Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ...

ಸೊರಬ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 March 2018 10:36 PM IST
share
ಸೊರಬ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆ

ಸೊರಬ,ಮಾ.12: ಬಗರ್ ಹುಕುಂ ಅವ್ಯವಹಾರದಲ್ಲಿ ಭಾಗಿಯಾಗಿರುವ ತಹಶೀಲ್ದಾರ್ ರವರು ಇನ್ನು ಕೇವಲ 40ರಿಂದ 50 ದಿನಗಳಲ್ಲಿ ಅಮಾನತುಗೊಳ್ಳಲಿದ್ದು, ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕಾಗಿ ಬಂದಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ಮಾಜಿ ಸಚಿವ ಎಚ್. ಹಾಲಪ್ಪ ವಿಷಾದ ವ್ಯಕ್ತಪಡಿಸಿದರು. 

ತಾಲೂಕಿನ ಹಳೇಸೊರಬ ಪಂಚಾಯತ್ ಮುಂಭಾಗದಿಂದ ಪಟ್ಟಣದ ಮುಖ್ಯರಸ್ತೆಯ ಮೂಲಕ ರಾಜ್ಯ ಸರ್ಕಾರ ಮತ್ತು ಶಾಸಕರ ದುರಾಡಳಿತ ವಿರೋಧಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಬೈಕ್‍ ರ್ಯಾಲಿ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. 

ಬಗರ್ ಹುಕುಂ ಸದಸ್ಯರು ಈ ಹಿಂದೆ ಹೇಗಿದ್ದರು ಎಂದು ಎಲ್ಲರಿಗೂ ತಿಳಿದಿದೆ. ಈಗ ಅವರು ಬಳಸುವ ಕಾರು ಮತ್ತು ನೆರೆಯ ತಾಲೂಕುಗಳಲ್ಲಿ ಬೃಹತ್ ಹೊಟೇಲ್‍ಗಳಲ್ಲಿ ನಡೆಸುತ್ತಿರುವ ವೈಭವೀಕೃತ ಜೀವನ ಶೈಲಿ ಇದಕ್ಕೆಲ್ಲಾ ಬಗರ್ ಹುಕುಂ ಹೆಸರಿನಲ್ಲಿ ಲೂಟಿ ಹೊಡೆದ ಹಣವೇ ಮುಖ್ಯ ಕಾರಣವಾಗಿದೆ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ತಹಶೀಲ್ದಾರ್ ರವರೇ ನೇರ ಹೊಣೆಯಾಗಲಿದ್ದಾರೆ ಎಂದರು.  

ಹಿಂದಿನ ಸರ್ಕಾರದಲ್ಲಿ ಮಂಜೂರಾಗಿದ್ದ ಕಾಮಗಾರಿಗಳನ್ನೇ ಉದ್ಘಾಟಿಸುತ್ತಿರುವ ಶಾಸಕರು ತಮ್ಮ ಶಾಸಕತ್ವದ ಕೊನೆಯ ದಿನಗಳನ್ನು ಎಣಿಸುತ್ತಿದ್ದು, ಮುಂದಾಗಲಿರುವ ಶಾಸಕರು ಈ ಕಾಮಗಾರಿಗಳನ್ನು ಪೂರ್ಣಗೋಳಿಸಬೇಕಾಗಿದೆ. ಕೇಂದ್ರ ಸರ್ಕಾರದ ಎಸ್‍ಆರ್‍ಎಪ್ ಯೋಜನೆಯನ್ವಯ ರೂ 5 ಕೋಟಿ ಯಲ್ಲಿ ಉಳವಿ ರಸ್ತೆಯ ಕೆಲಸ ನಡೆಯುತ್ತಿದೆ. ಆ ರಸ್ತೆಗೂ ಸಹ ರಾಜ್ಯ ಸರ್ಕಾರದಿಂದ ರೂ.6 ಲಕ್ಷಗಳನ್ನು ನಿರ್ವಹಣೆಗಾಗಿ ಮಂಜೂರಾಗಿದೆ ಎಂದು ಹೇಳುತ್ತಿದ್ದು, ಆ ಹಣ ಏನಾಗಬಹುದೆಂದು ನೀವೇ ಯೋಚಿಸಿ ಎಂದ ಅವರು ಎಲ್ಲಾ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆಪಾದಿಸಿದರು.

ಮಾಜಿ ಸಚಿವ ಕುಮಾರ್‍ಬಂಗಾರಪ್ಪ ಮಾತನಾಡಿ, ಬಗರ್ ಹುಕುಂ ನಿಂದ ಲೂಟಿ ಹೊಡೆದ ಹಣದಲ್ಲಿ ತಾಲೂಕಿನ ಶಾಸಕರೂ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಪಾಲುದಾರರಾಗಿದ್ದಾರೆ. ಜಿಲ್ಲೆಯವರಲ್ಲದ ಹೊರಗಿನ ವ್ಯಕ್ತಿಗಳಿಗೂ ಬಗರ್ ಹುಕುಂ ಭೂಮಿ ಮಂಜೂರಾಗಿದ್ದು, ಭ್ರಷ್ಟಾಚರವನ್ನು ವಿರೋಧಿಸುವ ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಪಿಡಬ್ಲ್ಯೂಡಿ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಕಮಿಷನ್ ಎಚೆಂಟ್‍ರನ್ನು ನೇಮಿಸಿಕೊಂಡಿರುವ ಇವರು ಕೃಷಿ ಇಲಾಖೆಯಲ್ಲಿ ಮಾರಾಟವಾಗುವ ಟಾರ್ಪಲ್‍ಗಳಲ್ಲಿಯೂ ಕಮಿಷನ್ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. 

