Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ : ವಿಧಾನ ಸೌಧಕ್ಕೆ ಮುತ್ತಿಗೆ...

ಮುಂಬೈ : ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು 35 ಸಾವಿರ ರೈತರು ತಯಾರಿ

ವಾರ್ತಾಭಾರತಿವಾರ್ತಾಭಾರತಿ11 March 2018 6:26 PM IST
share
ಮುಂಬೈ : ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು 35 ಸಾವಿರ ರೈತರು  ತಯಾರಿ

ಮುಂಬೈ,ಮಾ.11: ಕೃಷಿ ಕ್ಷೇತ್ರದಲ್ಲಿ ಮಹಾರಾಷ್ಟ್ರ ಎದುರಿಸುತ್ತಿರುವ ಗಂಭೀರ ಬಿಕ್ಕಟ್ಟಿಗೆ ಸ್ಪಂದಿಸುವಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರಕಾರವು ಸಂಪೂರ್ಣ ವಿಫಲವಾಗಿದೆಯೆಂದು ಆರೋಪಿಸಿ ವಿಧಾನಸಭಾ ಚಲೋ ಜಾಥಾ ಹಮ್ಮಿಕೊಂಡಿರುವ ಮಹಾರಾಷ್ಟ್ರದ 35 ಸಾವಿರಕ್ಕೂ ಅಧಿಕ ರೈತರು ರವಿವಾರ ಮುಂಬೈ ತಲುಪಿದ್ದು, ಸೋಮವಾರ ವಿಧಾನಸಭೆಗೆ ಮುತ್ತಿಗೆ ಹಾಕಲಿದ್ದಾರೆ. ಸುಡುಬಿಸಿಲನ್ನೂ ಲೆಕ್ಕಿಸದೆ ಕಳೆದ ಐದು ದಿನಗಳಿಂದ 180 ಕಿ.ಮೀ.ಕ್ರಮಿಸಿರುವ ರೈತ ಜಾಥಾ ಇಂದು ಬೆಳಗ್ಗೆ ಮುಂಬೈ ತಲುಪಿದೆ. ಸಂಪೂರ್ಣ ಸಾಲ ಮನ್ನಾ ಹಾಗೂ ಹಲವಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ಜಮೀನುಗಳನ್ನು ಆದಿವಾಸಿ ರೈತರಿಗೆ ವರ್ಗಾಯಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಅವರು ಮಹಾರಾಷ್ಟ್ರದ ವಿಧಾನಸಭೆ ಮಂತ್ರಾಲಯ ಕಟ್ಟಡಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಹೋರಾಟದಲ್ಲಿ ಭಾರೀ ಸಂಖ್ಯೆಯ ಆದಿವಾಸಿ ರೈತರೂ ಕೈಜೋಡಿಸಿದ್ದು, ಇದು ತಮ್ಮ ಸಾವುಬದುಕಿನ ಪ್ರಶ್ನೆಯಾಗಿದೆಯೆಂದು ಹೇಳಿಕೊಂಡಿದ್ದಾರೆ.

ಎಡಪಂಥೀಯ ನಿಲುವುಹೊಂದಿರುವ ಅಖಿಲ ಭಾರತ ಕಿಸಾನ್ ಸಬಾ (ಎಐಕೆಎಸ್) ನೇತೃತ್ವದಲ್ಲಿ ಆಯೋಜಿಸಲಾದ ಈ ಬೃಹತ್ ಕಾಲ್ನಡಿಗೆ ಜಾಥಾವು ಮಂಗಳವಾರ ನಾಸಿಕ್‌ನಲ್ಲಿ ಆರಂಭಗೊಂಡಿತ್ತು.

  ಏಐಕೆಎಸ್ ಅಧ್ಯಕ್ಷ ಅಶೋಕ್ ಧಾವ್ಲೆ ಈ ಮಧ್ಯೆ ಸುದ್ದಿಗಾರರ ಜೊತೆ ಮಾತನಾಡುತ್ತಾ, ತಾವು ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಅವರು ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಮುಂದಿಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿಸಿದರು. ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಕೂಡಾ ರವಿವಾರ ರೈತರನ್ನು ಭೇಟಿ ಮಾಡಿದ್ದು, ಅವರ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಎನ್‌ಸಿಪಿ ಹಾಗೂ ರಾಜ್‌ಠಾಕ್ರೆ ನೇತೃತ್ವದ ಎಂಎನ್‌ಎಸ್ ಪಕ್ಷಗಳೂ ತಮ್ಮ ಬೆಂಬಲವನ್ನು ಘೋಷಿಸಿವೆ.

