Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಡು ಕಂಡ ಶ್ರೇಷ್ಠ ಕವಿಗಳಲ್ಲಿ...

ನಾಡು ಕಂಡ ಶ್ರೇಷ್ಠ ಕವಿಗಳಲ್ಲಿ ಕೆ.ಎಸ್.ನರಸಿಂಹಸ್ವಾಮಿ ಒಬ್ಬರು: ಕವಿಯತ್ರಿ ಡಾ.ಲತಾ ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ11 March 2018 9:17 PM IST
share
ನಾಡು ಕಂಡ ಶ್ರೇಷ್ಠ ಕವಿಗಳಲ್ಲಿ ಕೆ.ಎಸ್.ನರಸಿಂಹಸ್ವಾಮಿ ಒಬ್ಬರು: ಕವಿಯತ್ರಿ ಡಾ.ಲತಾ ರಾಜಶೇಖರ್

ಮೈಸೂರು,ಮಾ.11: ನಾಡು ಕಂಡ ಶ್ರೇಷ್ಠ ಕವಿಗಳಲ್ಲಿ ಕೆ.ಎಸ್ ನರಸಿಂಹಸ್ವಾಮಿಯವರು ಒಬ್ಬರಾಗಿದ್ದರು ಎಂದು ಖ್ಯಾತ ಕವಿಯತ್ರಿ ಡಾ.ಲತಾ ರಾಜಶೇಖರ್ ಅಭಿಪ್ರಾಯಪಟ್ಟರು.

ರೋಟರಿ ಸಭಾಂಗಣದಲ್ಲಿ ಗ್ರಾಮಾಂತರ ಬುದ್ಧಿ ಜೀವಿ ಬಳಗದ ವತಿಯಿಂದ ರವಿವಾರ ಕೆ.ಎಸ್.ಎನ್ ರವರ ನೆನಪಿನ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಮತ್ತು ಬಳಗದ 33ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನರಸಿಂಹಸ್ವಾಮಿ ಅವರು ರಚಿಸಿರುವ ಕವಿತೆಗಳಲ್ಲಿ ಪ್ರೇಮ ಮತ್ತು ಪ್ರೀತಿ ಚಿರಸ್ಥಾಯಿಯಾಗಿ ಉಳಿದಿರುವುದರಿಂದ ಅವರನ್ನು ಪ್ರೇಮ ಕವಿ ಎಂದೇ ಬಿಂಬಿಸಲಾಗುತ್ತಿದೆ ಎಂದರು.

ಕೆ.ಎಸ್.ಎನ್ ರಚಿಸಿರುವ ಮೈಸೂರು ಮಲ್ಲಿಗೆ ಬಹಳ ಜನಪ್ರಿಯವಾಗಿದೆ. ಅವರ ಕವಿತೆಗಳಾಗಲೀ, ಗೀತೆಗಳಾಗಲೀ ಅವುಗಳಲ್ಲಿ ಪ್ರೀತಿ ಎಂಬುದು ಮೊಗ್ಗಾಗಿ, ಕಾಯಾಗಿ, ಹಣ್ಣಾಗಿ ಮಾಗಿ ರಸಿಕರಿಗೆ ರಸದೌತಣ ನೀಡುತ್ತವೆ. ಅವರ ಗೀತೆಗಳನ್ನು ಆಲಿಸುತ್ತಿದ್ದರೆ ಮನಸ್ಸಿಗೆ ಸಿಗುವ ಆನಂದ ಹೇಳತೀರದು. ರಾಯರು ಬಂದರು ಮಾವನ ಮನೆಗೆ ರಾತ್ರಿಯಾಗಿತ್ತು, ಹೆಂಡಂತಿಯೊಬ್ಬಳು ಮನೆಯೊಳಗಿದ್ದಳೆ ನನಗದು ಕೋಟಿ ರುಪಾಯಿ ಎಂಬ ಹಾಡುಗಳು ರಚನೆಯಾಗಿ ದಶಕಗಳೇ ಕಳೆದಿದ್ದರೂ ಇಂದಿಗೂ ಜನ ಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಇವುಗಳನ್ನು ಕೆಲವು ಪ್ರೇಮಿಗಳು ಆಲಿಸಿ ಸಂತಸ ಪಡುತ್ತಿರುವದನ್ನು ನೋಡಿದರೆ ಅವರಿಗೆ ನೀಡಿರುವ ಪ್ರೇಮ ಕವಿ ಎಂಬ ಬಿರುದು ಸೂಕ್ತವಾಗಿದೆ ಎಂದು ಹೇಳಿದರು.

ಪು.ತಿ.ನ, ಕುವೆಂಪು ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ವೈಯಕ್ತಿಕ ಲಾಭಕ್ಕೆ ಎಂದೂ ಮುಂದಾಗಿರಲಿಲ್ಲ. ಸಾಹಿತ್ಯಕ್ಕೆ ತನ್ನದೇ ಆದ ಘನತೆ ಗೌರವವಿದೆ. ಸಾಹಿತ್ಯವನ್ನು ಇನ್ನು ಹೆಚ್ಚಿನ ಎತ್ತರಕ್ಕೆ ಬೆಳಸಬೇಕೆಂಬುದೇ ಅವರ ಪ್ರಮುಖ ಗುರಿಯಾಗಿತ್ತು. ಅವರು ಮಾನವೀಯ ಮೌಲ್ಯಗಳಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಾಹಿತಿಗಳಾಗಿದ್ದರು. ಆದರೆ ಇಂದು ಕೆಲವು ಸಾಹಿತಿಗಳು ಓಲೈಕೆಗೆ ಮುಂದಾಗಿದ್ದು, ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಿರುವುದು ವಿಷಾದನೀಯ ಎಂದರು.

ಸಮಾರಂಭದಲ್ಲಿ ಕೆ.ಎನ್.ಮಹಾಬಲ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X