Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಕ್ಷಿ ಕೊರತೆ: ಮಂಗಳೂರು ಪಬ್ ದಾಳಿಯ...

ಸಾಕ್ಷಿ ಕೊರತೆ: ಮಂಗಳೂರು ಪಬ್ ದಾಳಿಯ ಆರೋಪಿಗಳು ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ12 March 2018 4:44 PM IST
share
ಸಾಕ್ಷಿ ಕೊರತೆ: ಮಂಗಳೂರು ಪಬ್ ದಾಳಿಯ ಆರೋಪಿಗಳು ಖುಲಾಸೆ

ಮಂಗಳೂರು, ಮಾ. 12: ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ನಗರದ ಅಮ್ನೇಶಿಯಾ ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗಳೆಂದು ಗುರುತಿಸಲ್ಪಟ್ಟಿದ್ದ ಶ್ರೀರಾಮ ಸೇನೆಯ 25 ಮಂದಿ ಕಾರ್ಯಕರ್ತರನ್ನು ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯವು ಖುಲಾಸೆಗೊಳಿಸಿ ಸೋಮವಾರ ತೀರ್ಪು ನೀಡಿದೆ.

ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಸುಭಾಷ್ ಪಡೀಲ್, ಶರತ್ ಪದವಿನಂಗಡಿ, ಲೋಹಿತ್ ಅಡ್ಯಾರ್, ಸುರೇಶ್ ಪಡೀಲ್, ವಿನೋದ್ ನೀರುಮಾರ್ಗ, ದೇವರಾಜ್ ನೀರುಮಾರ್ಗ, ಪವನ್ ಮಂಜೇಶ್ವರ, ಧೀರಜ್ ಮಂಜೇಶ್ವರ, ಹರೀಶ್ ತೋಡಾರ, ಗಣೇಶ್ ಅತ್ತಾವರ, ಸಚಿನ್ ಅತ್ತಾವರ, ದಿನಕರ ಶೆಟ್ಟಿ ಸೇರಿದಂತೆ 25 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಪಬ್ ದಾಳಿ ಪ್ರಕರಣದಲ್ಲಿ ಒಟ್ಟು 30 ಮಂದಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪೈಕಿ ಮೂವರು ವಿದೇಶಕ್ಕೆ ತೆರಳಿದ್ದರೆ, ಇಬ್ಬರು ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆ

2009ರ ಜ.24ರಂದು ನಗರದ ಅಂಬೇಡ್ಕರ್ ವೃತ್ತ ಬಳಿಯ ಅಮ್ನೇಶಿಯಾ ಪಬ್‌ಗೆ ತಂಡವೊಂದು ದಿಢೀರ್ ದಾಳಿ ನಡೆಸಿತ್ತು. ಈ ತಂಡದ ಸದಸ್ಯರು ಪಬ್‌ನಲ್ಲಿದ್ದ ಯುವಕ, ಯುವತಿಯರನ್ನು ಹೊರಗೆಳೆದು ಹಲ್ಲೆ ನಡೆಸಿ ಅಮಾನವೀಯವಾಗಿ ವರ್ತಿಸಿತ್ತು. ಇದು ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಾತ್ರವಲ್ಲದೆ ದೇಶಾದ್ಯಂತ ವಿವಿಧ ಕಡೆಗಳಿಂದ ಭಾರೀ ವಿರೋಧವೂ ವ್ಯಕ್ತವಾಗಿದ್ದವು.