  ರೈತರು ವಿಧಾನಸಭಾ ಮುತ್ತಿಗೆ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಲಿದ್ದು, ಮುಂಬೈ ಮಹಾನಗರದ ನಾಗರಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೆಂದು ಅಶೋಕ್ ಧಾವ್ಲೆ ಭರವಸೆ ನೀಡಿದ್ದಾರೆ.

‘‘ ನಾವು 25 ಸಾವಿರ ಜನರೊಂದಿಗೆ ರ್ಯಾಲಿಯನ್ನು ಆರಂಭಿಸಿದ್ದು, ಈಗ ನಮ್ಮ ಸಂಖ್ಯೆ 50 ಸಾವಿರದ ಗಡಿಯನ್ನು ತಲುಪಿದೆ. ನಾಳೆ ಅದು ಇನ್ನಷ್ಟು ಹೆಚ್ಚಾಗಲಿದೆ. ಆದರೆ ನಗರದ ಜನತೆಗೆ ಇದರಿಂದ ಯಾವುದೇ ಅಡ್ಡಿಯಾಗದು. ಪೂರ್ವಾಹ್ನ 11 ಗಂಟೆಗೆ ರ್ಯಾಲಿ ಆರಂಭಗೊಳ್ಳಲಿರುವುದರಿಂದ 10ನೇ ತರಗತಿಯ ಪರೀಕ್ಷೆ ಹಾಜರಾಗುವ ವಿದ್ಯಾರ್ಥಿಗಳಿಗೆ ಯಾವುದೇ ಅನನುಕೂಲವಾಗದು ಎಂದು ಧಾವ್ಲೆ ತಿಳಿಸಿದರು.

ಅವಿಶ್ರಾಂತ ಹೋರಾಟ

  ನಾಸಿಕ್‌ನಿಂದ ಮಂಗಳವಾರ ಈ ಬೃಹತ್ ರ್ಯಾಲಿಯನ್ನು ಆರಂಭಿಸಿದ ರೈತರು 180 ಕಿ.ಮೀ. ದಾರಿಯನ್ನು ಕಾಲ್ನಡಿಗೆಯಲ್ಲೇ ಕ್ರಮಿಸಿಕೊಂಡು ಬಂದಿದ್ದಾರೆ. ಒಂದು ಸಾದಾ ಊಟ ಮಾಡಿಯೇ ದಿನಗಳೆದ ಅವರು ಅಲ್ಲಲ್ಲಿ ಸ್ವಲ್ಪ ಹೊತ್ತು ವಿರಮಿಸಿ ತಮ್ಮ ಪಾದಯಾತ್ರೆಯನ್ನು ಮುಂದುವರಿಸಿದ್ದರು ಹಾಗೂ ಬಟಾಬಯಲಿನಲ್ಲಿ ನಿದ್ರಿಸಿದ್ದರು. ನಸುಕಿನಲ್ಲೇ ಪಾದಯಾತ್ರೆ ಆರಂಭಿಸುವ ಅವರು, ಮಧ್ಯಾಹ್ನದವರೆಗೆ ಎಲ್ಲಿಯೂ ನಿಲ್ಲುತ್ತಿರಲಿಲ್ಲ.

ಮಹಾ ರೈತರ ಮುಖ್ಯ ಬೇಡಿಕೆಗಳು

1. ರೈತರ ಸಂಪೂರ್ಣ ಸಾಲ ಮನ್ನಾ

 2. ರೈತರ ಕೃಷಿಉತ್ಪನ್ನಗಳಿಗೆ ಅವುಗಳ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಅಧಿಕ ಬೆಲೆಯನ್ನು ನೀಡಬೇಕು ಹಾಗೂ ಅವುಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X