ಸಾಹಿತ್ಯ ಜೀವನದ ಕನ್ನಡಿ: ಡಾ.ಸುಕನ್ಯ ಮೇರಿ

ಉಡುಪಿ, ಮಾ.11: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಹಿಂದಿ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಾಹಿತ್ಯ ಹಾಗೂ ಸಮಾ ಎಂಬ ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ಇತ್ತೀಚೆಗೆ ಏರ್ಪಡಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ.ಸುಕನ್ಯ ಮೇರಿ ಮಾತನಾಡಿ, ಸಾಹಿತ್ಯವು ಜೀವನದ ಕನ್ನಡಿ. ಇದರಲ್ಲಿರುವ ಜೀವನ ವೌಲ್ಯಗಳನ್ನು ನಾವೆಲ್ಲರೂ ಅರಿತು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಸೋಫಿಯಾ ಡಯಾಸ್ ಸ್ವಾಗತಿಸಿ ದರು. ವಿದ್ಯಾರ್ಥಿನಿ ರೆಲಿಶಾ ಲೂವಿಸ್ ವಂದಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.
Next Story





