‘ಜೈ ಮೋದಿ’ ಫೇಸ್ಬುಕ್ ಪೇಜ್ ವಿರುದ್ಧ ಎಫ್ಐಆರ್
ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್
ಬೆಂಗಳೂರು, ಮಾ.11: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದ ಜೈ ಮೋದಿ ಸೇರಿ ಇನ್ನಿತರೆ ಫೇಸ್ಬುಕ್ ಪೇಜ್ಗಳ ವಿರುದ್ಧ ಜೆಡಿಎಸ್ ರಾಜ್ಯ ಕಾನೂನು ಘಟಕ ಇಲ್ಲಿನ ಶ್ರೀರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲು ಮಾಡಲಾಗಿದೆ.
ಚಿಂತೆ ಇಲ್ಲದ ತುಂಡ ಹೈಕ್ಳ ಸಂಘ, ಅಪ್ಪಟ ಕನ್ನಡಿಗ, ಜೈ ಮೋದಿ ಎಂಬ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಪೇಜ್ ಮಾಡಿಕೊಂಡು ಜೆಡಿಎಸ್ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ಗಳನ್ನು ಹರಿಬಿಡಲಾಗುತಿತ್ತು ಎಂದು ಆರೋಪಿಸಿ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಶ್ರೀರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು, ಬೆಟ್ಟಸ್ವಾಮಿ, ಅಂಕಿತ್ ರಾಜ್, ಅಭಿಲಾಶ್ ಎಂಬುವರು ಈ ಪೇಜ್ಗಳನ್ನು ನಡೆಸುತ್ತಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
Next Story