ಕುಶಾಲನಗರ: ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತ್ಯು

ಕುಶಾಲನಗರ,ಮಾ.11: ಕೊಡಗು ಜಿಲ್ಲೆಗೆ ಪ್ರವಾಸಿಗರಾಗಿ ಆಗಮಿಸಿದ್ದ ವಿದ್ಯಾರ್ಥಿಯೊಬ್ಬ ಕಾವೇರಿ ನದಿಯಲ್ಲಿ ಈಜಲು ತೆರಳಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಸಮೀಪದ ಗುಡ್ಡೆಹೊಸೂರು ತೆಪ್ಪದಕಂಡಿ ಬಳಿ ಘಟನೆ ನಡೆದಿದ್ದು, ಪ್ರಶಾಂತ್ (20) ಎಂಬಾತ ಮೃತಪಟ್ಟಿದ್ದಾನೆ. ತಮಿಳುನಾಡಿನ ಕೊಯಂತ್ತೂರು ಬಳಿಯ ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಜಿಲ್ಲೆಗೆ ಆಗಮಿಸಿದ್ದರು. ಈ ಸಂದರ್ಭ ತೆಪ್ಪದಕಂಡಿ ತೂಗುಸೇತುವೆ ಬಳಿ ಈಜಲು ತೆರಳಿದ ವೇಳೆ ಈ ಘಟನೆ ಸಂಭವಿಸಿದೆ.
ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕುಶಾಲನಗರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನವೀನ್ ಗೌಡ ಮಾಹಿತಿ ನೀಡಿದ್ದಾರೆ.
Next Story





