವಣಿ ಮಾಡಿತ್ತು. ಈ ಹಣವನ್ನು ಉಡುಪಿ ವಕೀಲ ಅಲೆವೂರು ಪ್ರೇಮರಾಜ ಕಿಣಿ ಸಾಧು ಮತ್ತು ಅವರ ಕುಟುಂಬದವರ ನಕಲಿ ಸಹಿ, ಜಿಲ್ಲಾ ನ್ಯಾಯಾಲಯದ ನಕಲಿ ಸೀಲು, ಶಿರಸ್ತೇದಾರರ ನಕಲಿ ಸಹಿ ಮತ್ತು ಇತರ ನಕಲಿ ದಾಖಲೆಗಳನ್ನು ಸೃಷ್ಠಿಸಿ ಲಪಟಾ ಯಿಸಿದ್ದು, ಈ ಸಂಬಂಧ ಸಾಧು ನೀಡಿದ ದೂರಿನ್ವಯ ಅಲೆವೂರು ಪ್ರೇಮ ರಾಜ ಕಿಣಿ ಮತ್ತಿತ್ತರರ ಮೇಲೆ ಪ್ರಕರಣ ದಾಖಲಾಗಿತ್ತು ಎಂದರು.

ಇದೀಗ ಏಳು ವರ್ಷಗಳ ಬಳಿಕ ವಿಚಾರಣೆಗೆ ದಿನಾಂಕ ನಿಗದಿಪಡಿಸಿದ ನ್ಯಾಯಾಲಯ ಮಾ.5ರಂದು ಸಾಕ್ಷ ನುಡಿಯಲು ನ್ಯಾಯಾಲಯಕ್ಕೆ ಹಾಜ ರಾಗುವಂತೆ ಸಾಧು ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಜಯನ್ ಹೇಳಿದರು. ಈ ಬಗ್ಗೆ ಬೆಳ್ತಂಗಡಿಯಲ್ಲಿರುವ ಸಾಧು ಅವರ ಮನೆಗೆ ತೆರಳಿದ ಪ್ರೇಮ್ ರಾಜ್ ಕಿಣಿ, ರಾಜೇಶ್ ಪಡುಬಿದ್ರೆ ಸೇರಿದಂತೆ ಮೂವರು ನ್ಯಾಯಾಲಯಕ್ಕೆ ಹಾಜರಾಗದಂತೆ ಮತ್ತು ಸಾಕ್ಷ ನುಡಿಯದಂತೆ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಈ ಮೂವರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಮಾ.5ರಂದು ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಈಗ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದೆ ಎಂದು ಅವರು ತಿಳಿಸಿದರು.

ಪ್ರಕರಣ ದಾಖಲಾಗಿ ಹಲವು ದಿನಗಳಾದರೂ ಆರೋಪಿಗಳು ರಾಜಾ ರೋಷವಾಗಿ ತಿರುಗಾಡುತ್ತಿದ್ದಾರೆ. ಪ್ರಭಾವಕ್ಕೆ ಒಳಗಾಗಿರುವ ಪೊಲೀಸರು ಆರೋಪಿಗಳನ್ನು ಈವರೆಗೆ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ನಿಷ್ಕ್ರೀಯತೆಗೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದರು.

ಇದೊಂದು ಗಂಭೀರ ಪ್ರಕರಣವಾಗಿದ್ದು, ಎಲ್ಲ ಮೂರು ಮಂದಿ ಆರೋಪಿ ಗಳನ್ನು ತಕ್ಷಣವೇ ಬಂಧಿಸಬೇಕು ಮತ್ತು ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಯೊಡ್ಡಿ ಜಾಮೀನು ಶರ್ತಗಳನ್ನು ಉಲ್ಲಂಘಿಸಿರುವ ಆರೋಪಿ ಪ್ರೇಮ್‌ರಾಜ್ ಕಿಣಿಗೆ ನ್ಯಾಯಾಲಯ ನೀಡಿದ ಜಾಮೀನು ರದ್ದುಪಡಿಸಬೇಕು. ತಪ್ಪಿದಲ್ಲಿ ಇದರ ವಿರುದ್ಧ ಜಿಲ್ಲೆಯಾದ್ಯಂತ ಹೋರಾಟ ನಡೆಸಲಾಗುವುದು ಮತ್ತು ಮುಖ್ಯಮಂತ್ರಿ ಮನೆಯ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಕರಣದ ಸಾಕ್ಷಿದಾರ ಸಾಧು, ದಲಿತ ಮುಖಂಡ ಸುಂದರ ಕಪ್ಪೆಟ್ಟು, ಅಂಬೇಡ್ಕರ್ ಯುವಸೇನೆಯ ಹರೀಶ್ ಸಾಲ್ಯಾನ್ ಮಲ್ಪೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X