Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಸ್ತ್ರಾಸ್ತ್ರ ಆಮದು : ಭಾರತಕ್ಕೆ...

ಶಸ್ತ್ರಾಸ್ತ್ರ ಆಮದು : ಭಾರತಕ್ಕೆ ಅಗ್ರಸ್ಥಾನ

ವಾರ್ತಾಭಾರತಿವಾರ್ತಾಭಾರತಿ12 March 2018 7:38 PM IST
share
ಶಸ್ತ್ರಾಸ್ತ್ರ ಆಮದು : ಭಾರತಕ್ಕೆ ಅಗ್ರಸ್ಥಾನ

ಹೊಸದಿಲ್ಲಿ, ಮಾ.12:  ಭಾರತವು 2013ರಿಂದ 2017ರ ಅವಧಿಯಲ್ಲಿ ವಿಶ್ವದ ಅತ್ಯಧಿಕ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ರಾಷ್ಟ್ರಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ವಿಶ್ವದ ಒಟ್ಟಾರೆ ಆಮದಾಗುವ ಶಸ್ತ್ರಾಸ್ತ್ರಗಳಲ್ಲಿ ಶೇ.12ರಷ್ಟನ್ನು ಭಾರತವೇ ಪಡೆಯುತ್ತಿದೆ ಎಂದು ವರದಿ ತಿಳಿಸಿದೆ.

ಸೌದಿ ಅರೆಬಿಯ, ಈಜಿಪ್ಟ್, ಯುಎಇ, ಚೀನಾ, ಆಸ್ಟ್ರೇಲಿಯಾ, ಅಲ್ಜೀರಿಯ, ಇರಾಕ್ ಹಾಗೂ ಪಾಕಿಸ್ತಾನ ಆ ಬಳಿಕದ ಸ್ಥಾನದಲ್ಲಿದೆ. ಪಾಕ್  ಹಾಗೂ ಚೀನಾ ಗಡಿ ಭಾಗದಲ್ಲಿ ಉದ್ವಿಗ್ನತೆಯ ಸ್ಥಿತಿ ಇರುವುದು ಹಾಗೂ ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಸ್ವಯಂ ಉತ್ಪಾದಿಸಲು ಅಶಕ್ತವಾಗಿರುವುದು ಭಾರತದ ಆಮದು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಇದೇ ಅವಧಿಯಲ್ಲಿ ಪಾಕಿಸ್ತಾನದ ಶಸ್ತ್ರಾಸ್ತ್ರ ಖರೀದಿಯಲ್ಲಿ ಶೇ.36ರಷ್ಟು ಇಳಿಕೆಯಾಗಿದೆ ಎಂದು ‘ಸಿಪ್ರಿ’ (ಸ್ಟಾಕ್‌ಹೋಂ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್)ಯ ಶಸ್ತ್ರಾಸ್ತ್ರ ಮತ್ತು ರಕ್ಷಣಾ ವೆಚ್ಚ ವಿಭಾಗದ ಹಿರಿಯ ಸಂಶೋಧಕ ಸೀಮನ್ ವೆಝಮನ್ ತಿಳಿಸಿದ್ದಾರೆ. ಅಲ್ಲದೆ ಚೀನಾವು ಏಶ್ಯಾದಲ್ಲಿ ಪ್ರಮುಖ ಶಸ್ತ್ರಾಸ್ತ್ರ ರಫ್ತು ರಾಷ್ಟ್ರವಾಗಿ ಗುರುತಿಸಿಕೊಂಡಿರುವ ಬಗ್ಗೆ ವೆಝಮನ್ ಪ್ರಸ್ತಾವಿಸಿದ್ದಾರೆ. ಆದರೆ ಶಸ್ತ್ರಾಸ್ತ್ರ ರಫ್ತು ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದಿಲ್ಲ. ರಶ್ಯಾವು ಈಗಲೂ ಭಾರತಕ್ಕೆ ಶಸ್ತ್ರಾಸ್ತ್ರ ಪೂರೈಸುವ ಪ್ರಮುಖ ರಾಷ್ಟ್ರವಾಗಿದೆ. ಇತ್ತೀಚಿನ ದಿನದಲ್ಲಿ ಭಾರತವು ಅಮೆರಿಕ ಜೊತೆಗಿನ ಬಾಂಧವ್ಯವನ್ನು ವೃದ್ಧಿಸಿಕೊಂಡಿರುವ ಕಾರಣ 2008ರಿಂದ 2012 ಹಾಗೂ 2013ರಿಂದ 2017ರ ಅವಧಿಯಲ್ಲಿ ಭಾರತಕ್ಕೆ ಅಮೆರಿಕದಿಂದ ಆಮದಾಗುತ್ತಿರುವ ಶಸ್ತ್ರಾಸ್ತ್ರಗಳ ಪ್ರಮಾಣದಲ್ಲಿ ಶೇ.557ರಷ್ಟು ಹೆಚ್ಚಳವಾಗಿದೆ ಎಂದು ‘ಸಿಪ್ರಿ’ ವರದಿ ತಿಳಿಸಿದೆ. ‘ಸಿಪ್ರಿ’ ಜಾಗತಿಕ ಶಸ್ತ್ರಾಸ್ತ್ರ ವ್ಯಾಪಾರದ ಕುರಿತ ಅಂಕಿಅಂಶ ಹಾಗೂ ಮಾಹಿತಿ ಸಂಗ್ರಹಿಸುವ ಸಂಸ್ಥೆಯಾಗಿದೆ.

  ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ದೇಶಗಳ ಸೇನೆಯಲ್ಲಿ ಬಳಕೆಯಾಗುವ ಶಸ್ತ್ರಾಸ್ತ್ರಗಳಲ್ಲಿ ಶೇ.70ರಷ್ಟನ್ನು ಚೀನಾ ಪೂರೈಸುತ್ತಿರುವುದು ಗಮನಾರ್ಹವಾಗಿದೆ. ಅಲ್ಲದೆ ಚೀನಾವು ತನ್ನ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಅಲ್ಜೀರಿಯ, ಥೈಲೆಂಡ್ ಹಾಗೂ ಟರ್ಕ್‌ಮೆನಿಸ್ತಾನ ದೇಶಗಳಿಗೂ ವಿಸ್ತರಿಸಿದೆ . ಜೊತೆಗೆ , ಚೀನಾವು ಸೇನಾ ಬಳಕೆಗೆ ಶಸ್ತ್ರಾಸ್ತ್ರಗಳನ್ನು ಸ್ವತಃ ಉತ್ಪಾದಿಸುತ್ತಿದೆ ಹಾಗೂ ಪಾಕಿಸ್ತಾನ, ಬಾಂಗ್ಲಾ ಮತ್ತು ಮ್ಯಾನ್ಮಾರ್ ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ಮೂಲಕ ಈ ದೇಶಗಳೊಂದಿಗಿನ ತನ್ನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಸೀಮನ್ ವೆಝಮನ್ ತಿಳಿಸಿದ್ದಾರೆ.

  ಪಾಕಿಸ್ತಾನದಲ್ಲಿ ಆಂತರಿಕ ಸಂಘರ್ಷದ ಸ್ಥಿತಿ ಮುಂದುವರಿದಿರುವ ಜೊತೆಗೆ ಭಾರತದೊಂದಿಗಿನ ಸಂಬಂಧ ಸುಧಾರಣೆಯಾಗದೆ ಆತಂಕದ ಪರಿಸ್ಥಿತಿ ಮುಂದುವರಿದಿದ್ದರೂ ಆ ದೇಶದ ಶಸ್ತ್ರಾಸ್ತ್ರ ಆಮದು ಪ್ರಮಾಣ 2008ರಿಂದ 2012, 2013ರಿಂದ 2017ರ ಅವಧಿಯಲ್ಲಿ ಶೇ.36ರಷ್ಟು ಕಡಿಮೆಯಾಗಿರುವುದು ಗಮನಾರ್ಹವಾಗಿದೆ. ಅಲ್ಲದೆ 2013ರಿಂದ 2017ರ ಅವಧಿಯಲ್ಲಿ ಪಾಕಿಸ್ತಾನಕ್ಕೆ ಅಮೆರಿಕದಿಂದ ಆಮದಾಗುವ ಶಸ್ತ್ರಾಸ್ತ್ರ ಪ್ರಮಾಣದಲ್ಲಿ ಶೇ.76ರಷ್ಟು ಕಡಿತವಾಗಿದೆ. ಇದೇ ಅವಧಿಯಲ್ಲಿ ಭಾರತಕ್ಕೆ ಆಮದಾಗುವ ಶಸ್ತ್ರಾಸ್ತ್ರ ಪ್ರಮಾಣದಲ್ಲಿ ಶೇ.24ರಷ್ಟು ಹೆಚ್ಚಳವಾಗಿದೆ.

 ಭಾರತಕ್ಕೆ ಆಮದಾಗುವ ಶಸ್ತ್ರಾಸ್ತ್ರಗಳಲ್ಲಿ ಶೇ.62ರಷ್ಟನ್ನು ರಶ್ಯಾ ಪೂರೈಸುತ್ತಿದ್ದರೆ, ಅಮೆರಿಕ ದ್ವಿತೀಯ ಸ್ಥಾನದಲ್ಲಿದ್ದು ಶೇ.15ರಷ್ಟು , ಮೂರನೇ ಸ್ಥಾನದಲ್ಲಿರುವ ಇಸ್ರೇಲ್ ಶೇ.11ರಷ್ಟು ಶಸ್ತ್ರಾಸ್ತ್ರ ಪೂರೈಸುತ್ತಿದೆ. ಚೀನಾವು ವಿಶ್ವದ ಐದನೇ ಪ್ರಮುಖ ಶಸ್ತ್ರಾಸ್ತ್ರ ರಫ್ತು ಮಾಡುವ ರಾಷ್ಟ್ರವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X