ಶಿವಮೊಗ್ಗ: ಕಾರು ಢಿಕ್ಕಿ; ಪಾದಚಾರಿ ಮಹಿಳೆ ಮೃತ್ಯು

ಶಿವಮೊಗ್ಗ, ಮಾ.10: ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ 1 ನೇ ತಿರುವಿನಲ್ಲಿ ನಡೆದಿದೆ.
ಹೊಸಮನೆ ಬಡಾವಣೆಯ ನಿವಾಸಿಯಾದ ಗೀತಾ (40) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಸಮೀಪದ ಕಿರಾಣಿ ಅಂಗಡಿಗೆ ಹೋಗಿ ತರಕಾರಿ ತೆಗೆದುಕೊಂಡು ನಡೆದುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ, ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿಕೊಂಡು ಬಂದ ಚಾಲಕ ಇವರಿಗೆ ಢಿಕ್ಕಿ ಹೊಡೆಸಿದ್ದಾನೆ. ಢಿಕ್ಕಿಯ ರಭಸಕ್ಕೆ ಗೀತಾರವರು ರಸ್ತೆ ಬದಿಯ ಡ್ರೈನೇಜ್ ಒಳಗೆ ಬಿದ್ದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ನಿವಾಸಿಗಳು ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಈ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





