ನ್ಯಾ. ಲೋಯಾ ಸಾವಿನ ಪ್ರಕರಣ : ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಹೊಸದಿಲ್ಲಿ, ಮಾ.16: ವಿಶೇಷ ಸಿಬಿಐ ನ್ಯಾಯಾಧೀಶ ಬಿ.ಎಚ್.ಲೋಯಾ ಅವರ ಸಾವಿನ ನಿಗೂಢತೆಯನ್ನು ಬೇಧಿಸಲು ಸ್ವತಂತ್ರ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾದಿರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ವಾದ-ವಿವಾದವನ್ನು ಆಲಿಸಿದ ಬಳಿಕ ತನ್ನ ತೀರ್ಪನ್ನು ಕಾದಿರಿಸಿದೆ.
ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಎ.ಎಚ್.ಲೋಯಾ ಸಹೋದ್ಯೋಗಿಯ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ನಾಗ್ಪುರಕ್ಕೆ ತೆರಳಿದ್ದಾಗ 2014ರ ಡಿ.1ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಲೋಯಾ ಸಾವಿನ ಬಗ್ಗೆ ಕುಟುಂಬದವರು ಸಂಶಯ ವ್ಯಕ್ತಪಡಿಸಿದ್ದರು.
Next Story