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಆಡಳಿತವು ಜನತೆಯ ಸರ್ವಾಂಗೀಣ ಅಧೋಗತಿಗೆ ಕಾರಣವಾಗಿದ್ದು, ರಾಜ್ಯದಲ್ಲಿ ಅರಾಜಕತೆ ತಾಂಡವಾಡುತ್ತಿದೆ. ದಕ್ಷ ಪ್ರಾಮಾಣಿಕ ಅಧಿಕಾರಿಗಳು ಅತ್ಮಹತ್ಯೆಗೆ ಶರಣಾಗುತ್ತಿದ್ದರೆ. ಕೆಲವರು ಸ್ವಯಂ ನಿವೃತ್ತಿ ಪಡೆಯುತ್ತಿರುವುದು ರಾಜ್ಯದ ದುರ್ದೈವವಾಗಿದೆ. ಹಿಂದೂ ಕಾರ್ಯಕರ್ತರ ಹತ್ಯೆ ಹೆಚ್ಚಾಗಿದ್ದು, ಇದಕ್ಕೆಲ್ಲ ನೇರವಾಗಿ ಸರ್ಕಾರದ ಮಂತ್ರಿಗಳು ಮತ್ತು ಕಾಂಗ್ರೇಸ್ ಪಕ್ಷದ ರಾಜಕಾರಣಿಗಳೇ ಕಾರಣರಾಗಿದ್ದಾರೆ. 

ಕುಸಿದ ಕಾನೂನು ವ್ಯವಸ್ಥೆ, ಸರ್ಕಾರಿ ಅಧಿಕಾರಿಗಳಿಗೆ ಅಭದ್ರತೆ ಮತ್ತು ಅಪರಾಧ ತನಿಖೆಯಲ್ಲಿ ರಾಜಕೀಯ ಹಸ್ತಕ್ಷೇಪದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಲು ರಾಜ್ಯದಲ್ಲಿ ಸೂಕ್ತ ವಾತಾವರಣ ಇಲ್ಲ ಎಂದು ಐಪಿಎಸ್ ಅಧಿಕಾರಿಗಳ ಅಸೋಸಿಯೇಷನ್ (ಕರ್ನಾಟಕ) ಸಂಘವು ಆರೋಪಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ಪತ್ರವೇ ಸರ್ಕಾರದ ಅರಾಜಕತೆಯ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ತಾಲೂಕಿನಲ್ಲಿ ಬಗರ್ ಹುಕುಂ ಹೆಸರಿನಲ್ಲಿ ಶಾಸಕರು ದಂಧೆ ಪ್ರಾರಂಭಿಸಿದ್ದು, ಕೆಲ ಹಿಂಬಾಲಕರು ಹಣಗಳಿಸುವ ಏಕಮಾತ್ರ ದಂಧೆಯನ್ನಾಗಿಸಿಕೊಂಡಿದ್ದಾರೆ. ಬಗರ್ ಹುಕುಂನ ಭ್ರಷ್ಟಾಚಾರದಲ್ಲಿ ಈಗಾಗಲೆ ಇಬ್ಬರು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಂದ ಅಮಾನತ್ತುಗೊಂಡಿದಾರೆ. ಶಾಸಕರು ಅಧಿಕಾರಿಗಳನ್ನು ತಮ್ಮ ವ್ಯವಹಾರಕ್ಕೆ ಬಳಸಿಕೊಂಡಿದ್ದು ಈ ಪ್ರಕರಣಕ್ಕೆ ಸಾಕ್ಷಿಯಾಗಿದೆ. ತಾಲೂಕಿನಲ್ಲಿ ಮಂಜೂರಾಗಿರುವ ನೀರಾವರಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳು ಅನುಷ್ಟಾನಗೊಂಡಿಲ್ಲ. ರೈತರು ತಮ್ಮ ಕೃಷಿ ಜಮೀನಿನಲ್ಲಿ ಸಮರ್ಪಕವಾಗಿ ಬೆಳೆಗಳನ್ನು ಬೆಳೆಯಲು ವಿದ್ಯುತ್ ಕೊರತೆಯಿಂದಾಗಿ ಪರದಾಡುವಂತಾಗಿದ್ದು, ವಿದ್ಯುತ್ ಸರಿಪಡಿಸಿ ಸೂಕ್ತ ನಿರ್ವಹಣೆ ಕೈಗೊಳ್ಳುವಂತೆ ಇಲಾಖೆಗೆ ನಿರ್ದೇಶನ ನೀಡಬೇಕು. ತಾಲೂಕಿನ ಆಡಳಿತ ಸಂಪೂರ್ಣ ನಿಷ್ಕ್ರೀಯಗೊಂಡಿದ್ದು, ಸರ್ಕಾರಿ ಕಛೇರಿಗಳಲ್ಲಿ ಜನತೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಉಪಯೋಗ ದೊರೆಯುವಂತೆ ಆಡಳಿತಕ್ಕೆ ಸೂಕ್ತ ಸಲಹೆ ಮತ್ತು ನಿರ್ದೇಶನ ನೀಡಬೆಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಎ.ಎಲ್.ಅರವಿಂದ, ನಿರಂಜನ್ ಕುಪ್ಪಗಡೆ, ಗೀತಾಮಲ್ಲಿಕಾರ್ಜುನ್,  ಗಜಾನನರಾವ್ ಉಳವಿ, ಡಿ.ಶಿವಯೋಗಿ, ಎಂ.ಡಿ.ಉಮೇಶ್, ಮಹೇಶ್ ಗೌಳಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X