Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.20ರಂದು ಕರಾವಳಿ ಜಿಲ್ಲೆಗಳಿಗೆ ರಾಹುಲ್...

ಮಾ.20ರಂದು ಕರಾವಳಿ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ: ಕಾಂಗ್ರೆಸ್ ನಾಯಕರೊಂದಿಗೆ ಆಸ್ಕರ್ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ12 March 2018 9:36 PM IST
share

ಉಡುಪಿ, ಮಾ.12: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾ. 20ರಂದು ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಸಂಬಂಧಕಾರ್ಯಕ್ರಮಗಳ ರೂಪುರೇಷೆಯ ಬಗ್ಗೆ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.

ರಾಹುಲ್ ಗಾಂಧಿ ಅವರು ಮಾ.20ರ ಮಂಗಳವಾರ ಕಾರವಾರದಿಂದ ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ಕಾಪುವಿನಲ್ಲಿ ಕೆಲವು ಕಾರ್ಯ ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಿಗೆ ಆಗಮಿಸಲಿದ್ದು ಕಾಪು, ಪಡುಬಿದ್ರೆ, ಮುಲ್ಕಿ, ಸುರತ್ಕಲ್ ರಸ್ತೆಯಾಗಿ ರೋಡ್ ಶೋನಲ್ಲಿ ಪಾಲ್ಗೊಂಡು ಸಂಜೆ ಮಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿ ಸಲಿದ್ದಾರೆ.

ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬ್ಲಾಕ್ ಅಧ್ಯಕ್ಷರುಗಳು ಮುತುವರ್ಜಿ ವಹಿಸುವಂತೆ ಆಸ್ಕರ್ ಫೆರ್ನಾಂಡಿಸ್ ಸೂಚಿಸಿದರು. ಸಮಾವೇಶಕ್ಕೆ ಲಕ್ಷಕ್ಕೂ ಅಧಿಕ ಕಾರ್ಯಕರ್ತರನ್ನು ನಿರೀಕ್ಷಿಸಲಾಗಿದೆ ಎಂದರು.

ರಾಹುಲ್ ಗಾಂಧಿ ಕಾಪು ಭೇಟಿ ಸಮಯ ಎರ್ಮಾಳ್‌ನಲ್ಲಿರುವ ರಾಜೀವ್ ಗಾಂಧಿ ನೇಶನಲ್ ಅಕಾಡಮಿ ಆಫ್ ಪೊಲಿಟಿಕಲ್ ಎಜ್ಯುಕೇಶನ್ ಸಂಕೀರ್ಣದ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ಕಾಂಗ್ರೆಸ್ ಸೇವಾದಳದ ಕಾರ್ಯಕರ್ತ ರು ಹಾಗೂ ಪಕ್ಷದ ಮುಖಂಡರೊಡನೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅನಂತರ ಸಾವಿರಾರು ಕಾರ್ಯಕರ್ತರೊಂದಿಗೆ ಪಡುಬಿದ್ರೆ ರಾಷ್ಟ್ರಿಯ ಹೆದ್ದಾರಿಯಲ್ಲಿ ನಡೆಯುವ ರೋಡ್ ಶೋದಲ್ಲಿ ಭಾಗವಹಿಸಿ, ಸಂಜೆ 6:00ಕ್ಕೆ ಮಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ತೆರಳಲಿದ್ದಾರೆ. ಅದಕ್ಕೆ ಮೊದಲು ಮುಲ್ಕಿ, ಸುರತ್ಕಲ್‌ಗಳಲ್ಲೂ ರೋಡ್‌ಶೋನಲ್ಲಿ ಭಾಗವಹಿಸುವ ಕಾರ್ಯಕ್ರಮ ವಿದೆ.

ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಕೆ. ಗೋಪಾಲ ಪೂಜಾರಿ, ಮಾಜಿ ಸಚಿವ, ಶಾಸಕ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್. ಸಭಾಪತಿ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಸೇವಾದಳದ ಅಧ್ಯಕ್ಷ ಅಶೊಕ್ ಕುಮಾರ್ ಕೊಡವೂರು, ಬ್ಲಾಕ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆ, ಶಂಕರ್ ಕುಂದರ್, ನವೀನ್‌ಚಂದ್ರ ಶೆಟ್ಟಿ, ಸುಧಾಕರ ಕೋಟ್ಯಾನ್, ಸುಧೀರ್ ಹೆಗ್ಡೆ, ಮಲ್ಯಾಡಿ ಶಿವರಾಮ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ವಕ್ತಾರ ಭಾಸ್ಕರ್‌ರಾವ್ ಕಿದಿಯೂರು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಲೆವೂರು ಹರೀಶ್ ಕಿಣಿ, ಜಿಲ್ಲಾ ಪ್ರಚಾರ ಸಮಿತಿ ಸಂಚಾಲಕ ಕೃಷ್ಣಮೂರ್ತಿ ಕಾರ್ಕಳ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ, ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್‌ನ ಕಾರ್ಯದರ್ಶಿ ಕಿರಣ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದಶಿ ರ್ ಬಿ.ನರಸಿಂಹ ಮೂರ್ತಿ ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X