ಜೆಡಿಎಸ್ ಬಂಡಾಯ ಶಾಸಕರಿಗೆ ಸ್ಪೀಕರ್ ನೋಟಿಸ್

ಬೆಂಗಳೂರು, ಮಾ.16: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಜೆಡಿಎಸ್ ಪಕ್ಷದ 7 ಮಂದಿ ಬಂಡಾಯ ಶಾಸಕರ ಸದಸ್ಯತ್ವ ಅನರ್ಹಗೊಳಿಸುವಂತೆ ಕೋರಿ ಶಾಸಕರಾದ ಸಿ.ಎನ್.ಬಾಲಕೃಷ್ಣ ಹಾಗೂ ಬಿ.ಬಿ.ನಿಂಗಯ್ಯ ಸಲ್ಲಿಸಿರುವ ದೂರಿನ ಮುಂದುವರೆದ ವಿಚಾರಣೆಗೆ ಮಾ.19ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಗೆ ಹಾಜರಾಗುವಂತೆ ಅರೆ ನ್ಯಾಯಿಕ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರಾದ ಸಿ.ಎನ್.ಬಾಲಕೃಷ್ಣ ಹಾಗೂ ಬಿ.ಬಿ.ನಿಂಗಯ್ಯ ಮತ್ತು ಬಿ.ಝೆಡ್.ಝಮೀರ್‌ಅಹ್ಮದ್‌ಖಾನ್, ಎನ್.ಚಲುವರಾಯಸ್ವಾಮಿ, ಎ.ಬಿ.ರಮೇಶ ಬಂಡಿಸಿದ್ದೇಗೌಡ, ಎಚ್.ಸಿ.ಬಾಲಕೃಷ್ಣ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಹಾಗೂ ಎಸ್.ಭೀಮಾನಾಯಕ್‌ಗೆ ಸ್ಪೀಕರ್ ಸೂಚನೆಯಂತೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ನೋಟಿಸ್ ಜಾರಿ ಮಾಡಿದ್ದಾರೆ.
Next Story





