ಶಿವಮೊಗ್ಗ: ಹಾವು ಕಡಿತ; ರೈತ ಮೃತ್ಯು

ಶಿವಮೊಗ್ಗ, ಮಾ. 11: ವಿಷಪೂರಿತ ಹಾವೊಂದು ಕಚ್ಚಿದ ಪರಿಣಾಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಳಮ್ಮನಗುಡಿ ಗ್ರಾಮದಲ್ಲಿ ನಡೆದಿದೆ.
ಶಶಿಕುಮಾರ್ (26) ಮೃತಪಟ್ಟ ಯುವ ರೈತ ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಕೆಲಸ ಮಾಡುವ ವೇಳೆ ಹಾವು ಕಡಿತಕ್ಕೆ ತುತ್ತಾಗಿದ್ದು, ತಕ್ಷಣವೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿ ಪಟ್ಟಣದ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





