ಅಯೋಧ್ಯೆ ವಿವಾದ : 32 ಮಧ್ಯಂತರ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಹೊಸದಿಲ್ಲಿ, ಮಾ.14: ಅಯೋಧ್ಯೆಯ ಬಾಬರಿ ಮಸೀದಿ- ರಾಮಮಂದಿರ ವಿವಾದದಲ್ಲಿ ಮಧ್ಯಪ್ರವೇಶಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ 32 ಮಧ್ಯಂತರ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ವಿವಾದಕ್ಕೆ ಸಂಬಂಧಿ ಮೂಲಪಕ್ಷಗಳು ಮಾತ್ರ ವಾದ ಮಂಡಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಸ್.ಎ.ನಝೀಬ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ. ಈ ವಿವಾದದಲ್ಲಿ ಮಧ್ಯಪ್ರವೇಶಿಸಲು ಅನುಮತಿ ಕೋರಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಲಯ ತಳ್ಳಿಹಾಕಿದೆ.
ಆದರೆ, ಅಯೋಧ್ಯೆಯ ವಿವಾದಿತ ಸ್ಥಳದಲ್ಲಿರುವ ರಾಮಮಂದಿರದಲ್ಲಿ ಪೂಜೆ ಸಲ್ಲಿಸುವುದು ತನ್ನ ಮೂಲಭೂತ ಹಕ್ಕು ಆಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವಂತೆ ನ್ಯಾಯಾಲಯಆದೇಶಿಸಿದೆ.
Next Story