Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್‍ಲೈನ್ ಖರೀದಿ ಬಗ್ಗೆ ಎಚ್ಚರಿಕೆ...

ಆನ್‍ಲೈನ್ ಖರೀದಿ ಬಗ್ಗೆ ಎಚ್ಚರಿಕೆ ಅಗತ್ಯ: ಶಾಸಕ ರಫೀಕ್ ಅಹಮದ್

ವಾರ್ತಾಭಾರತಿವಾರ್ತಾಭಾರತಿ16 March 2018 8:06 PM IST
share
ಆನ್‍ಲೈನ್ ಖರೀದಿ ಬಗ್ಗೆ ಎಚ್ಚರಿಕೆ ಅಗತ್ಯ: ಶಾಸಕ ರಫೀಕ್ ಅಹಮದ್

ತುಮಕೂರು,ಮಾ.16: ಡಿಜಿಟಲ್ ಮಾರುಕಟ್ಟೆ ವಿಸ್ತೀರ್ಣಗೊಂಡಿದ್ದು, ಆನ್‍ಲೈನ್ ಮೂಲಕ ವಸ್ತುಗಳನ್ನು ಖರೀದಿಸುವ ಗ್ರಾಹಕರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ ಎಂದು ಶಾಸಕ ಡಾ.ರಫೀಕ್ ಅಹಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದಗಂಗಾ ಮಹಿಳಾ ಕಾಲೇಜಿನಲ್ಲಿಂದು ಜಿಲ್ಲಾಡಳಿತ, ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 'ವಿಶ್ವ ಗ್ರಾಹಕರ ದಿನಾಚರಣೆ'ಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ತಂತ್ರಜ್ಞಾನಗಳು ಹೆಚ್ಚಾದಂತೆ ಗ್ರಾಹಕರನ್ನು ಗೌರವದಿಂದ ಕಾಣುವ ಸಂಸ್ಕೃತಿ ಕಣ್ಮರೆಯಾಗಿದೆ. ಕಾಲಕಾಲಕ್ಕೆ ಬದಲಾಗುವ ಗ್ರಾಹಕರ ನಿಯಮಗಳ ಬಗ್ಗೆ ಗ್ರಾಹಕರಲ್ಲಿ ಅರಿವು ಇರಬೇಕು. ಎಲ್ಲ ಕಾಲದಲ್ಲಿಯೂ ಗ್ರಾಹಕರಿಗೆ ಮೋಸವಾಗುತ್ತಲೇ ಇದೆ ಎಂದರು.

ತೂಕದ ಉಪಕರಣಗಳು ಎಷ್ಟೇ ಬದಲಾವಣೆಯಾದರು ಅವುಗಳನ್ನು ತಯಾರಿಸುವುದು ಮನುಷ್ಯರೇ. ಹಾಗಾಗಿ ದೋಷಗಳು ಸಾಮಾನ್ಯ ಅಧಿಕಾರಿಗಳು ನಿಯಮಿತವಾಗಿ ಅಂಗಡಿಗಳ ಮೇಲೆ ದಾಳಿ ನಡೆಸಿ ಮಾಲೀಕರಿಗೆ ದಂಡ ವಿಧಿಸುವ ಮೂಲಕ ನ್ಯಾಯೋಚಿತ ವ್ಯಾಪಾರದ ಮೂಲಕ ಗ್ರಾಹಕರಿಗೆ ನ್ಯಾಯವನ್ನು ಒದಗಿಸುತ್ತಿದ್ದಾರೆ. ಆನ್‍ಲೈನ್ ಮಾರುಕಟ್ಟೆ ಯಶಸ್ವಿಯಾಗಿದ್ದು, ಗ್ರಾಹಕರು ಸ್ಥಳದಲ್ಲಿಯೇ ಕುಳಿತು ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಉಳಿತಾಯಕ್ಕಾಗಿ ಆನ್ಲೈನ್ ಖರೀದಿ ಕಡೆ ಮಾರು ಹೋಗಿ, ಮೋಸಕ್ಕೆ ಒಳಗಾಗುತ್ತಿದ್ದಾರೆ. ಗ್ರಾಹಕರು ಆನ್‍ಲೈನ್ ವಹಿವಾಟು ನಡೆಸುವಾಗ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರು ಹಾಗೂ ನ್ಯಾಯಾಧೀಶರಾದ ಆರ್.ಕೆ.ಪ್ರತಿಭ ಮಾತನಾಡಿ, ಗ್ರಾಹಕರು ಆನ್‍ಲೈನ್ ಮಾರುಕಟ್ಟೆಯಿಂದ ಹೆಚ್ಚಾಗಿ ಮೋಸಕ್ಕೆ ಒಳಗಾಗುತ್ತಿದ್ದಾರೆ. ಆನ್‍ಲೈನ್ ಮೂಲಕ ಖರೀದಿಸುವಾಗ ಗ್ರಾಹಕರು ಕಂಪನಿಗಳ ವಿಳಾಸವನ್ನು ಗಮದಲ್ಲಿಟ್ಟುಕೊಳ್ಳಬೇಕು. ವಿಳಾಸವೇ ಇಲ್ಲದ ಕಂಪನಿಗಳ ವಸ್ತುಗಳನ್ನು ಖರೀದಿಸಿ ಮೋಸಕ್ಕೆ ಒಳಗಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆನ್‍ಲೈನ್ ಮಾರುಕಟ್ಟೆ ವಿಸ್ತೀರ್ಣಗೊಳ್ಳುತ್ತಿರುವುದರೊಂದಿಗೆ ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಕಾನೂನಿನಲ್ಲಿಯೂ ಬದಲಾವಣೆ ಆಗಬೇಕಿದೆ. ವಿದ್ಯಾರ್ಥಿಗಳೇ ಹೆಚ್ಚಾಗಿ ಆನ್‍ಲೈನ್ ಮಾರುಕಟ್ಟೆ ಗ್ರಾಹಕರಾಗಿದ್ದು, ಆನ್‍ಲೈನ್‍ನಲ್ಲಿ ವ್ಯವಹರಿಸ ಬೇಕಾದರೆ ಎಚ್ಚರಿಕೆ ವಹಿಸದೇ ಹೋದರೆ ಮೋಸ ಹೋಗಬೇಕಾಗುತ್ತದೆ. ಗ್ರಾಹಕರು ತಮ್ಮ ಹಕ್ಕು ಚಲಾಯಿಸುವ ಮೂಲಕ ಹಕ್ಕನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಂಟೇಸ್ವಾಮಿ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎಂ.ಗುರುಪ್ರಸಾದ್, ಸಿದ್ದಗಂಗಾ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಿ.ಎನ್.ಯೋಗೀಶ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಸಿ.ಜಯಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X