ಘಟನೆಗೆ ಸಂಬಂಧಿಸಿ ಅಂದು ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು.ಶ್ರೀರಾಮ ಸೇನೆಯಿಂದ ವಿಜಯೋತ್ಸವ ತೀರ್ಪು ಪ್ರಕಟವಾಗುತ್ತಿದ್ದಂತೆ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಆರ್ಯ ಸಮಾಜ ಭವನದ ಮುಂಭಾಗ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭ ಮಾತನಾಡಿದ ಪ್ರಮೋದ್ ಮುತಾಲಿಕ್, ಇದು ಸತ್ಯಕ್ಕೆ ಸಂದ ಜಯವಾಗಿದೆ. ಶ್ರೀರಾಮ ಸೇನೆಯನ್ನು ಟೀಕಿಸಿದವರಿಗೆ ನ್ಯಾಯಾಲಯದ ತೀರ್ಪು ಉತ್ತರ ನೀಡಿದೆ ಎಂದರು. 2009ರಲ್ಲಿ ಘಟನೆ ನಡೆದಾಗ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು. ಘಟನೆ ನಡೆದಾಗ ನಾನು ಮಹಾರಾಷ್ಟ್ರದಲ್ಲಿದ್ದೆ. ಜ.26ರಂದು ಬೆಳಗಾವಿಗೆ ಬಂದಾಗ ನನ್ನನ್ನು ಪೊಲೀಸರು ಬಂಧಿಸಿದರು. 16 ದಿನ ಜೈಲಿನಲ್ಲಿದ್ದೆ. ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಆಧಾರವಿಲ್ಲದಿದ್ದರೂ ನನ್ನ ಸಹಿತ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗಿತ್ತು. ಇದೀಗ ತೀರ್ಪು ಹೊರಬಿದ್ದಿದೆ. ವಿನಾಕಾರಣ ಕೇಸು ದಾಖಲಿಸಿದ್ದ ಸರಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ವಕೀಲರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುತಾಲಿಕ್ ತಿಳಿಸಿದರು.

52 ಕಡೆ ಸ್ಪರ್ಧೆ 

ದೇಶದ 12 ರಾಜ್ಯಗಳಲ್ಲಿ ಶ್ರೀರಾಮ ಸೇನೆಯ ಸಂಘಟನೆ ಕಾರ್ಯಾರಂಭಗೊಂಡಿದೆ. ಮುಂದಿನ ಚುನಾವಣೆಯಲ್ಲಿ ಶ್ರೀರಾಮ ಸೇನೆ ಬೆಂಬಲಿತ ಶಿವಸೇನೆಯಿಂದ 52 ಕಡೆಗಳಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಮುತಾಲಿಕ್ ಹೇಳಿದರು.

ಜಿಲ್ಲಾಡಳಿತ ಗಡೀಪಾರು ಮಾಡಿತ್ತು

ಪಬ್ ದಾಳಿ ಬಳಿಕ ಜಿಲ್ಲಾಡಳಿತ ನನ್ನನ್ನು ಒಂದು ವರ್ಷ ಗಡೀಪಾರು ಮಾಡಿತ್ತು. ಆಗ ನಾನು ಚುನಾವಣೆಗೆ ನಿಲ್ಲಬಾರದೆಂಬ ಉದ್ದೇಶದಿಂದಲೇ ಅಂದು ಬಿಜೆಪಿ ಸರಕಾರ ಈ ಹುನ್ನಾರ ನಡೆಸಿತ್ತು. ಈಗ ಬಿಜೆಪಿ ಸರಕಾರವಿರುವ ಗೋವಾ ರಾಜ್ಯದಿಂದಲೂ 4 ವರ್ಷಗಳಿಂದ ಗಡೀಪಾರು ಮಾಡಿದ್ದಾರೆ ಎಂದು ಮುತಾಲಿಕ್ ಹೇಳಿದರು.

ಇನ್ನು ಮುಂದೆ ಹೊಡೆಯಲ್ಲ

ಇನ್ನು ಮುಂದೆ ಹೊಡೆಯುವುದಿಲ್ಲ. ಬದಲಾಗಿ ಅಕ್ರಮ ಪಬ್, ಬಾರ್ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ದೇಶದಲ್ಲಿ ಮದ್ಯ ನಿಷೇಧವಾಗಬೇಕು. ಅಂದು ಮಹಿಳೆಯರ ಮೇಲೆ ನಡೆದ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿದ್ದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X