ಮಾ.16ರಂದು ಆರ್‌ಪಿಐ(ಎ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಮುಂಬೈ, ಮಾ.10: ದಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ)ದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮಾ.16ರಂದು ಹೊಸದಿಲ್ಲಿಯ ತಲ್ಕೋತ್ರ ಮೈದಾನದಲ್ಲಿ ನಡೆಯಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮ್ಹಾಟೇಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಸಚಿವರಾದ ರಾಜ್‌ನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತು ರಾಮ್‌ವಿಲಾಸ್ ಪಾಸ್ವಾನ್ ಹಾಗೂ ಪಕ್ಷದ ಮುಖಂಡ, ಕೇಂದ್ರ ಸಚಿವ ರಾಮ್‌ದಾಸ್ ಅಠವಳೆ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸುವ ಕುರಿತ ಚರ್ಚೆ ಸಭೆಯ ನಡಾವಳಿಯಲ್ಲಿ ಸೇರಿದೆ. ಪಕ್ಷದ ರಾಜ್ಯ ಘಟಕಾಧ್ಯಕ್ಷರು, ರಾಜ್ಯ ಕೋರ್ ಕಮಿಟಿ ಸದಸ್ಯರು ಸೇರಿದಂತೆ 2000ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು. ಆರ್‌ಪಿಐ(ಎ) ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟದ ಸಹಪಕ್ಷವಾಗಿದ್ದು , ಸಚಿವ ಸಂಪುಟದಲ್ಲೂ ಪಕ್ಷ ಪ್ರಾತಿನಿಧ್ಯ ಹೊಂದಿದೆ.
Next Story





