ಮಂಡ್ಯ: ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ

ಮಂಡ್ಯ, ಮಾ.12: ನಗರದ ಲೋಕೋಪಯೋಗಿ ಕಛೇರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಸೋಮವಾರ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಂಡವು.
ಲೋಕಾರ್ಪಣೆಗೊಳಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ನಗರದಲ್ಲಿ ಎರಡು ಇಂದಿರಾ ಕ್ಯಾಂಟಿನ್ ಲೋಕಾರ್ಪಣೆಗೊಂಡಿವೆ. ಕೆಲವೇ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲೂ ಕ್ಯಾಂಟೀನ್ ತೆರೆಯಲಾಗುವುದು ಎಂದರು.
ಕೈ ಗೆಟ್ಟುಕುವ ದರದಲ್ಲಿ ಹಸಿದವರಿಗೆ ತೃಪ್ತಿದಾಯಕ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಲಭ್ಯವಿರುತ್ತದೆ. ಒಂದು ಹೊತ್ತಿಗೆ ಒಟ್ಟು 500 ಮಂದಿಗೆ ಉಪಹಾರ, ಊಟ ಸಿಗಲಿದ್ದು, ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಹೇಳಿದರು.
ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೆಗೌಡ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಪಂ ಸಿಇಓ ಬಿ.ಶರತ್ ಹಾಗೂ ಇತರೆ ಗಣ್ಯರು ಹಾಜರಿದ್ದರು.
Next Story





